ಕವಿತಾಳ ಪಟ್ಟಣದ ವಿವಿಧೆಡೆ 75ನೇ ಗಣರಾಜ್ಯೋತ್ಸವ

| Published : Jan 27 2024, 01:16 AM IST

ಸಾರಾಂಶ

ರಾಯಚೂರು ಜಿಲ್ಲೆಯ ಕವಿತಾಳ ಪಟ್ಟಣ ಪಂಚಾಯ್ತಿ ಕಚೇರಿಯಲ್ಲಿ 75ನೇ ಗಣರಾಜ್ಯೋತ್ಸವ ನಿಮಿತ್ತ ರಾಷ್ಟ್ರಧ್ವಜಾರೋಹಣ ನೆರವೇರಿಸಲಾಯಿತು.

ಕನ್ನಡಪ್ರಭ ವಾರ್ತೆ ಕವಿತಾಳ

ಪಟ್ಟಣದ ವಿವಿಧೆಡೆ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ 75ನೇ ಗಣರಾಜ್ಯೋತ್ಸವ ಶುಕ್ರವಾರ ಸಡಗರ ಸಂಭ್ರಮದಿಂದ ಆಚರಿಸಲಾಯಿತು, ಶಾಲಾ, ಕಾಲೇಜು, ಸಹಕಾರಿ ಸಂಘಗಳು, ಸರ್ಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.

ಇಲ್ಲಿನ ಪಪಂಯಲ್ಲಿ ಕಂದಾಯ ನಿರೀಕ್ಷಕ ಫಯಾಜ್ ಧ್ವಜಾರೋಹಣ ಮಾಡಿದರು. ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಕಿರಲಿಂಗಪ್ಪ, ಪಪಂ ಸದಸ್ಯರು, ಅಧಿಕಾರಿಗಳು, ಸಾರ್ವಜನಿಕರು ಇದ್ದರು.

ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ವೆಂಕಟೇಶ ಅರಕೇರಿ, ಬಾಲಕರ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್‌ಡಿಎಎಂಸಿ ಅಧ್ಯಕ್ಷ ಮೌನೇಶ ಕೊಡ್ಲಿ, ಕನ್ಯಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಬಲವಂತ ಯಾದವ ಮತ್ತು ಅಂಬೇಡ್ಕರ್ ನಗರದ ಸರ್ಕಾರಿ ಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷೆ ಈರಮ್ಮ ಯಾಕೂಬ ಕಡತಲ್ ಧ್ವಜಾರೋಹಣ ಮಾಡಿದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಚಾರ್ಯರಾದ ಶಕುಂತಲಾ ಧ್ವಜಾರೋಹಣ ಮಾಡಿದರು.

ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ವೆಂಕಟೇಶ ನಾಯಕ ದ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಉತ್ತಮ ಸೇವೆಗಾಗಿ ಪಪಂ ಪೌರ ಕಾರ್ಮಿಕ ಮಹಿಳೆ ಸುಶೀಲಮ್ಮ ಮತ್ತು ಪರಸಾಪುರ ಸರ್ಕಾರಿ ಶಾಲೆಯಲ್ಲಿ ಸತತ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶಿಕ್ಷಕ ಸತ್ಯಪ್ಪ ಹೆಳವರ್ ಅವರನ್ನು ಪಿಎಸ್‌ಐ ವೆಂಕಟೇಶ ನಾಯಕ ಸನ್ಮಾನಿಸಿದರು.

ವಿವಿಧ ಸಹಕಾರಿ ಸಂಘಗಳು, ಸಮುದಾಯ ಆರೋಗ್ಯ ಕೇಂದ್ರ, ಸಮೀಪದ ವಟಗಲ್, ಹುಸೇನಪುರ, ಹಿರೇಹಣಿಗಿ ಸರ್ಕಾರಿ ಶಾಲೆಗಳಲ್ಲಿ ಧ್ವಜಾರೋಹಣ ನಡೆಯಿತು.

ಮಲ್ಲದಗುಡ್ಡದಲ್ಲಿ ಗಣರಾಜ್ಯೋತ್ಸವ

ಕವಿತಾಳ: 75ನೇ ಗಣರಾಜ್ಯೋತ್ಸವ ಸಮಾರಂಭದ ಅಂಗವಾಗಿ ಸಮೀಪದ ಮಲ್ಲದಗುಡ್ಡ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪ್ರಸಕ್ತ ಸಾಲಿನಲ್ಲಿ ಹತ್ತನೇ ತರಗತಿಯಲ್ಲಿ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದ ನಾಲ್ಕು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕವಿತಾಳ ಪಟ್ಟಣದ ಸುರೇಶ್ ಪತ್ತಾರ್ ಅವರು ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಪುಸ್ತಕಗಳನ್ನು ನೀಡಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶಂಕ್ರಪ್ಪ ಪ್ರಾಸ್ತಾವಿಕ ಮಾತನಾಡಿದರು. ಆರೂಢ ಅಯ್ಯಪ್ಪ ತಾತನವರು. ಸೇರಿ ಅನೇಕರು ಇದ್ದರು.