ಸಂವಿಧಾನಕ್ಕೆ ಬದ್ಧರಾಗಿ ಕೆಲಸ ಮಾಡೋಣ

| Published : Jan 27 2025, 12:45 AM IST

ಸಾರಾಂಶ

ಸಂವಿಧಾನ ನಮಗೇನು ಕೊಟ್ಟಿದೆ ಅದಕ್ಕೆ ಬದ್ಧರಾಗಿ, ನಮ್ಮ ಹಕ್ಕುಗಳನ್ನು ಚಲಾಯಿಸಿಕೊಂಡು ಸಂವಿಧಾನದ ಆಶಯದಂತೆ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು

ಕನ್ನಡಪ್ರಭ ವಾರ್ತೆ ಮೈಸೂರು

ನಾವೆಲ್ಲರೂ ನಮ್ಮ ಸಂವಿಧಾನಕ್ಕೆ ಬದ್ಧರಾಗಿ ಕೆಲಸ ಮಾಡುವುದರ ಮೂಲಕ ನಮ್ಮ ನಿಗಮವನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯಬೇಕಿದೆ ಎಂದು ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮದ (ಸೆಸ್ಕ್‌) ವ್ಯವಸ್ಥಾಪಕ ನಿರ್ದೇಶಕಿ ಜಿ. ಶೀಲಾ ತಿಳಿಸಿದರು.

ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್‌ ಪ್ರಧಾನ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ 76ನೇ ಗಣರಾಜ್ಯೋತ್ಸವದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಈ ಸಂದರ್ಭದಲ್ಲಿ ನಮ್ಮ ಸಂವಿಧಾನ ರಚನೆಗಾಗಿ ಶ್ರಮಿಸಿದ ಎಲ್ಲರನ್ನೂ ನಾವು ಸ್ಮರಿಸಬೇಕಿದೆ. ಸಂವಿಧಾನ ನಮಗೇನು ಕೊಟ್ಟಿದೆ ಅದಕ್ಕೆ ಬದ್ಧರಾಗಿ, ನಮ್ಮ ಹಕ್ಕುಗಳನ್ನು ಚಲಾಯಿಸಿಕೊಂಡು ಸಂವಿಧಾನದ ಆಶಯದಂತೆ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಹೀಗಾಗಿ, ಸೆಸ್ಕ್ ಅಧಿಕಾರಿಗಳು, ಸಿಬ್ಬಂದಿ ಶ್ರದ್ಧೆಯಿಂದ ಕೆಲಸ ಮಾಡಬೇಕಿದೆ. ಆ ಮೂಲಕ ನಮ್ಮ ನಿಗಮವನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯಬೇಕಿದ್ದು, ಈ ನಿಟ್ಟಿನಲ್ಲಿ ನಾವೆಲ್ಲರೂ ನಮ್ಮ ಕರ್ತವ್ಯಗಳಲ್ಲಿ ಉತ್ತಮವಾಗಿ ತೊಡಗಿಸಿಕೊಂಡು ಕೆಲಸವನ್ನು ಮಾಡುತ್ತಾ, ನಿಗಮ ಏಳಿಗೆಗೆ ಕೈಜೋಡಿಸೋಣ ಎಂದು ಅವರು ಕರೆ ನೀಡಿದರು.

ಸೆಸ್ಕ್‌ ಜಾಗೃತ ದಳದ ಎಸ್ಪಿ ಸವಿತಾ ಹೂಗಾರ್‌, ತಾಂತ್ರಿಕ ವಿಭಾಗದ ನಿರ್ದೇಶಕ ಕೆ.ಎಂ. ಮುನಿಗೋಪಾಲರಾಜು, ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ಲಿಂಗರಾಜಮ್ಮ, ಬಿ.ಆರ್. ರೂಪಾ, ಮುಖ್ಯ ಆರ್ಥಿಕ ಅಧಿಕಾರಿ ಜಿ. ರೇಣುಕಾ ಮೊದಲಾದವರು ಇದ್ದರು.