ಡಾ.ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದ ಭಾರತದ ಪ್ರಜಾಪ್ರಭುತ್ವ ಸದೃಢವಾಗಿದೆ. ಸಂವಿಧಾನ, ಪ್ರಜಾಪ್ರಭುತ್ವ, ಮತದಾನ ಇವುಗಳ ಮೌಲ್ಯವನ್ನು ಭಾರತದ ಪ್ರತಿಯೊಬ್ಬ ಜನರು ತಿಳಿದುಕೊಳ್ಳಬೇಕೆಂದು ತಹಸೀಲ್ದಾರ್ ಕೆ.ಕೆ. ಕೃಷ್ಣಮೂರ್ತಿ ತಿಳಿಸಿದರು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಡಾ.ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದ ಭಾರತದ ಪ್ರಜಾಪ್ರಭುತ್ವ ಸದೃಢವಾಗಿದೆ. ಸಂವಿಧಾನ, ಪ್ರಜಾಪ್ರಭುತ್ವ, ಮತದಾನ ಇವುಗಳ ಮೌಲ್ಯವನ್ನು ಭಾರತದ ಪ್ರತಿಯೊಬ್ಬ ಜನರು ತಿಳಿದುಕೊಳ್ಳಬೇಕೆಂದು ತಹಸೀಲ್ದಾರ್ ಕೆ.ಕೆ. ಕೃಷ್ಣಮೂರ್ತಿ ತಿಳಿಸಿದರು. ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ 77ನೇ ಗಣರಾಜ್ಯೋತ್ಸವದ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಅವರು ಮಾತನಾಡಿದರು. ಸಾಕಷ್ಟು ಮಹನೀಯರು ದೇಶ ಸ್ವಾತಂತ್ರ್ಯಗಳಿಸಲು ತಮ್ಮ ಜೀವವನ್ನು ನೀಡಿದ್ದಾರೆ. ಅದನ್ನು ಉಳಿಸಿ ಬೆಳೆಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಪ್ರಜಾಪ್ರಭುತ್ವದಲ್ಲಿ ಸಂವಿಧಾನ ಮೌಲ್ಯ ಹಾಗೂ ಆಶಯಗಳನ್ನು ಗೌರವಿಸಿ, ಉಳಿಸಿ, ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಬೇಕು ಎಂದರು. ಜಾತಿ ಮತ ಪರಿಗಣನೆ ಮಾಡದೆ ಮತ ಚಲಾಯಿಸಿದರೆ ಮಾತ್ರ ಪ್ರಬುದ್ಧ ಭಾರತ ನಿರ್ಮಾಣ ಸಾಧ್ಯ. ಸಂವಿಧಾನ ವನ್ನು ಓಧಿ ಅರ್ಥ ಮಾಡಿಕೊಂಡು ಅದನ್ನು ಎಲ್ಲರೂ ಪಾಲಿಸಬೇಕು. ದೇಶದ ಸಂವಿಧಾನ ಸುಭದ್ರವಾಗಿದ್ದಷ್ಟು ನಾವು ನೆಮ್ಮದಿ ಜೀವನ ನಡೆಸಲು ಸಾಧ್ಯ ಎಂದರು.ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಕೃಷ್ಣಪ್ಪ ಮಾತನಾಡಿ, ದೇಶದಲ್ಲಿ ಸಂವಿಧಾನ ಇಲ್ಲದೆ, ಜೀವನ ನಡೆಸುವುದು ಕಷ್ಟ. ಹಿಂದೆ ದೇಶವನ್ನು ಆಳುತ್ತಿದ್ದ ರಾಜರ ಆಳ್ವಿಕೆಯಲ್ಲಿ ದೇಶಕ್ಕೆ ಯಾವುದೇ ಚೌಕಟ್ಟು ಇರಲಿಲ್ಲ. ಸಂವಿಧಾನ ರಚನೆಯಾದ ನಂತರ ಬಲಿಷ್ಠ, ಪ್ರಬುದ್ಧ ಭಾರತ ನಮ್ಮದಾಗಿದೆ ಎಂದರು.ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿ.ಎಸ್.ಗೀತಾ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ತಾಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷ ಜಿ.ಎಂ. ಕಾಂತರಾಜು, ಯೋಜನಾ ಪಾಧಿಕಾರದ ಅಧ್ಯಕ್ಷ ಕೆ.ಎಂ. ಆದಮ್, ಪೊಲೀಸ್ ಇನ್ಸ್ಪೆಕ್ಟರ್ ಮುದ್ದುಮಾದೇವ, ಆರ್‌ಎಫ್‌ಒ ಶೈಲೇಂದ್ರ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸತೀಶ್, ಸೋಮವಾರಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎ. ಆದಂ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸದಸ್ಯರಾದ ಬಿ.ಈ. ಜಯೇಂದ್ರ, ಜಾನಕಿ ವೆಂಕಟೇಶ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.ಸಭಾ ಕಾರ್ಯಕ್ರಮಕ್ಕೆ ಮೊದಲು ಪೊಲೀಸ್, ಜೈ ಜವಾನ್ ಮಾಜಿ ಸೈನಿಕರ ಸಂಘ, ಗೃಹರಕ್ಷಕ ದಳ, ಸ್ಕೌಟ್ಸ್ ಹಾಗೂ ಶಾಲಾ ವಿದ್ಯಾರ್ಥಿಗಳ ತಂಡದಿಂದ ಆಕರ್ಷಕ ಪಥ ಸಂಚಲನ ನಡೆಯಿತು.