ಸಾರಾಂಶ
ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯೋತ್ಸವದ ಶುಭಾಶಯವನ್ನು ತಿಳಿಸಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಿಜೆಪಿ ಜಿಲ್ಲಾ ಕಚೇರಿ ಬಳಿ ನೆರವೇರಿಸಲಾಯಿತು.ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯೋತ್ಸವದ ಶುಭಾಶಯವನ್ನು ತಿಳಿಸಿದರು.ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಉಪಾಧ್ಯಕ್ಷ ಪೆರಣಂಕಿಲ ಶ್ರೀಶ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಕುಂದರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಮಾಧ್ಯಮ ಪ್ರಮುಖರಾದ ಶ್ರೀನಿಧಿ ಹೆಗ್ಡೆ, ಗಿರೀಶ್ ಎಂ. ಅಂಚನ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ನಿಕಟಪೂರ್ವ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿಸೋಜ, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಕಾಮತ್, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ, ಉಡುಪಿ ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸರೋಜಾ ಶೆಣೈ, ನಗರಸಭಾ ಸದಸ್ಯರಾದ ಅಶೋಕ್ ನಾಯ್ಕ್, ಅನಿಟಾ ಬೆಲಿಂಡ ಡಿಸೋಜ, ಪ್ರಮುಖರಾದ ರಾಘವೇಂದ್ರ ಉಪ್ಪೂರು, ದಿನಕರ ಪೂಜಾರಿ, ಸಲೀಂ ಅಂಬಾಗಿಲು, ರತ್ನಾಕರ ದೇವಾಡಿಗ, ಶಿವರಾಮ ಕಾಡಿಮಾರ್, ಚಂದ್ರಶೇಖರ ಪ್ರಭು, ನಿತಿನ್ ಪೈ, ದೀಪಾ ಪೈ, ಶಾಂತಿ ಮನೋಜ್, ಯಶೋದಾ, ಕೈರುನ್ನೀಸಾ ಮತ್ತಿತರರು ಉಪಸ್ಥಿತರಿದ್ದರು.