ಜೆ.ಪಿ. ನಗರದ ಜೆಎಸ್ಎಸ್ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯ ಸಂಭ್ರಮ

| Published : Aug 19 2024, 12:52 AM IST

ಸಾರಾಂಶ

ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೊಷಕರು ಒಟ್ಟಾಗಿ ರಾಷ್ಟ್ರಗೀತೆಯನ್ನು ಹಾಡಿದರು.

ಕನ್ನಡಪ್ರಭ ವಾರ್ತೆ ಮೈಸೂರು

ಜೆ.ಪಿ. ನಗರದ ಜೆಎಸ್ಎಸ್ ಪಬ್ಲಿಕ್ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.ಮೇಜರ್ ಮಂಜುನಾಥ್, ಶಾಲೆಯ ಪ್ರಾಂಶುಪಾಲೆ ಕೆ. ಸ್ಮಿತಾ ಕುರುಪ್, ಉಪ ಪ್ರಾಂಶುಪಾಲೆ ಸುನೀತಾ ಅವರು ಧ್ವಜಾರೋಹಣ ನೆರವೇರಿಸಿದರು. ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೊಷಕರು ಒಟ್ಟಾಗಿ ರಾಷ್ಟ್ರಗೀತೆಯನ್ನು ಹಾಡಿದರು.ನಂತರ ಶಾಲೆಯ 4 ಗುಂಪುಗಳು ಹಾಗೂ ಎನ್.ಸಿ.ಸಿಯವರು ಪಥಸಂಚಲನ ನಡೆಸಿ ಅತಿಥಿಗಳಿಗೆ ಗೌರವವಂದನೆ ಸಲ್ಲಿಸಿದರು. ವಿದ್ಯಾರ್ಥಿನಿ ಹರ್ಷಿಕಾ ಅವರು, ವಿಕಸಿತ ಭಾರತ ಸ್ವಾತಂತ್ರ್ಯದ ಮಹತ್ವ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರ ಬಗ್ಗೆ ಭಾಷಣ ಮಾಡಿದರು. ಶಾಲೆಯ ವಿವಿಧ ತರಗತಿಯ ವಿದ್ಯಾರ್ಥಿಗಳು ದೇಶಭಕ್ತಿಯನ್ನು ಬಿಂಬಿಸುವ ವಿವಿಧ ಹಾಡುಗಳಿಗೆ ನೃತ್ಯ ಪ್ರದರ್ಶನ ಮಾಡುವ ಮೂಲಕ ಗೌರವ ಸಮರ್ಪಿಸಿದರು. ಶರಣ್ಯ ವಂದಿಸಿದರು. ಸಮರ್ಥ್, ಪ್ರತೀಕ್ಷಾ ನಿರೂಪಿಸಿದರು.