ಭದ್ರಾವತಿ ವಿವಿಧೆಡೆ 78ನೇ ಸ್ವಾತಂತ್ರ್ಯೋತ್ಸವ

| Published : Aug 16 2024, 12:56 AM IST

ಭದ್ರಾವತಿ ವಿವಿಧೆಡೆ 78ನೇ ಸ್ವಾತಂತ್ರ್ಯೋತ್ಸವ
Share this Article
  • FB
  • TW
  • Linkdin
  • Email

ಸಾರಾಂಶ

ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ತಾಲೂಕು ರಾಷ್ಟ್ರೀಯ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ 78ನೇ ಸ್ವಾತಂತ್ರ್ಯೋತ್ಸವದಲ್ಲಿ ಶಾಸಕ ಬಿ.ಕೆ.ಸಂಗಮೇಶ್ವರ್ ಪಥಸಂಚಲನದ ಗೌರವ ವಂದನೆ ಸ್ವೀಕರಿಸಿದರು.

ಕನ್ನಡಪ್ರಭ ವಾರ್ತೆ ಭದ್ರಾವತಿ

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಸೇರಿದಂತೆ ನಗರದ ವಿವಿಧೆಡೆ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಗುರುವಾರ ಸಂಭ್ರಮದಿಂದ ಜರುಗಿತು.

ಹಳೇನಗರದ ಕನಕಮಂಟಪ ಮೈದಾನದಲ್ಲಿ ತಾಲೂಕು ರಾಷ್ಟ್ರೀಯ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಕೆ.ಆರ್.ನಾಗರಾಜು ಧ್ವಜಾರೊಹಣ ನೆರವೇರಿಸಿದರು. ಶಾಸಕ ಬಿ.ಕೆ.ಸಂಗಮೇಶ್ವರ್ ಅಧ್ಯಕ್ಷತೆ ವಹಿಸಿದ್ದರು.

ಪ್ರಮುಖರಾದ ೫ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಎಸ್.ಮಣಿಶೇಖರ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಪೊಲೀಸ್ ಉಪಾಧೀಕ್ಷಕ ಕೆ.ಆರ್.ನಾಗರಾಜ್, ಆರ್‌ಎಎಫ್ ಕಮಾಂಡೆಂಟ್, ನಗರಸಭೆ ಸದಸ್ಯರಿದ್ದರು.

ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಪಥ ಸಂಚಲನದಲ್ಲಿ ಪೊಲೀಸ್, ಗೃಹ ರಕ್ಷಕ ದಳ, ಆರ್‌ಎಎಫ್, ಎನ್‌ಸಿಸಿ, ಸೇವಾದಳ ಹಾಗು ವಿವಿಧ ಶಾಲೆಗಳ ತಂಡಗಳು ಪಾಲ್ಗೊಂಡಿದ್ದವು.

ವಿಐಎಸ್‌ಎಲ್ ಕಾರ್ಖಾನೆ:

ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ನಡೆಯಿತು.

ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಧ್ವಜಾರೋಹಣ ನೆರವೇರಿಸಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶಿಶ್ ರೆಡ್ಡಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಚೆಸ್ ಕ್ರೀಡಾಪಟು ಎಂ. ಜತಿನ್ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಕಾರ್ಮಿಕರ ಒಕ್ಕೂಟ :

ಗಾಂಧಿನಗರದ ಅಖಿಲ ಕರ್ನಾಟಕ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕರ ಒಕ್ಕೂಟದ ವತಿಯಿಂದ ಭೂತನಗುಡಿ ವೃತ್ತ, ರಾಷ್ಟ್ರಕವಿ ಕುವೆಂಪು ಆಟೋ ನಿಲ್ದಾಣದ ಬಳಿ ವಿಶಿಷ್ಟವಾಗಿ ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ 78ನೇ ಸ್ವಾತಂತ್ರ್ಯೊತ್ಸವ ದಿನಾಚರಣೆ ನಡೆಯಿತು.

ಶ್ರೀ ಕ್ಷೇತ್ರ ಭದ್ರಗಿರಿ ಮುರುಗೇಶ್ ಸ್ವಾಮೀಜಿ ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿದ್ದರು. ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ಒಕ್ಕೂಟದ ಅಧ್ಯಕ್ಷ ತ್ಯಾಗರಾಜ್ಇನ್ನಿತರರಿದ್ದರು.

ನಗರಸಭೆ ಕಛೇರಿ:

ನಗರಸಭೆ ಆವರಣದಲ್ಲಿ ಆಯೋಜಿಸಲಾಗಿದ್ದ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಧ್ವಜಾರೋಹಣ ನೆರವೇರಿಸಿದರು. ಪೌರ ಸೇವಾ ನೌಕರರ ಸೇವಾ ಸಂಘದ ತಾಲೂಕು ಅಧ್ಯಕ್ಷ ಎಸ್. ಚೇತನ್‌ಕುಮಾರ್, ನಗರಸಭೆ ಕಂದಾಯಾಧಿಕಾರಿ ರಾಜ್‌ಕುಮಾರ್‌ ಹಾಗೂ ನಗರಸಭೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಪೌರಕಾರ್ಮಿಕರು ಉಪಸ್ಥಿತರಿದ್ದರು.

ಪ್ರಧಾನ ಅಂಚೆ ಕಛೇರಿ :

ನಗರದ ನ್ಯೂಟೌನ್ ವಿಐಎಸ್‌ಎಲ್ ಕಾರ್ಖಾನೆ ಸಮೀಪದಲ್ಲಿರುವ ಪ್ರಧಾನ ಅಂಚೆ ಕಛೇರಿಯಲ್ಲಿ ಆಯೋಜಿಸಲಾಗಿದ್ದ ೭೭ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಪೋಸ್ಟ್ ಮಾಸ್ಟರ್ ರಾಧಾ ಧ್ವಜಾರೋಹಣ ನೆರವೇರಿಸಿದರು.

ಸಂಘಟನೆ ಕಾರ್ಯದರ್ಶಿ ಆಶಾ ಕೆ.ಪ್ರಭು, ಪ್ರಮುಖರಾದ ತುಕಾರಾಂ, ಗೋವಿಂದ ರಾಜ್, ಮಹೇಂದ್ರ, ರಾಘವೇಂದ್ರ, ಎಚ್.ವಿ ರಾಜ್‌ಕುಮಾರ್, ಷಣ್ಮುಖಪ್ಪ, ಕೋಮಲ, ನೇತ್ರಾವತಿ, ಸುರೇಶ್ ಸೇರಿದಂತೆ ಅಂಚೆ ನೌಕರರು ಉಪಸ್ಥಿತರಿದ್ದರು.