ಕಮಿಷನರೇಟ್‌ ವ್ಯಾಪ್ತಿಯಲ್ಲಿ 79 ವಿದ್ಯಾರ್ಥಿಗಳು ಡ್ರಗ್ಸ್‌ ವ್ಯಸನಿಗಳು

| Published : Aug 19 2024, 12:46 AM IST

ಕಮಿಷನರೇಟ್‌ ವ್ಯಾಪ್ತಿಯಲ್ಲಿ 79 ವಿದ್ಯಾರ್ಥಿಗಳು ಡ್ರಗ್ಸ್‌ ವ್ಯಸನಿಗಳು
Share this Article
  • FB
  • TW
  • Linkdin
  • Email

ಸಾರಾಂಶ

ಹುಬ್ಬಳ್ಳಿ: ಹು-ಧಾ ಪೊಲೀಸ್ ಕಮಿಷನರೇಟ್‌ ಮತ್ತೆ ಮದ್ಯವ್ಯಸನಿಗಳ ಬೆನ್ನು ಹತ್ತಿದೆ. ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಭಾನುವಾರ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು, ಮಾದಕವಸ್ತು ಸೇವಿಸುವವರ ವಿರುದ್ಧ 38 ಪ್ರಕರಣಗಳನ್ನು ದಾಖಲಿಸಿದ್ದಾರೆ.

ಹುಬ್ಬಳ್ಳಿ: ಹು-ಧಾ ಪೊಲೀಸ್ ಕಮಿಷನರೇಟ್‌ ಮತ್ತೆ ಮದ್ಯವ್ಯಸನಿಗಳ ಬೆನ್ನು ಹತ್ತಿದೆ. ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಭಾನುವಾರ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು, ಮಾದಕವಸ್ತು ಸೇವಿಸುವವರ ವಿರುದ್ಧ 38 ಪ್ರಕರಣಗಳನ್ನು ದಾಖಲಿಸಿದ್ದಾರೆ.

ಒಟ್ಟು 354 ಮಾದಕ ವಸ್ತು ಬಳಕೆದಾರರನ್ನು ವಶಕ್ಕೆ ಪಡೆದು ಅವರನ್ನು ಹುಬ್ಬಳ್ಳಿಯ ಕಿಮ್ಸ್ ಮತ್ತು ಧಾರವಾಡದ ಡಿಮ್ಹಾನ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಅದರಲ್ಲಿ 156 ಜನ ಗಾಂಜಾ ಸೇವಿಸಿರುವುದು ಧೃಢಪಟ್ಟಿದೆ ಎಂದು ಡಿಸಿಪಿ ಮಹಾನಿಂಗ ನಂದಗಾವಿ ತಿಳಿಸಿದರು.

ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿರುವ 156 ಜನರಲ್ಲಿ 79 ಜನ ಅವಳಿ ನಗರದ ವಿವಿಧ ಶಾಲೆ ಹಾಗೂ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಾಗಿದ್ದಾರೆ. ಪ್ರತಿ ಸೋಮವಾರ ಶಾಲೆ-ಕಾಲೇಜುಗಳಲ್ಲಿ ಮಾದಕ ವಸ್ತು ಸೇವನೆಯ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ತಿಳಿಸಿದರು.

ಸದ್ಯ ಗಾಂಜಾ ಸೇವನೆ ಮಾಡುವವರ ಮೇಲೆ ಕಾರ್ಯಾಚರಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಡ್ರಗ್ ಪೆಡ್ಲರ್‌ಗಳನ್ನು ಗುರಿಯಾಗಿಸಿಕೊಂಡು ಕಾರ್ಯಾಚರಣೆ ನಡೆಸಲಾಗುವುದು ಎಂದರು.

ಹು-ಧಾ ಮಹಾ ನಗರವನ್ನು ಮಾದಕವಸ್ತು ಮುಕ್ತ ಮಾಡುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ಮೊದಲು ಗಾಂಜಾ ಮಾರಾಟ ಮಾಡುವವರ ವಿರುದ್ಧ ಮಾತ್ರ ಪ್ರಕರಣ ದಾಖಲಿಸಲಾಗುತ್ತಿತ್ತು. ಈಗ ಸೇವನೆ ಮಾಡುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿಂದೆ ಕಾರ್ಯಾಚರಣೆ ವೇಳೆ 506 ಜನ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿತ್ತು. 112 ಪ್ರಕರಣ ದಾಖಲಿಸಲಾಗಿತ್ತು ಎಂದರು.

ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟವರು, ಅವರ ಪಾಲಕ, ಪೋಷಕರನ್ನು ಹುಬ್ಬಳ್ಳಿಯ‌ ರಂಭಾಪುರಿ ಕಲ್ಯಾಣ ಮಂಟಪಕ್ಕೆ ಕರೆತಂದು ಅವರಿಗೆ ತಿಳಿವಳಿಕೆ ಮೂಡಿಸುವ ಕಾರ್ಯ ಕೈಗೊಳ್ಳಲಾಯಿತು. ಡಿಸಿಪಿ ರವೀಶ್ ಸಿ.ಆರ್., ಎಸಿಪಿ ಶಿವಪ್ರಕಾಶ್ ನಾಯ್ಕ್ ಹಾಗೂ ವಿವಿಧ ಠಾಣೆಗಳ ಇನ್‌ಸ್ಪೆಕ್ಟರ್‌ಗಳು, ಸಿಬ್ಬಂದಿ ವರ್ಗದವರು ಹಾಜರಿದ್ದರು.