ಶನಿವಾರಸಂತೆ: 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

| Published : Aug 17 2025, 03:29 AM IST

ಸಾರಾಂಶ

ಪಟ್ಟಣದ ವಿವಿಧ ಶಾಲಾ ಕಾಲೇಜುಗಳು ಸಂಘ ಸಂಸ್ಥೆಗಳು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಿದರು.

ಕನ್ನಡಪ್ರಭ ವಾರ್ತೆ ಶನಿವಾರಸಂತೆ

ಪಟ್ಟಣದ ವಿವಿಧ ಶಾಲಾ-ಕಾಲೇಜುಗಳು, ಸಂಘ-ಸಂಸ್ಥೆಗಳು 79ನೇ ಸ್ವಾತಂತ್ರ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಿದರು.

ಗ್ರಾ.ಪಂ.ಸೇರಿದಂತೆ ಪಟ್ಟಣದ ಸರ್ಕಾರಿ, ಖಾಸಗಿ ಶಾಲಾ ಕಾಲೇಜುಗಳಲ್ಲಿ ತಮ್ಮ ತಮ್ಮ ಶಿಕ್ಷಣ ಸಂಸ್ಥೆಗಳಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದರು. ಶನಿವಾರಸಂತೆ ನಿವೃತ್ತ ಸೈನಿಕರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಂಘದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಮಹೇಶ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ನಂತರ ಸಂಘದ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಕಾರ್ಯಕ್ರಮ ನಡೆಯಿತು. ಸಂಘದ ಸದಸ್ಯರು ನಿವೃತ್ತ ಸೈನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ವಿಘ್ನೇಶ್ವರ ಆಟೋ ಚಾಲಕ ಮತ್ತು ಮಾಲೀಕರ ಸಂಘದ ವತಿಯಿಂದ ಕೆಆರ್‍ಸಿ ವೃತ್ತದಲ್ಲಿ ನಡೆದ 79ನೇ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಶನಿವಾರಸಂತೆ ವೃತ್ತ ನಿರೀಕ್ಷಕ ಕೃಷ್ಣರಾಜ್ ಮತ್ತು ಗ್ರಾ.ಪಂ.ಸದಸ್ಯ ಆದಿತ್ಯ ಗೌಡ ಧ್ವಜಾರೋಹಣ ನೆರವೇರಿಸಿದರು . ಈ ಸಂದರ್ಭ ಪಟ್ಟಣದ ಆಟೋಗಳಿಗೆ ಸೀರಿಯಲ್ ನಂಬರ್ ಸ್ಟಿಕರ್ ಹಾಕಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಿಐ ಕೃಷ್ಣಕುಮಾರ್-ಆಟೋ ಚಾಲಕರು ಸಮವಸ್ತ್ರ ಧರಿಸುವ ಮೂಲಕ ಶಿಸ್ತು ನಿಯಮ ಕಾಪಾಡಿಕೊಳ್ಳಬೇಕು ಆಟೋಗಳಿಗೆ ದಾಖಲಾತಿ ಇಲ್ಲದವರು ದಾಖಲಾತಿಯನ್ನು ಮಾಡಿಸಿಕೊಳ್ಳಬೇಕು. ಆಟೋ ಚಾಲಕರು ಕಷ್ಟದಲ್ಲಿ ಇರುವವರಿಗೇ ಸಹಾಯ ಮಾಡುವ ಮನೋಭಾವನೆ ಬೆಳೆಸಿಕೊಳ್ಳುವಂತೆ ಮನವಿ ಮಾಡಿದರು.

ಗ್ರಾ.ಪಂ.ಸದಸ್ಯ ಆದಿತ್ಯ ಗೌಡ ಮಾತನಾಡಿದರು. ಆಟೋ ಚಾಲಕರ ಸಂಘದ ಅಧ್ಯಕ್ಷ ರವಿಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು, ಆಟೋ ಚಾಲಕರು ಪಾಲ್ಗೊಂಡಿದ್ದರು.