ಹೆಮ್ಮಾಡಿ ಜನತಾ ಪಿಯು ಕಾಲೇಜ್‌ನಲ್ಲಿ ೭೯ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

| Published : Aug 19 2025, 01:00 AM IST

ಹೆಮ್ಮಾಡಿ ಜನತಾ ಪಿಯು ಕಾಲೇಜ್‌ನಲ್ಲಿ ೭೯ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ಜನತಾ ಪಿಯು ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂ ಇಂಗ್ಲಿಷ್ ಮಿಡಿಯಂ ಸ್ಕೂಲ್ ಕಿರಿಮಂಜೇಶ್ವರ ಇವರ ಆಸರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಜನತಾ ವಿರಾಟ್ ಕಾರ್ಯಕ್ರಮ ನೆರವೇರಿತು.

ಕುಂದಾಪುರ: ಹಳ್ಳಿಯ ಎಲ್ಲ ಮಕ್ಕಳಿಗೂ ಶಿಕ್ಷಣ ಸಿಗಬೇಕು. ಆಗ ಮಾತ್ರ ಗಾಂಧಿ ಕಂಡ ಕನಸು ಸಾರ್ಥಕವಾಗುತ್ತದೆ. ಹಳ್ಳಿಯ ಪ್ರತಿ ಮಗು ಸಮಾಜದ ಮುಖ್ಯ ವಾಹಿನಿಗೆ ಬರಲು ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ವೀರಯೋಧರ ತ್ಯಾಗ, ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜನತಾ ಪಿಯು ಕಾಲೇಜು ಹೆಮ್ಮಾಡಿಯ ಪ್ರಾಂಶುಪಾಲ ಗಣೇಶ ಮೊಗವೀರ ಹೇಳಿದರು.

ಅವರು ಜನತಾ ಪಿಯು ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂ ಇಂಗ್ಲಿಷ್ ಮಿಡಿಯಂ ಸ್ಕೂಲ್ ಕಿರಿಮಂಜೇಶ್ವರ ಇವರ ಆಸರೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ - ಜನತಾ ವಿರಾಟ್ ಕಾರ್ಯಕ್ರಮದಲ್ಲಿ ಮಾತನಾಡಿದರು.ಬೆಳಗ್ಗೆ ಶ್ರೀ ವಿ.ವಿ.ವಿ. ಮಂಡಳಿಯ ಅಧ್ಯಕ್ಷ, ಮಾಜಿ ಶಾಸಕ ಗೋಪಾಲ ಪೂಜಾರಿ ಧ್ವಜಾರೋಹಣಗೈದು ದೇಶಭಕ್ತಿ, ದೇಶಪ್ರೇಮ ಬೆಳಿಸಿಕೊಂಡು ಆದರ್ಶ ವ್ಯಕ್ತಿಗಳಾಗಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಸಾಧಕರಿಗೆ ಸನ್ಮಾನ:

ಸಭಾ ಕಾರ್ಯಕ್ರಮದಲ್ಲಿ ನಿವೃತ್ತ ಯೋಧರಾದ ಚಂದ್ರಶೇಖರ ನಾವುಡ, ಪ್ರಗತಿಪರ ಕೃಷಿಕ ಬಾಬು ಆಚಾರ್ಯ ಹೇರೂರು, ಜನತಾ ಪ್ರೌಢ ಶಾಲೆಯ ಮುಖ್ಯಶಿಕ್ಷಕ ಮಂಜು ಕಾಳವರ, ಸಮಾಜ ಸೇವಕ ಬೆಂಕಿಮಣಿ ಸಂತು ಇವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಜನತಾ ಪ್ರೌಢಶಾಲೆಯ ಪ್ರಭಾರ ಮುಖ್ಯಶಿಕ್ಷಕ ಜಗದೀಶ್ ಶೆಟ್ಟಿ, ಪ್ರಗತಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಕುಲಾಲ್ ಉಪಸ್ಥಿತರಿದ್ದರು.ಉಪಪ್ರಾಂಶುಪಾಲ ರಮೇಶ್ ಪೂಜಾರಿ ಸ್ವಾಗತಿಸಿದರು. ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಮುಖ್ಯಶಿಕ್ಷಕಿ ದೀಪಿಕಾ ಆಚಾರ್ಯ ವಂದಿಸಿದರು. ಉಪನ್ಯಾಸಕ ಉದಯ ನಾಯ್ಕ ನಿರೂಪಿಸಿದರು. ನಂತರ ವಿದ್ಯಾರ್ಥಿಗಳಿಂದ ದೇಶಭಕ್ತಿ ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.