ಸಾರಾಂಶ
ಮೊಸರು ಕುಡಿಕೆ ಉತ್ಸವವನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಉದ್ಘಾಟಿಸಲಿದ್ದಾರೆ.
ಕನ್ನಡಪ್ರಭ ವಾರ್ತೆ ಪುತ್ತೂರು
ಶ್ರೀವಿಷ್ಣು ಯುವಕ ಮಂಡಲ ಕೆಮ್ಮಾಯಿ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ಇವುಗಳ ಜಂಟಿ ಆಶ್ರಯದೊಂದಿಗೆ ಕೆಮ್ಮಾಯಿ ಓಂ ಅಶ್ವತ್ಥಕಟ್ಟೆ ವಠಾರದಲ್ಲಿ ೭ನೇ ವರ್ಷದ ಮೊಸರು ಕುಡಿಕೆ ಉತ್ಸವವು ಸೆ.೧ರಂದು ಜರುಗಲಿದೆ ಎಂದು ಮೊಸರು ಕುಡಿಕೆ ಉತ್ಸವ ಸಮಿತಿ ಗೌರವಾಧ್ಯಕ್ಷ ಸುಂದರ ಪೂಜಾರಿ ಬಡಾವು ತಿಳಿಸಿದ್ದಾರೆ.ಅವರು ಗುರುವಾರ ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮೊಸರು ಕುಡಿಕೆ ಉತ್ಸವವನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಉದ್ಘಾಟಿಸಲಿದ್ದಾರೆ. ಮಾಜಿ ಶಾಸಕ ಸಂಜೀವ ಮಠಂದೂರು, ನಗರಸಭೆ ಸದಸ್ಯೆ ಲೀಲಾವತಿ, ದ್ವಾರಕ ಕನ್‌ಸ್ಟ್ರಕ್ಷನ್ ಮಾಲಕ ಗೋಪಾಲಕೃಷ್ಣ ಭಟ್, ಕೆಮ್ಮಾಯಿ ಶ್ರೀರಾಂ ಹಾಳೆಬಟ್ಟಲು ಸಂಸ್ಥೆಯ ಶಶಿಧರ್ ಕೆಮ್ಮಾಯಿ, ಯೆಯ್ಯಾಡಿ ಆರಾಧ್ಯ ಅಲ್ಯೂಮಿನಿಯಂನ ಹರೀಶ್ ಪ್ರಭು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮೊಸರು ಕುಡಿಕೆ ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಶ್ರೀ ವಿಷ್ಣುಯುವಕ ಮಂಡಲದ ಅಧ್ಯಕ್ಷ ದಯಾನಂದ ಗೌಡ ಕೆಮ್ಮಾಯಿ, ಮೊಸರು ಕುಡಿಕೆ ಉತ್ಸವ ಸಮಿತಿ ಉಪಾಧ್ಯಕ್ಷ ಸುರೇಂದ್ರ ಪೂಜಾರಿ ಬಡಾವು, ಹೇಮಚಂದ್ರ, ಕ್ರೀಡಾ ಕಾರ್ಯದರ್ಶಿ ಯಶವಂತ ಹೊಸಹೊಕ್ಲು, ಕಾರ್ಯಾಧ್ಯಕ್ಷ ಪ್ರಶಾಂತ್ ಕೆಮ್ಮಾಯಿ ಇದ್ದರು.