ಸಾರಾಂಶ
ಮೈಸೂರು : ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆಯು ಭಾನುವಾರದಿಂದ ನಡಿಗೆ ತಾಲೀಮು ಆರಂಭಿಸಿದವು.
ಅಂಬಾರಿ ಆನೆ ಅಭಿಮನ್ಯು, ಧನಂಜಯ, ಗೋಪಿ, ಭೀಮ, ರೋಹಿತ್, ಏಕಲವ್ಯ, ವರಲಕ್ಷ್ಮಿ ಮತ್ತು ಲಕ್ಷ್ಮಿ ಆನೆಗಳು ತಾಲೀಮಿನಲ್ಲಿ ಭಾಗವಹಿಸಿದ್ದವು. ಕಂಜನ್ ಆನೆಯ ಕಾಲಿಗೆ ಉಳುಕಾಗಿರುವ ಕಾರಣ ನಡಿಗೆ ತಾಲೀಮಿನಲ್ಲಿ ಪಾಲ್ಗೊಂಡಿರಲಿಲ್ಲ.
ಮೈಸೂರು ಅರಮನೆ ಆವರಣದ ಆನೆ ಬಿಡಾರದಿಂದ ಹೊರಟ 8 ಆನೆಗಳು ಕೋಟೆ ಆಂಜನೇಯಸ್ವಾಮಿ ದೇವಸ್ಥಾನ, ಚಾಮರಾಜ ವೃತ್ತ, ಕೆ.ಆರ್. ವೃತ್ತ, ಸಯ್ಯಾಜಿರಾವ್ ರಸ್ತೆ, ಆರ್ ಎಂಸಿ ವೃತ್ತ, ಹೈವೇ ವೃತ್ತದ ಮೂಲಕ ಬನ್ನಿಮಂಟಪ ತಲುಪಿತು. ಕೆಲಕಾಲ ವಿಶ್ರಾಂತಿ ಬಳಿಕ ಅದೇ ಮಾರ್ಗವಾಗಿ ಆನೆಗಳು ಅರಮನೆಗೆ ಬಂದು ಸೇರಿದವು.
ಇದೇ ಮೊದಲ ಬಾರಿಗೆ ದಸರೆಗೆ ಆಗಮಿಸಿರುವ ಏಕಲವ್ಯ ಆನೆಯು ನಡಿಗೆ ತಾಲೀಮಿನಲ್ಲಿ ವಿಶ್ವಾಸ ಹೆಜ್ಜೆ ಹಾಕುವ ಮೂಲಕ ಗಮನ ಸೆಳೆಯಿತು.
ಮೈಸೂರು ವನ್ಯಜೀವಿ ವಿಭಾಗದ ಡಿಸಿಎಫ್ ಡಾ.ಐ.ಬಿ. ಪ್ರಭುಗೌಡ, ಆನೆ ವೈದ್ಯ ಡಾ. ಮುಜೀಬ್ ರೆಹಮಾನ್, ಆರ್ ಎಫ್ಒ ಸಂತೋಷ್ ಹೂಗಾರ್ ಹಾಗೂ ಸಿಬ್ಬಂದಿ ಇದ್ದರು.