ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ಸರ್ಕಾರದ ವಿವಿಧ ಇಲಾಖೆಗಳು, ಸಂಘಸಂಸ್ಥೆಗಳು, ಶಾಲಾ-ಕಾಲೇಜುಗಳಲ್ಲಿ ಶನಿವಾರ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಬೆಳಗ್ಗೆ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವುದೇ ನಿಜವಾದ ಸ್ವಾತಂತ್ರ್ಯೋತ್ಸವ. ಕಾಂಗ್ರೆಸ್ ಪಕ್ಷ ಯಾವಾಗಲೂ ದೇಶದ ಏಕತೆ ಮತ್ತು ಸೌಹಾರ್ದತೆಗೆ ಕಂಕಣಬದ್ಧವಾಗಿದೆ. ಯುವಕರ ಸಬಲೀಕರಣವೇ ನಮ್ಮ ಗುರಿ ಎಂದರು.ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಪ್ರಮುಖರಾದ ಎಚ್.ಸಿ. ಯೋಗೀಶ್, ಎಸ್.ಟಿ. ಚಂದ್ರಶೇಖರ್, ಎನ್. ರಮೇಶ್, ಶ್ವೇತಾ ಬಂಡಿ, ಮಂಜುನಾಥ ಬಾಬು, ವೈ.ಎಚ್. ನಾಗರಾಜ್, ಎಸ್.ಟಿ. ಹಾಲಪ್ಪ, ಇಸ್ಮಾಯಿಲ್ ಖಾನ್, ಕಲಗೋಡು ರತ್ನಾಕರ್, ರಮೇಶ್ ಶಂಕರಘಟ್ಟ, ಜಿ.ಡಿ. ಮಂಜುನಾಥ್, ಎಸ್. ರವಿಕುಮಾರ್ ಮತ್ತಿತರರು ಇದ್ದರು.
ಬಿಜೆಪಿ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ: ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮವನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಕೆ. ಜಗದೀಶ್ ನೆರವೇರಿಸಿದರು.
ಈ ಸಂದರ್ಭದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಡಾ.ಧನಂಜಯ್ ಸರ್ಜಿ, ರಾಜ್ಯ ಪ್ರಕೋಷ್ಟಗಳ ಸಂಯೋಜಕ ಎಸ್. ದತ್ತಾತ್ರಿ, ವಿಭಾಗ ಪ್ರಭಾರಿ ಆರ್. ಕೆ. ಸಿದ್ದರಾಮಣ್ಣ, ಜಿಲ್ಲಾ ಉಪಾಧ್ಯಕ್ಷ ಜ್ಞಾನೇಶ್ವರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರಾಜ್, ಸಿ.ಎಚ್.ಮಾಲತೇಶ್, ಎಂ.ಬಿ. ಹರಿಕೃಷ್ಣ, ಎಸ್. ಎಸ್. ಜ್ಯೋತಿ ಪ್ರಕಾಶ್, ಎಸ್.ಚಂದ್ರಶೇಖರ್, ಎನ್.ಮಂಜುನಾಥ್ ಮತ್ತಿತರರು ಇದ್ದರು.
ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಕಚೇರಿ: ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ 80ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ನೆರವೇರಿಸಿದರು.ಸೂಡಾ ಕಚೇರಿ: ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಪ್ರಾಧಿಕಾರದ ಕಚೇರಿಯ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಾಧಿಕಾರದ ಸದಸ್ಯರಾದ ಎಂ ಪ್ರವೀಣ್ ಕುಮಾರ್, ಸಿದ್ದಪ್ಪ, ಆಯುಕ್ತರು ಹಾಗೂ ಕಚೇರಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಬ್ಯಾರೀಸ್ ಸಿಟಿ ಸೆಂಟರ್: ಇಲ್ಲಿನ ಬ್ಯಾರೀಸ್ ಸಿಟಿ ಸೆಂಟರ್‌ನಲ್ಲಿ ಶನಿವಾರ 80ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ವಾಣಿಜ್ಯ ತೆರಿಗೆ ಜಂಟಿ ಆಯುಕ್ತೆ ಎಚ್.ಎಸ್. ನಾಜಿಯಾ ಅಮನ್ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಮೊಹಿದೀನ್, ಆಯಿಷಾ, ಇಸ್ಮಾಯಿಲ್ ಕುಟ್ಟಿ, ಸೌಜನ್ಯ, ಬಲರಾಂ, ಅಲೋನ್, ಸುರೇಶ್ ಶೆಟ್ಟಿ, ಶ್ರೀನಿವಾಸ್ ಮತ್ತಿತರರು ಇದ್ದರು.ಪ್ರೆಸ್‌ಕಾಲೋನಿ: ಶಿವಮೊಗ್ಗ ನಗರದ ಗೋಪಾಳದ ಪ್ರೆಸ್‌ಕಾಲೋನಿ ಪಾರ್ಕ್‌ನಲ್ಲಿ ಶನಿವಾರ ಬೆಳಗ್ಗೆ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮೀನಾಕ್ಷಮ್ಮ, ಗಂಗಾಧರ್, ಡಾ.ಶ್ರೀನಿವಾಸ್ ರೆಡ್ಡಿ, ಶಿಕ್ಷಣ ಇಲಾಖೆ ನಿವೃತ್ತ ಅಧಿಕಾರಿ ರಾಮಣ್ಣ, ಸುಜಾತ, ಬಾಲಾಜಿ, ರಾಘವೇಂದ್ರ ಮತ್ತಿತರರು ಇದ್ದರು.