ಸಾರಾಂಶ
ಹೊನ್ನಾಳಿ ತಾಲೂಕು ಸರ್ಕಾರಿ ನೌಕರರ ಘಟಕ ಪದಾಧಿಕಾರಿಗಳಿಗಾಗಿ ಅ.28ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ನಾಮಪತ್ರ ಸಲ್ಲಿಸಲು ಕೊನೆ ದಿನವಾದ ಅ.18ರಂದು ವಿವಿಧ ಇಲಾಖೆಗಳ 21 ಕ್ಷೇತ್ರಗಳ 34 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಒಟ್ಟು 85 ನಾಮಪತ್ರ ಸಲ್ಲಿಕೆಯಾಗಿವೆ ಎಂದು ಚುನಾವಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲಾಧಿಕಾರಿ ತಿಪ್ಪೇಶಪ್ಪ ತಿಳಿಸಿದ್ದಾರೆ.
- 28ರಂದು ಹೊನ್ನಾಳಿ ತಾಲೂಕು ಸರ್ಕಾರಿ ನೌಕರರ ಘಟಕಕ್ಕೆ ಚುನಾವಣೆ - - - ಕನ್ನಡಪ್ರಭ ವಾರ್ತೆ ಹೊನ್ನಾಳಿ
ಹೊನ್ನಾಳಿ ತಾಲೂಕು ಸರ್ಕಾರಿ ನೌಕರರ ಘಟಕ ಪದಾಧಿಕಾರಿಗಳಿಗಾಗಿ ಅ.28ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ನಾಮಪತ್ರ ಸಲ್ಲಿಸಲು ಕೊನೆ ದಿನವಾದ ಅ.18ರಂದು ವಿವಿಧ ಇಲಾಖೆಗಳ 21 ಕ್ಷೇತ್ರಗಳ 34 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಒಟ್ಟು 85 ನಾಮಪತ್ರ ಸಲ್ಲಿಕೆಯಾಗಿವೆ ಎಂದು ಚುನಾವಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲಾಧಿಕಾರಿ ತಿಪ್ಪೇಶಪ್ಪ ತಿಳಿಸಿದ್ದಾರೆ.ಲೋಕೋಪಯೋಗಿ, ತೋಟಗಾರಿಕೆ, ಮೀನುಗಾರಿಕೆ, ಸಹಕಾರ ಸಾಂಕಿಕ, ಖಜಾನೆ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಅಬಕಾರಿ ಇಲಾಖೆಗಳಿಂದ ತಲಾ ಒಂದೊಂದು ನಾಮಪತ್ರಗಳು ಮಾತ್ರ ಸಲ್ಲಿಕೆಯಾಗಿವೆ ಎಂದರು.
ಕೃಷಿ ಇಲಾಖೆ, ಪಂಚಾಯತ್‌ರಾಜ್, ಆರೋಗ್ಯ, ನ್ಯಾಯಾಂಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳಿಂದ ತಲಾ ಎರೆಡೆರಡು ನಾಮಪತ್ರಗಳು ಸಲ್ಲಿಕೆಯಾಗಿವೆ. ಪಶುಪಾಲನಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ ಅಲ್ಪಸಂಖ್ಯಾತ, ಭೂಮಾಪನಾ ಇಲಾಖೆಗಳಿಂದ ತಲಾ ಮೂರು ನಾಮಪತ್ರ, ತಾಲೂಕು ಪಂಚಾಯಿತಿ ವತಿಯಿಂದ ಆರು ನಾಮಪತ್ರ ಸಲ್ಲಿಕೆಯಾಗಿದೆ ಎಂದು ಚುನಾವಣಾಧಿಕಾರಿ ಮಾಹಿತಿ ನೀಡಿದ್ದಾರೆ.ಕಂದಾಯ ಇಲಾಖೆ, ಸರ್ಕಾರಿ ಪದವಿಪೂರ್ವ ಹಾಗೂ ಪದವಿ ಕಾಲೇಜು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳಿಂದ ತಲಾ ಏಳು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿವೆ. ಸರ್ಕಾರಿ ಪ್ರೌಢಶಾಲೆಗಳಿಂದ 8 ನಾಮಪತ್ರ ಸಲ್ಲಿಕೆಯಾಗಿದ್ದರೆ, ಪ್ರಾಥಮಿಕ ಶಾಲೆಗಳ ವಿಭಾಗದಿಂದ ಅತಿ ಹೆಚ್ಚು ಅಂದರೆ 22 ನಾಮಪತ್ರ ಸಲ್ಲಿಕೆಯಾಗಿದೆ ಎಂದು ಚುನಾವಣಾಧಿಕಾರಿ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿ ಅಪ್ಸರ್ ಆಹಮ್ಮದ್ ಅವರು ಉಪಸ್ಥಿತರಿದ್ದರು.- - - (ಸಾಂದರ್ಭಿಕ ಚಿತ್ರ)