ಸಾರಾಂಶ
ಇತ್ತೀಚಿಗೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಫಾರ್ಮ್ ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ತೆಲುಗು ಚಿತ್ರರಂಗದ ನಟಿ ಸೇರಿದಂತೆ 86 ಮಂದಿ ಮಾದಕ ವಸ್ತು ಸೇವಿಸಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಟ್ಟು 101 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿತ್ತು.
ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಫಾರ್ಮ್ ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ತೆಲುಗು ಚಿತ್ರರಂಗದ ನಟಿ ಸೇರಿದಂತೆ 86 ಮಂದಿ ಮಾದಕ ವಸ್ತು ಸೇವಿಸಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಟ್ಟು 101 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿತ್ತು.
ಈ ಮಾದಕ ವ್ಯಸನಿಗಳಿಗೆ ಸಿಸಿಬಿ ತನಿಖೆ ಬಿಸಿ ಶುರುವಾಗಲಿದ್ದು, ವಿಚಾರಣೆಗೆ ಹಾಜರಾಗುವಂತೆ ನಟಿಯರಾದ ಹೇಮಾ ಸೇರಿ 86 ಮಂದಿಗೆ ಶೀಘ್ರದಲ್ಲೇ ಸಿಸಿಬಿ ನೋಟಿಸ್ ನೀಡಲಿದೆ ಎಂದು ಮೂಲಗಳು ಮಾಹಿತಿ ನೀಡಿವೆ. ಎಲೆಕ್ಟ್ರಾನಿಕ್ ಸಿಟಿ ಹತ್ತಿರದ ಜಿ.ಆರ್.ಫಾರ್ಮ್ ಹೌಸ್‌ನಲ್ಲಿ ಭಾನುವಾರ ರಾತ್ರಿ ರೇವ್ ಪಾರ್ಟಿ ಆಯೋಜಿಸಲಾಗಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಪಾರ್ಟಿ ಮೇಲೆ ಸಿಸಿಬಿ ದಿಢೀರ್ ದಾಳಿ ನಡೆಸಿತ್ತು. ಈ ವೇಳೆ ಪಾರ್ಟಿಯಲ್ಲಿದ್ದ ಇಬ್ಬರು ನಟಿಯರು ಸೇರಿದಂತೆ 100ಕ್ಕೂ ಹೆಚ್ಚಿನ ಮಂದಿಯನ್ನು ಸಿಸಿಬಿ ವೈದ್ಯಕೀಯ ತಪಾಸಣೆಗೊಳಪಡಿಸಿತ್ತು.