ಶಿರೂರು ಮಠದ ಕೀರ್ತಿಶೇಷ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನಾ ಮಹೋತ್ಸವ ಉಡುಪಿ ಶ್ರೀರಾಘವೇಂದ್ರ ಮಠದ ಸನ್ನಿಧಾನದಲ್ಲಿ ಜರುಗಿತು. ಶ್ರೀಲಕ್ಷ್ಮೀವರತೀರ್ಥರ ಪೂರ್ವಾಶ್ರಮದ ಕುಟುಂಬಿಕರಿಂದ ಈ ಸಮಾರಂಭವು ಶಾಸ್ತ್ರೋಕ್ತವಾಗಿ ಆಯೋಜನೆಗೊಂಡಿತ್ತು.
ಉಡುಪಿ: ಶಿರೂರು ಮಠದ ಕೀರ್ತಿಶೇಷ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನಾ ಮಹೋತ್ಸವ ಉಡುಪಿ ಶ್ರೀರಾಘವೇಂದ್ರ ಮಠದ ಸನ್ನಿಧಾನದಲ್ಲಿ ಜರುಗಿತು. ಶ್ರೀಲಕ್ಷ್ಮೀವರತೀರ್ಥರ ಪೂರ್ವಾಶ್ರಮದ ಕುಟುಂಬಿಕರಿಂದ ಈ ಸಮಾರಂಭವು ಶಾಸ್ತ್ರೋಕ್ತವಾಗಿ ಆಯೋಜನೆಗೊಂಡಿತ್ತು.ಪ್ರಾತಃಕಾಲದಲ್ಲಿ ಶ್ರೀರಾಘವೇಂದ್ರ ಗುರುಸಾರ್ವಭೌಮರ ಸಮ್ಮುಖದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಪವಮಾನ ಕಲಶಾಭಿಷೇಕ ಹೋಮ ಹಾಗೂ ವಿರಜಾ ಹೋಮವನ್ನು ವೇದಮೂರ್ತಿ ಶ್ರೀನಟರಾಜ ಉಪಾಧ್ಯಾಯ ಹಾಗೂ ವೇದಮೂರ್ತಿ ಅನಿಲ್ ನಡೆಸಿಕೊಟ್ಟರು. ತದನಂತರ ಶ್ರೀಪಾದರ ಮೃತ್ತಿಕಾ ವೃಂದಾವನಕ್ಕೆ ಪಂಚಾಮೃತಾಭಿಷೇಕ ಹಾಗೂ ವಿಶೇಷ ಪೂಜೆಯನ್ನು ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರ ಪಿ. ಲಾತವ್ಯ ಆಚಾರ್ಯರು ನೆರವೇರಿಸಿದರು. ಅಪರಾಹ್ನ ಅನ್ನಸಂತರ್ಪಣೆ ಜರಗಿತು.ಶ್ರೀರಾಯರ ಮಠದ ಜಯತೀರ್ಥ ಆಚಾರ್ಯ, ಅಪ್ಪಣ್ಣ ಆಚಾರ್ಯ, ಹರಿಕೃಷ್ಣ ಪುನರೂರು, ಲಕ್ಷ್ಮೀನಾರಾಯಣ ತಂತ್ರಿ, ಸೊಂಡೂರು ಪ್ರಹ್ಲಾದಆಚಾರ್ಯ, ಪಿ. ವಾದಿರಾಜ ಆಚಾರ್ಯ, ಪಿ.ಶ್ರೀನಿವಾಸ ಆಚಾರ್ಯ, ಪಿ. ವೃಜನಾಥ ಆಚಾರ್ಯ, ಗೋಪಾಲಕೃಷ್ಣಭಟ್ ಒಳಕಾಡು, ಡಾ. ವ್ಯಾಸರಾಜ ತಂತ್ರ, ಚೆನ್ನೈನ ರಾಜಗೋಪಾಲ್, ರಾಜೇಂದ್ರ ಆಚಾರ್ಯ ಬಡಗುಬೆಟ್ಟು, ಶ್ರೀಪಾದರ ಪೂರ್ವಾಶ್ರಮದ ಸಹೋದರರು, ಶ್ರೀಅಕ್ಷೋಭ್ಯ ಆಚಾರ್ಯ, ಅರ್ಜುನ ಆಚಾರ್ಯ, ವಿಶಾಲ ಆಚಾರ್ಯ, ಶಂಕರನಾರಾಯಣ ಹೊಳ್ಳ ಕುಂದಾಪುರ, ಯಾದವ, ರಾಕೇಶ್ ಮತ್ತಿತರರು ಪಾಲ್ಗೊಂಡಿದ್ದರು.
ಕೇಮಾರು ಶ್ರೀಸಾಂದೀಪನಿ ಮಠದ ಆಶ್ರಮದಲ್ಲಿ ಶ್ರೀಈಶವಿಠಲದಾಸ ಸ್ವಾಮೀಜಿ ವಿಶೇಷ ಪೂಜೆ ಹಾಗೂ ಪುಷ್ಪಾರ್ಚನೆ ಆಯೋಜಿಸಿದ್ದರು.