ರಾಜ್ಯಮಟ್ಟದ ಸ್ಪರ್ಧೆಗೆ ಆಳ್ವಾಸ್‌ನ 90 ವಿದ್ಯಾರ್ಥಿಗಳು

| Published : Sep 04 2024, 01:49 AM IST

ರಾಜ್ಯಮಟ್ಟದ ಸ್ಪರ್ಧೆಗೆ ಆಳ್ವಾಸ್‌ನ 90 ವಿದ್ಯಾರ್ಥಿಗಳು
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯಮಟ್ಟದಲ್ಲಿ ನಡೆಯಲಿರುವ ಕ್ರೀಡಾಕೂಟದಲ್ಲಿ ದ.ಕ. ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವರಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳು ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ ನವರಾಗಿದ್ದಾರೆ.

ಮೂಡುಬಿದಿರೆ: ದ.ಕ. ಅಥ್ಲೆಟಿಕ್ಸ್‌ ಸಂಸ್ಥೆಯ ವತಿಯಿಂದ ನಡೆದ ದ.ಕ. ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ನ ವಿದ್ಯಾರ್ಥಿಗಳು 25 ಚಿನ್ನ 18 ಬೆಳ್ಳಿ, 20 ಕಂಚು ಒಟ್ಟು 63 ಪದಕಗಳನ್ನು ಪಡೆದು, ರಾಜ್ಯಮಟ್ಟಕ್ಕ ಆಯ್ಕೆಯಾಗಿದ್ದಾರೆ.

ಸೆ.14ರಿಂದ17ರ ವರೆಗೆ ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕಿರಿಯರ ಹಿರಿಯರ ಅಥ್ಲೆಟಿಕ್ಸ್‌ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ನಿಂದ ಕಿರಿಯರ ವಿಭಾಗದಲ್ಲಿ 60 ವಿದ್ಯಾರ್ಥಿಗಳು ಹಾಗೂ ಹಿರಿಯರ ವಿಭಾಗದಲ್ಲಿ 30 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 90 ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ರಾಜ್ಯಮಟ್ಟದಲ್ಲಿ ನಡೆಯಲಿರುವ ಕ್ರೀಡಾಕೂಟದಲ್ಲಿ ದ.ಕ. ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವರಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳು ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ ನವರಾಗಿದ್ದಾರೆ. ಕ್ರೀಡಾಪಟುಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹರ್ಷ ವ್ಯಕ್ತಪಡಿಸಿದ್ದಾರೆ.