ಸ್ಪ್ರಿಂಕ್ಲರ್‌ ಸೆಟ್‌ಗೆ ಶೇ.90 ಸಹಾಯಧನ ಸೌಲಭ್ಯ

| Published : Jan 31 2025, 12:45 AM IST

ಸಾರಾಂಶ

೨೦೨೪-೨೫ ನೇ ಸಾಲಿನಲ್ಲಿ ಕೃಷಿ ಇಲಾಖೆಯ ಮುಖಾಂತರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತರಿಗೆ ಸ್ಪ್ರಿಂಕ್ಲರ್‌ ಸೆಟ್‌ಗೆ ಶೇ.೯೦ರಷ್ಟು ಸಹಾಯಧನ ನೀಡಲಾಗುತ್ತಿದೆ. ರೈತರು ಸದುಪಯೋಗ ಪಡಿಸಲು ಕೋರಲಾಗಿದೆ.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

೨೦೨೪-೨೫ ನೇ ಸಾಲಿನಲ್ಲಿ ಕೃಷಿ ಇಲಾಖೆಯ ಮುಖಾಂತರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತರಿಗೆ ಸ್ಪ್ರಿಂಕ್ಲರ್‌ ಸೆಟ್‌ಗೆ ಶೇ.೯೦ರಷ್ಟು ಸಹಾಯಧನ ನೀಡಲಾಗುತ್ತಿದೆ.

ಈ ಯೋಜನೆ ಅಡಿ ಒಂದು ಎಕರೆ ಜಮೀನಿಗಿಂತ ಹೆಚ್ಚಿನ ವಿಸ್ತೀರ್ಣ ಹೊಂದಿರುವ ರೈತರು ರು. ೪,೧೩೯ ಹಣ ಪಾವತಿಸುವ ಮೂಲಕ ಒಟ್ಟು ೩೦ ಪೈಪುಗಳು, ೫ ಸ್ಪ್ರಿಂಕ್ಲರ್‌ ಜೆಟ್‌ಗಳು ಹಾಗೂ ಇತರ ಸಾಮಗ್ರಿಗಳನ್ನು ಪಡೆಯಬಹುದಾಗಿದೆ. ಒಂದು ಎಕರೆಗಿಂತ ಕಡಿಮೆ ವಿಸ್ತೀರ್ಣ ಹಾಗೂ ಅರ್ಧ ಎಕರೆಗಿಂತ ಹೆಚ್ಚು ವಿಸ್ತೀರ್ಣ ಹೊಂದಿರುವ ರೈತರು ರು. ೨೪೯೬ ಹಣ ಪಾವತಿಸುವುದರ ಮುಖಾಂತರ ೧೮ ಪೈಪುಗಳು ಮತ್ತು ೩ ಸಂಖ್ಯೆಯ ಜೆಟ್‌ಗಳನ್ನು ಹಾಗೂ ಇತರೆ ಸಾಮಗ್ರಿಗಳನ್ನು ಪಡೆಯಲು ಅವಕಾಶ ಇದೆ.

ರೈತರು ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರೈತ ಸಂಪರ್ಕ ಕೇಂದ್ರದಲ್ಲಿ ಉಚಿತವಾಗಿ ನೀಡುವ ಅರ್ಜಿಯೊಂದಿಗೆ ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್, ಪಹಣಿ, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್ ಹಾಗೂ ಎರಡು ಸ್ಟ್ಯಾಂಪ್ ಅಳತೆಯ ಫೋಟೋಗಳನ್ನು ಸಲ್ಲಿಸುವುದರ ಮುಖಾಂತರ ಈ ಯೋಜನೆ ಅಡಿ ಫಲಾನುಭವಿಗಳಾಗಬಹುದು.

ನೀರಾವರಿ ಅಗತ್ಯ ಇರುವ ಸಂದರ್ಭದಲ್ಲಿ ಬೆಳೆಗೆ ತುಂತುರು ನೀರಾವರಿಯನ್ನು ಹಾಯಿಸಿ ಹೆಚ್ಚಿನ ಇಳುವರಿ ಪಡೆಯಬಹುದು. ಈ ಸೌಲಭ್ಯವನ್ನು ಸೋಮವಾರಪೇಟೆ ತಾಲೂ ಕು ಹಾಗೂ ಕುಶಾಲನಗರ ತಾಲೂಕು ವ್ಯಾಪ್ತಿಯ ಎಲ್ಲಾ ರೈತ ಬಾಂಧವರು ಇದರ ಸದುಪಯೋಗ ಪಡೆಯಬೇಕೆಂದು ಸಹಾಯಕ ಕೃಷಿ ನಿರ್ದೇಶಕ ಕೆ.ಪಿ. ವೀರಣ್ಣ ಪ್ರಕಟಣೆಯಲ್ಲಿ ಕೋರಿದ್ದಾರೆ.