ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ಬದ್ಧ

| Published : Dec 04 2024, 12:31 AM IST

ಸಾರಾಂಶ

ರಾಜಕೀಯ ಎಂಬುದು ಬಹಳ ದೊಡ್ಡಶಕ್ತಿ. ಸಂವಿಧಾನದ ಮೂಲಕ ನಾಯಕರನ್ನು ಆಯ್ಕೆ ಮಾಡುವ ಹಕ್ಕನ್ನು ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಎಚ್.ಡಿ. ಕೋಟೆಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಎಚ್.ಡಿ.ಕೋಟೆ ಮತ್ತು ಸರಗೂರು ತಾಲೂಕು ಆಡಳಿತ ಹಾಗೂ ಕುಳುವ ಮಹಾ ಸಂಘದ ವತಿಯಿಂದ ಶರಣ ಶ್ರೀ ನುಲಿಯ ಚಂದಯ್ಯರವರ 917ನೇ ಜಯಂತ್ಯುತ್ಸವ ಆಚರಿಸಿತು.ಕರ್ನಾಟಕ ಪ. ಜಾತಿ, ವರ್ಗ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ ಮಾತನಾಡಿ, ಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಉನ್ನತ ಸ್ಥಾನಕ್ಕೆ ಬೆಳೆಯುವಂತೆ ಕರೆ ನೀಡಿದರು.

ರಾಜಕೀಯ ಎಂಬುದು ಬಹಳ ದೊಡ್ಡಶಕ್ತಿ. ಸಂವಿಧಾನದ ಮೂಲಕ ನಾಯಕರನ್ನು ಆಯ್ಕೆ ಮಾಡುವ ಹಕ್ಕನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ್ದಾರೆ. ಅಲೆಮಾರಿ ಸಮುದಾಯಗಳಿಗೆ ಇಲ್ಲಿಯವರೆಗೆ ಬೆರಳಣಿಕೆಯಷ್ಟು ಮಾತ್ರ ರಾಜಕೀಯ ಪ್ರಾತಿನಿಧ್ಯ ನೀಡಲಾಗಿದೆ. ದಿವಂಗತ ಡಿ. ದೇವರಾಜು ಅರಸು ಅವರನಂತರ ಸಾಮಾಜಿಕ ನ್ಯಾಯದ ಪರವಾಗಿ ಕೆಲಸ ಮಾಡುತ್ತಿರುವವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂದು ಶ್ಲಾಘಿಸಿದರು.ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ಸರ್ಕಾರ ಬದ್ದವಾಗಿದೆ. ಆದರೆ ಮುಖ್ಯವಾಹಿನಿಗೆ ಬರಲು ನಾವೆಲ್ಲರೂ ಒಟ್ಟಾಗಬೇಕು. ಸರ್ಕಾರಿ ಸಾಲ-ಸೌಲಭ್ಯಗಳ ಮಾಹಿತಿ ಪಡೆದು ಸ್ವಾವಲಂಬನೇ ಸಾಧಿಸುವಷ್ಟು ಶಿಕ್ಷಣ ಜ್ಞಾನ ಪಡೆದುಕೊಳ್ಳಬೇಕು. ಹಾಗೆಯೇ ಅಲೆಮಾರಿ ಸಮುದಾಯಗಳ ಪರವಾಗಿ ಪ್ರಾಮಾಣಿಕ ಸೇವೆ ಮಾಡುವ ಮೂಲಕ ಶ್ರಮಿಸುವುದಾಗಿ ಭರವಸೆ ನೀಡಿದರು. ಶರಣ ಶ್ರೀ ನುಲಿಯ ಚಂದಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, ಕಳೆದಮೂರು ವರ್ಷಗಳಿಂದ ಶರಣ ನುಲಿಯ ಚಂದಯ್ಯ ಅವರ ಜಯಂತಿಯನ್ನು ಅರ್ಥಪೂರ್ಣ ಆಚರಿಸಲಾಗುತ್ತಿದೆ. ಒಗ್ಗೂಡಿದರೆ ಮಾತ್ರ ಸಮುದಾಯಕ್ಕೆ ಶಕ್ತಿ ಬರಲು ಸಾಧ್ಯ. ಮುಂದಿನ ದಿನಗಳಲ್ಲಿ ಅಲೆಮಾರಿ ಕೊರಮ ಸಮುದಾಯದವರಿಗೆ ಎಲ್ಲ ಕ್ಷೇತ್ರದಲ್ಲೂ ಅದರಲ್ಲೂ ರಾಜಕೀಯ ಕ್ಷೇತ್ರದಲ್ಲಿ ಸ್ಥಾನಮಾನ ದೊರೆಯಲಿ ಎಂದು ಹಾರೈಸಿದರು. ಅಖಿಲ ಕರ್ನಾಟಕ ಕುಳುವ ಮಹಾಸಂಘದ ಜಂಟಿ ಕಾರ್ಯದರ್ಶಿ ಕಿರಣ್ ಕುಮಾರ್ ಕೊತ್ತಗೆರೆ ಮಾತನಾಡಿದರು.ಅಧ್ಯಕ್ಷತೆಯನ್ನು ಎಚ್.ಡಿ. ಕೋಟೆ ಮತ್ತು ಸರಗೂರು ತಾಲೂಕು ಸಂಘದ ಅಧ್ಯಕ್ಷ ಟಿ. ಪುರುಷೋತ್ತಮ್ ವಹಿಸಿದ್ದರು.ತಹಸೀಲ್ದಾರ್ ಶ್ರೀನಿವಾಸ್, ಇನ್ಸ್ ಪೆಕ್ಟರ್ ಬಿ.ಜಿ. ಕುಮಾರ್, ಪುರಸಭೆ ಆಡಳಿತಾಧಿಕಾರಿ ಮುತ್ತುರಾಜ್, ಪ್ರಧಾನ ಕಾರ್ಯದರ್ಶಿ ಬಿ.ಎಸ್. ಆನಂದ್ ಕುಮಾರ್ ಏಕಲವ್ಯ, ಮೈಸೂರು ಜಿಲ್ಲಾ ಕುಳುವ ಮಹಾಸಂಘದ ಅಧ್ಯಕ್ಷ ಡಿ.ಎನ್. ಮುತ್ತುರಾಜ್, ಕಾರ್ಯಾಧ್ಯಕ್ಷ ಉಪಾಧ್ಯಕ್ಷ ಪುಟ್ಟಸ್ವಾಮಿ, ಶಿವರಾಜು, ಮಹೇಂದ್ರ, ಸಿ. ರಾಜು, ಪ್ರಧಾನ ಕಾರ್ಯದರ್ಶಿ ಮೋಹನ್ ಕಾಯಕ, ಜಂಟಿಕಾರ್ಯದರ್ಶಿ ರವಿ ಕುಮಾರ್ ಎನ್. ಕೊಡಹಳ್ಳಿ, ಸಂಘಟನಾ ಕಾರ್ಯದರ್ಶಿಗಳಾದ ಕೃಷ್ಣಪ್ಪ, ಸೋಮಣ್ಣ, ರಾಮಕೃಷ್ಞ, ತಾಲೂಕು ಕುಳುವ ಮಹಾಸಂಘದ ಪದಾಧಿಕಾರಿಗಳು ಇದ್ದರು.