93 ಲಕ್ಷ ರು. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಭೂಮಿ ಪೂಜೆ

| Published : Feb 07 2024, 01:46 AM IST

93 ಲಕ್ಷ ರು. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಭೂಮಿ ಪೂಜೆ
Share this Article
  • FB
  • TW
  • Linkdin
  • Email

ಸಾರಾಂಶ

ಬನಘಟ್ಟ ಗ್ರಾಮದಲ್ಲಿ ₹42 ಲಕ್ಷ ಹಾಗೂ ಬಳೇಅತ್ತಿಗುಪ್ಪೆ ಗ್ರಾಮದಲ್ಲಿ ₹51 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಕೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ತಾಲೂಕಿನಲ್ಲಿ ಸರ್ಕಾರಿ ಜಮೀನು ಒತ್ತುವರಿಗಳ ತೆರವು ಮಾಡುವುದಕ್ಕೆ ಸೂಕ್ತ ಕ್ರಮವಹಿಸಲಾಗುವುದು. ಮುಂದಿನ ದಿನಗಳಲ್ಲಿ ಪ್ರತಿ ಪಂಚಾಯ್ತಿ ಮಟ್ಟದಲ್ಲಿ ಎರಡು ದಿನಗಳ ಕಾಲ ಸಭೆ ನಡೆಸಿ ಸರ್ವೇ ನಡೆಸಲಾಗುವುದು.

ಕನ್ನಡಪ್ರಭ ವಾರ್ತೆ ಪಾಂಡವಪುರ

ತಾಲೂಕಿನ ಬನಘಟ್ಟ ಹಾಗೂ ಬಳೇಅತ್ತಿಗುಪ್ಪೆ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ₹93 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಮಂಗಳವಾರ ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಗ್ರಾಮೀಣ ಜನರ ಮನೆಮನೆಗೆ ಕಾವೇರಿ ನೀರು ಪೂರೈಕೆ ಮಾಡಬೇಕು ಎಂಬ ಉದ್ದೇಶದಿಂದ ಜಲಜೀವನ್ ಮಿಷನ್ ಯೋಜನೆಯಡಿ ಪೈಪ್‌ಲೈನ್ ಅಳವಡಿಕೆ ಕಾಮಗಾರಿಗೆ ಚಾಲನೆ ನೀಡಲಾಗುತ್ತಿದೆ ಎಂದರು.

ಬನಘಟ್ಟ ಗ್ರಾಮದಲ್ಲಿ ₹42 ಲಕ್ಷ ಹಾಗೂ ಬಳೇಅತ್ತಿಗುಪ್ಪೆ ಗ್ರಾಮದಲ್ಲಿ ₹51 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಕೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದರು.

ತಾಲೂಕಿನಲ್ಲಿ ಸರ್ಕಾರಿ ಜಮೀನು ಒತ್ತುವರಿಗಳ ತೆರವು ಮಾಡುವುದಕ್ಕೆ ಸೂಕ್ತ ಕ್ರಮವಹಿಸಲಾಗುವುದು. ಮುಂದಿನ ದಿನಗಳಲ್ಲಿ ಪ್ರತಿ ಪಂಚಾಯ್ತಿ ಮಟ್ಟದಲ್ಲಿ ಎರಡು ದಿನಗಳ ಕಾಲ ಸಭೆ ನಡೆಸಿ ಸರ್ವೇ ನಡೆಸಲಾಗುವುದು. ಸಾರ್ವಜನಿಕರ ಸರ್ವೇ ನಂಬರ್ ಆಸ್ತಿ, ಗ್ರಾಮಠಾಣ ಹಾಗೂ ಸರಕಾರಿ ಜಮೀನು ಎಷ್ಟಿದೆ ಎನ್ನುವುದನ್ನು ನಿಗಧಿಪಡಿಸಲಾಗುವುದು ಎಂದರು.

ಬಳಿಕ ಒತ್ತುವರಿ, ಸರಕಾರಿ ಜಾಗವನ್ನು ಅಕ್ರಮವಾಗಿ ದಾಖಲೆ ಸೃಷ್ಟಿಸಿಕೊಂಡಿರುವ ಜಮೀನುಗಳ ಬಗ್ಗೆ ಕ್ರಮ ವಹಿಸಲಾಗುವುದು. ಸಾರ್ವಜನಿಕರು ಸಹ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಳ್ಳಬಾರದು ಎಂದು ಮನವಿ ಮಾಡಿದರು.

ಈ ವೇಳೆ ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ ಎಇಇ ಮಹದೇವಸ್ವಾಮಿ, ಎಇ ಕುಮಾರ್, ಬನಘಟ್ಟ ಗ್ರಾಪಂ ಮಾಜಿ ಸದಸ್ಯ ಕುಮಾರ್, ಹಿರೀಮರಳಿ ಶಿವಕುಮಾರ್, ಬಳೇಅತ್ತಿಗುಪ್ಪೆ ಗ್ರಾಮದಲ್ಲಿ ಅಮೃತಿರಾಜಶೇಖರ್, ಕೈಲಾಸಮೂರ್ತಿ, ಶಿವಕುಮಾರ್, ವಿಜಿಕುಮಾರ್, ಚಾಮಪ್ಪ, ಈಶ್ವರ, ಶಿವಪ್ಪ, ಕಾಳೇನಹಳ್ಳಿ ಆನಂದ್, ಗುತ್ತಿಗೆದಾರ ಎಂ.ಹರೀಶ್, ಉಜ್ವಲ್, ಅಕ್ಷಯ್, ಪಿಡಿಓ ನಿರಂಜನ್ ಸೇರಿದಂತೆ ಹಲವರು ಇದ್ದರು.