ಬಸವಸಾಗರ ಜಲಾಶಯದಿಂದ 95 ಸಾವಿರ ಕ್ಯುಸೆಕ್ ನೀರು ನದಿಗೆ

| Published : Sep 07 2024, 01:34 AM IST

ಸಾರಾಂಶ

95 thousand cusec water from Basavasagar reservoir to the river

-ಜಲಾಶಯದ ಪ್ರಮುಖ 25 ಕ್ರಸ್ಟ್ ಗೇಟ್‌ಗಳಿಂದ 95 ಸಾವಿರ ಕ್ಯುಸೆಕ್ ನೀರನ್ನು ನದಿಗೆ

----

ಕನ್ನಡಪ್ರಭ ವಾರ್ತೆ ಕೊಡೇಕಲ್

ಮಹಾರಾಷ್ಟ್ರದ ಪಶ್ಚಿಮಘಟ್ಟಗಳಲ್ಲಿ ಹಾಗೂ ಸ್ಥಳೀಯವಾಗಿ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಸುರಿದ ಮಳೆಯಿಂದಾಗಿ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಬರುತ್ತಿದ್ದು, ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿರುವುದರಿಂದ ಬಸವಸಾಗರ ಜಲಾಶಯಕ್ಕೂ ಒಳಹರಿವು ಹೆಚ್ಚಿದೆ.

ನಿರಂತರ ಮಳೆಯಿಂದಾಗಿ ಬಸವಸಾಗರ ಜಲಾಶಯದಿಂದ ನದಿಗೆ ನೀರು ಬಿಡಲಾಗುತ್ತಿದ್ದು, ಕಳೆದೊಂದು ತಿಂಗಳಿನಿಂದ ಜಲಾಶಯಕ್ಕೆ ಹರಿದುಬರುವ ಒಳಹರಿವಿನ ಪ್ರಮಾಣಕ್ಕನುಗುಣವಾಗಿ ಹೆಚ್ಚು ಕಡಿಮೆ ಮಾಡುತ್ತಿರುವುದರಿಂದ ಅದರಲ್ಲೂ ಲಕ್ಷಾಂತರ ಕ್ಯುಸೆಕ್ ಪ್ರಮಾಣದಲ್ಲಿ ನದಿಗೆ ನೀರು ಹರಿಯುತ್ತಿರುವುದರಿಂದ ನದಿ ತೀರದ ಗ್ರಾಮಗಳ ಜನತೆಗೆ ಮತ್ತೇ ಪ್ರವಾಹ ಭೀತಿ ಇನ್ನು ದೂರಾಗಿಲ್ಲ.

ಶುಕ್ರವಾರದಂದು ಜಲಾಶಯಕ್ಕೆ 85 ಸಾವಿರಕ್ಕೂ ಅಧಿಕ ಒಳಹರಿವು ಬರುತ್ತಿದ್ದು ಜಲಾಶಯದ ಪ್ರಮುಖ 25 ಕ್ರಸ್ಟ್ ಗೇಟ್‌ಗಳಿಂದ 95 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ಹೆಚ್ಚಿನ ಪ್ರಮಾಣದಲ್ಲಿ ನದಿಗೆ ನೀರು ಹರಿದುಬಿಟ್ಟಲ್ಲಿ ಕೆಲವೆಡೆ ಪ್ರವಾಹ ಉಂಟಾಗುವ ಸಾಧ್ಯತೆಗಳಿರುವುದರಿಂದ ತಾಲೂಕಾಡಳಿತ ಸಕಲ ರೀತಿಯಿಂದಲೂ ಪ್ರವಾಹವನ್ನು ಎದುರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಕಂದಾಯ ಅಧಿಕಾರಿಗಳು ಹಾಗೂ ಪಂಚಾಯ್ತಿ ಅಧಿಕಾರಿಗಳು ನದಿ ತೀರದ ಗ್ರಾಮಗಳತ್ತ ತೆರಳಿ ಡಂಗೂರ ಸಾರುವ ಮೂಲಕ ಜನರಿಗೆ ನದಿಯತ್ತ ಸುಳಿಯದಂತೆ ಜಾಗೃತಿ ಮೂಡಿಸುತ್ತಿದ್ದಾರೆ.

ಒಳಹರಿವು ಹೆಚ್ಚಾಗುವ ಸಾಧ್ಯತೆ: ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜಲಾಶಯಕ್ಕೆ ಒಳಹರಿವು ಅಧಿಕವಾಗಿರುವುದರಿಂದ ಶುಕ್ರವಾರ ಬೆಳಿಗ್ಗೆಯಿಂದ ಜಲಾಶಯದ ಸಂಗ್ರಹಮಟ್ಟ ಕಾಯ್ದುಕೊಂಡು 95 ಸಾವಿರ ಕ್ಯುಸೆಕ್ ನೀರು ನದಿಗೆ ಬಿಡಲಾಗುತ್ತಿದೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಬರುವ ಸಾಧ್ಯತೆವಿರುವುದರಿಂದ ಅವಳಿ ಜಲಾಶಯ ಬಸವಸಾಗರ ಜಲಾಶಯಕ್ಕೂ ಸಹ ಹೆಚ್ಚಿನ ಪ್ರಮಾಣದ ಒಳಹರಿವು ಬರುವ ಸಾಧ್ಯತೆಗಳಿದ್ದು ಜಲಾಶಯದ ಸಂಗ್ರಹಮಟ್ಟ ಕಾಯ್ದುಕೊಂಡು ಹೆಚ್ಚುವರಿ ನೀರನ್ನು ಕಡಿಮೆ ಅಥವಾ ಹೆಚ್ಚಿಸಲಾಗುವುದೆಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

ಜಲಾಶಯದ ನೀರಿನ ಮಟ್ಟ: 492.25 ಮೀ ಹಾಗೂ 33.313 ಟಿ.ಎಂ.ಸಿ ಗರಿಷ್ಠ ನೀರಿನ ಸಂಗ್ರಹವಿರುವ ಬಸವಸಾಗರ ಜಲಾಶಯದಲ್ಲಿ ಸದ್ಯ 492.18 ಮೀ ತಲುಪಿದ್ದು 32.98 ಟಿಎಂಸಿ ನೀರಿನ ಸಂಗ್ರಹವಿದೆ.

----

6ವೈಡಿಆರ್12: ಕೊಡೇಕಲ್ ಸಮೀಪದ ಬಸವಸಾಗರ ಜಲಾಶಯದಿಂದ ಜಲಾಶಯದ ಪ್ರಮುಖ 25 ಕ್ರಸ್ಟ್ ಗೇಟ್‌ಗಳಿಂದ 95 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಯಿತು.

------