ಸಾರಾಂಶ
ಡಿ.27ರಂದು ನಡೆಯಲಿರುವ ಮಂಗಳೂರು ಕಂಬಳದ ಕುರಿತಂತೆ ನಗರದ ಪತ್ತುಮುಡಿ ಸೌಧದಲ್ಲಿ ಭಾನುವಾರ ಪೂರ್ವಭಾವಿ ಸಭೆ ನಡೆಯಿತು.
ಮಂಗಳೂರು: ಯುವ ಜನರು ಸೇರಿದಂತೆ ಸಮಾನ ಮನಸ್ಕರ ಒಗ್ಗಟ್ಟು, ಧರ್ಮದ ಚಿಂತನೆ, ಸ್ವಾರ್ಥ ರಹಿತ ಕೆಲಸಕ್ಕೆ ಭಗವಂತನ ಆಶೀರ್ವಾದ ಸದಾ ಇರುತ್ತದೆ ಎನ್ನುವುದಕ್ಕೆ ಮಂಗಳೂರು ಕಂಬಳವೇ ಸಾಕ್ಷಿ ಎಂದು ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
ಡಿ.27ರಂದು ನಡೆಯಲಿರುವ ಮಂಗಳೂರು ಕಂಬಳದ ಕುರಿತಂತೆ ನಗರದ ಪತ್ತುಮುಡಿ ಸೌಧದಲ್ಲಿ ಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಸಾಮಾನ್ಯ ಯುವಕರೆಲ್ಲ ಸೇರಿಕೊಂಡು ಆರಂಭಿಸಿದ್ದ ಮಂಗಳೂರು ಕಂಬಳಕ್ಕೆ ಈ ಬಾರಿ 9ನೇ ವರ್ಷದ ಸಂಭ್ರಮವಾಗಿರುವುದು ಅತ್ಯಂತ ಖುಷಿಯ ವಿಚಾರ. ಈ ನಿಟ್ಟಿನಲ್ಲಿ ಒಂಭತ್ತು ರೀತಿಯ ವಿಭಿನ್ನ ಕಾರ್ಯಕ್ರಮ ಆಯೋಜಿಸುವ ಯೋಚನೆ ಇಟ್ಟುಕೊಂಡಿದ್ದೇವೆ ಎಂದು ಕ್ಯಾ. ಚೌಟ ತಿಳಿಸಿದ್ದಾರೆ.ಮಾಜಿ ಸಚಿವ ನಾಗರಾಜ ಶೆಟ್ಟಿ, ಕಂಬಳ ಸಮಿತಿಯ ಉಪಾಧ್ಯಕ್ಷ ಅನಿಲ್ ಕುಮಾರ್, ಮಂಗಳೂರು ಕಂಬಳ ಸಮಿತಿ ಗೌರವ ಸಲಹೆಗಾರರಾದ ಪ್ರಸಾದ್ ಕುಮಾರ್ ಶೆಟ್ಟಿ, ಕುಳೂರು ಪೊಯ್ಯೆಲು ಪಿ.ಆರ್. ಶೆಟ್ಟಿ, ಕಂಬಳ ಸಮಿತಿ ಉಪಾಧ್ಯಕ್ಷ ಹಾಗೂ ಮಾಜಿ ಮನಪಾ ಸದಸ್ಯರಾದ ಕದ್ರಿ ಮನೋಹರ್ ಶೆಟ್ಟಿ, ಭರತ್ ಸೂಟರ್ ಪೇಟೆ, ಸಂದೀಪ್ ಗರೋಡಿ, ಸಂಜಯ ಪ್ರಭು, ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್ ಮಂಗಲ್ಪಾಡಿ ಇದ್ದರು.ಈಶ್ವರ್ ಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ಮನ್ಮಥ್ ಶೆಟ್ಟಿ ಪುತ್ತೂರು ನಿರೂಪಿಸಿ, ಕಂಬಳ ಸಮಿತಿ ಸಂಚಾಲಕ ಸಚಿನ್ ಶೆಟ್ಟಿ ಸಾಂತ್ಯ ವಂದಿಸಿದರು.
;Resize=(128,128))
;Resize=(128,128))
;Resize=(128,128))