ಸಾರಾಂಶ
ಕನ್ನಡಪ್ರಭ ವಾರ್ತೆ ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿ.ರಾಜೀವ್‌ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ೧೦೯ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿ.ರಾಜೀವ್‌ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ೧೦೯ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.ಇಬ್ಬರು ಮಹನೀಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದ ಎಂಎಸ್‌ಐಎಲ್ ಅಧ್ಯಕ್ಷ, ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು ದೇಶದ ಪ್ರಗತಿಗೆ ಹಲವಾರು ಕೊಡುಗೆ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಸತತ ಕರ್ನಾಟಕ ರಾಜ್ಯದಲ್ಲಿ ಸುಧೀರ್ಘ ೮ ವರ್ಷಗಳ ಕಾಲ ಉತ್ತಮ ಆಡಳಿತವನ್ನು ನೀಡಿದ್ದರು.
ಅಲ್ಪ ಸಂಖ್ಯಾತರು ಪರಿಶಿಷ್ಟರು, ಹಿಂದುಳಿದ ವರ್ಗಗಳು ಮತ್ತು ಶೋಷಿತರಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ನೆಲೆ ಕಲ್ಪಿಸಲು ಭದ್ರ ಬುನಾದಿ ಹಾಕಿದ ಕೀರ್ತಿ ಅರಸು ಅವರಿಗೆ ಸಲುತ್ತದೆ ಎಂದರು.ಕಾಡಾ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ದೇವರಾಜು ಅರಸು ಅವರು ರಾಜ್ಯದಲ್ಲಿ ಬಡತನ ನಿರ್ಮೂಲನೆ ಮಾಡುವ ಸಂಬಂಧ ೨೦ಅಂಶಗಳ ಕಾರ್ಯಕ್ರಮಗಳನ್ನು ಅನುಷ್ಟಾನಕ್ಕೆ ತಂದರು, ದಲಿತರು ಶೋಷಿತರು, ಹಿಂದುಳಿದವರನ್ನು ರಾಜಕೀಯವಾಗಿ ಮುಂದೆ ತರಲು ಸಾಕಷ್ಟು ಶ್ರಮಿಸಿದರು ಎಂದರು.ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ತಂತ್ರಜ್ಞಾನಕ್ಕೆ ಹೆಚ್ಚು ಒತ್ತು ಕೊಡುವ ಜತೆಗೆ ಯುವಕರಿಗೆ ಮತದಾನದ ಹಕ್ಕು ಕೊಟ್ಟರು. ಇಂತಹ ಮಹಾನ್ ವ್ಯಕ್ತಿಗಳ ಜೀವನ ಆದರ್ಶಗಳನ್ನು ಮೈಗೂಡಿಸಿಕೂಂಡು ಪಕ್ಷವನ್ನು ಬಲಪಡಿಸಲು ಶ್ರಮಿಸಬೇಕು ಎಂದು ಸಲಹೆ ನೀಡಿದರು,ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್, ಚುಡಾ ಅಧ್ಯಕ್ಷ ಮಹಮದ್ ಅಸ್ಗರ್ (ಮುನ್ನ), ಕೆಪಿಸಿಸಿ ಸದಸ್ಯ ಸಯ್ಯದ್ ರಫಿ, ನಗರಸಭೆ ಸದಸ್ಯರಾದ ಚಿನ್ನಮ್ಮ, ನೀಲಮ್ಮ. ಎಪಿಎಂಸಿ ಅಧ್ಯಕ್ಷ ಮಹದೇವಸ್ವಾಮಿ, ಸದಸ್ಯ ಎ.ಎಸ್.ಪ್ರದೀಪ್, ಕಾಗಲವಾಡಿ ಚಂದ್ರು, ಜಿಪಂ ಮಾಜಿ ಸದಸ್ಯರಾದ ರಮೇಶ್, ಕೆ.ನವೀನ್, ಕಾವೇರಿ ಶಿವಕುಮಾರ್, ಮಾದಾಪುರ ಗ್ರಾಪಂ ಮಾಜಿ ಅಧ್ಯಕ್ಷ ರೂಪೇಶ್, ಎಸ್ಸಿ ಘಟಕದ ಮರಿಯಾಲದ ಹುಂಡಿಕುಮಾರ್, ಚುಡಾ ಮಾಜಿ ಅಧ್ಯಕ್ಷ ಸುಹೇಲ್ ಅಲಿಖಾನ್, ನಸ್ರುಲ್ಲಾಖಾನ್, ಆಯೂಬ್ ಖಾನ್, ಮಹಮದ್ ಅತೀಕ್, ಮಹಮದ್ ಅಪ್ಸರ್, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಮೋಹನ್, ಮುತ್ತುರಾಜ್, ವಕೀಲ ನಾಗಾರ್ಜುನ ಪೃಥ್ವಿ, ಮಲ್ಲಿಕಾರ್ಜುನ್, ಅಸಂಘಟಿತ ಕಾರ್ಮಿಕರ ಸಂಘದ ಅಧ್ಯಕ್ಷ ಸ್ವಾಮಿ, ತಾಪಂ ಮಾಜಿ ಸದಸ್ಯ ಎಚ್.ಎಂ.ಮಹದೇವಶೆಟ್ಟಿ, ಮುತ್ತಿಗೆ ದೂರೆ, ಬಿಸಲವಾಡಿರವಿ, ರವಿಗೌಡ, ನಗರಸಭೆ ಮಾಜಿಸದಸ್ಯರಾದ ಮಹದೇವಯ್ಯ, ಮಹದೇವು, ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಜಯರಾಜು, ಉಪಾಧ್ಯಕ್ಷ ನಾಗರಾಜು, ಮಹದೇವಸ್ವಾಮಿ ರಾಜು ಪುಟ್ಟಸ್ವಾಮಿ ಹಾಜರಿದ್ದರು.20ಸಿಎಚ್ಎನ್18ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಮಾಜಿ ಪ್ರಧಾನಿ ರಾಜೀವ್‌ಗಾಂಧಿ, ಮಾಜಿ ಮುಖ್ಯ ಮಂತ್ರಿ ದೇವರಾಜ ಅರಸು ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಇಬ್ಬರು ಮಹನೀಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.