ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್‌ ನಿಷೇಧಾಜ್ಞೆ ಜಾರಿ

| Published : Mar 23 2024, 01:09 AM IST

ಸಾರಾಂಶ

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ 144ನೇ ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗುತ್ತದೆ ಎಂದು ತಹಸೀಲ್ದಾರ್ ಪ್ರಕಾಶ ಸಿಂದಗಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ 144ನೇ ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗುತ್ತದೆ ಎಂದು ತಹಸೀಲ್ದಾರ್ ಪ್ರಕಾಶ ಸಿಂದಗಿ ತಿಳಿಸಿದರು.

ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಾ.25 ರಿಂದ 6ರವರೆಗೆ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿವೆ. ಪರೀಕ್ಷೆ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ಫೋನನ್ನು ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಿದೆ. ಕೇವಲ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಬೇಸಿಕ್ ಮೊಬೈಲ್ ಪೋನ್‌ ಮಾತ್ರ ಬಳಸಬಹುದು. ತಾಲೂಕು ವ್ಯಾಪ್ತಿಯಲ್ಲಿ ನಡೆಯಲಿರುವ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200ಮೀಟರ್ ಪ್ರದೇಶವನ್ನು ಪರೀಕ್ಷಾ ದಿನಾಂಕಗಳನ್ನು ಬೆಳಗ್ಗೆ 8 ಯಿಂದ ಪರೀಕ್ಷೆ ಮುಕ್ತಾಯದವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ ಎಂದರು.

ಪರೀಕ್ಷಾ ಕೇಂದ್ರಗಳ ಪ್ರತಿಯೊಂದು ಕೊಠಡಿಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು, ಕೊಠಡಿ ಮೇಲ್ವಿಚಾರಕರು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ವಿದ್ಯಾರ್ಥಿಗಳು ಮೊಬೈಲ್ ತರದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.