ತೂಬಿನಕೆರೆಯಲ್ಲಿ ಬೋನಿಗೆ ಬಿದ್ದ 3 ವರ್ಷದ ಹೆಣ್ಣು ಚಿರತೆ..!

| Published : May 17 2024, 12:31 AM IST

ತೂಬಿನಕೆರೆಯಲ್ಲಿ ಬೋನಿಗೆ ಬಿದ್ದ 3 ವರ್ಷದ ಹೆಣ್ಣು ಚಿರತೆ..!
Share this Article
  • FB
  • TW
  • Linkdin
  • Email

ಸಾರಾಂಶ

ತೂಬಿನಕೆರೆ ಗ್ರಾಮದ ಸುತ್ತಮುತ್ತ ಹಲವು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿತ್ತು. ಈ ಬಗ್ಗೆ ಗ್ರಾಮಸ್ಥರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಚಿರತೆ ಸೆರೆ ಹಿಡಿಯಲು ಗ್ರಾಮದ ರಾಮೇಗೌಡ ಹಾಗೂ ಬೋರೇಗೌಡ ಎಂಬುವವರ ಜಮೀನಿನಲ್ಲಿ ಬೋನ್ ಇರಿಸಲಾಗಿತ್ತು. ಬುಧವಾರ ರಾತ್ರಿ 3 ವರ್ಷದ ವಯಸ್ಸಿನ ಹೆಣ್ಣು ಚಿರತೆ ಸೆರೆಯಾಗಿದೆ.

ಕನ್ನಡಪ್ರಭ ವಾರ್ತೆ ಮದ್ದೂರು

ತಾಲೂಕಿನ ಆತಗೂರು ಹೋಬಳಿ ತೂಬಿನಕೆರೆ ಗ್ರಾಮದಲ್ಲಿ ಬುಧವಾರ ರಾತ್ರಿ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯೊಂದನ್ನು ಸೆರೆ ಹಿಡಿದಿದ್ದಾರೆ.

ಗ್ರಾಮದ ಸುತ್ತಮುತ್ತ ಹಲವು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿತ್ತು. ಈ ಬಗ್ಗೆ ಗ್ರಾಮಸ್ಥರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಚಿರತೆ ಸೆರೆ ಹಿಡಿಯಲು ಗ್ರಾಮದ ರಾಮೇಗೌಡ ಹಾಗೂ ಬೋರೇಗೌಡ ಎಂಬುವವರ ಜಮೀನಿನಲ್ಲಿ ಬೋನ್ ಇರಿಸಲಾಗಿತ್ತು.

ಬುಧವಾರ ರಾತ್ರಿ 3 ವರ್ಷದ ವಯಸ್ಸಿನ ಹೆಣ್ಣು ಚಿರತೆ ಸೆರೆಯಾಗಿದೆ. ಸೆರೆಯಾಗಿರುವ ಚಿರತೆ ಚಲನವನಗಳ ಪತ್ತೆಗಾಗಿ ರೇಡಿಯೋ ಕಾಲರ್ ಮತ್ತು ಚಿಪ್ಪು ಅಳವಡಿಸಿದ್ದ ನಂತರ ಅರಣ್ಯ ಇಲಾಖೆ ಅಧಿಕಾರಿಗಳ ಸೂಚನೆ ಮೇರೆಗೆ ಕಾವೇರಿ ವನ್ಯಜೀವಿ ಅರಣ್ಯ ಧಾಮ ಅಥವಾ ನಾಗರಹೊಳೆ ಅರಣ್ಯ ಪ್ರದೇಶಕ್ಕೆ ಚಿರತೆಯನ್ನು ರವಾನಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ವಲಯ ಅರಣ್ಯ ಅಧಿಕಾರಿ ಗವಿಯಪ್ಪ ತಿಳಿಸಿದ್ದಾರೆ.

ವ್ಯಕ್ತಿ ನಾಪತ್ತೆ ಪತ್ತೆಗಾಗಿ ಠಾಣೆಗೆ ದೂರು

ನಾಗಮಂಗಲ:ತಾಲೂಕಿನ ಚೋಳೇನಹಳ್ಳಿಯಿಂದ ಕಳೆದ 6 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯನ್ನು ಪತ್ತೆಮಾಡಿ ಕೊಡುವಂತೆ ವ್ಯಕ್ತಿಯ ಸಹೋದರಿ ಬಿಂಡಿಗನವಿಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಗ್ರಾಮದ ಲೇಟ್ ವೆಂಕಟೇಶ್ ಪುತ್ರ ಲಕ್ಷ್ಮಣ (41) ಕಳೆದ 2023ರ ಸೆ.16ರಿಂದ ನಾಪತ್ತೆಯಾಗಿದ್ದು, ಸಂಬಂಧಿಕರು ಹಾಗೂ ನೆಂಟರಿಷ್ಟರ ಊರುಗಳಲ್ಲಿ ಹುಡುಕಾಟ ನಡೆಸಿದರೂ ಕೂಡ ವ್ಯಕ್ತಿ ಪತ್ತೆಯಾಗದ ಹಿನ್ನೆಲೆಯಲ್ಲಿ 2023ರ ಅ.3ರಂದು ಬಿಂಡಿಗನವಿಲೆ ಪೊಲೀಸ್ ಠಾಣೆಯಲ್ಲಿ ಲಕ್ಷ್ಮಣನ ಸಹೋದರಿ ಜಯಲಕ್ಷ್ಮಿ ದೂರು ದಾಖಲಿಸಿದ್ದರು. ಈವರೆಗೂ ವ್ಯಕ್ತಿ ಪತ್ತೆಯಾಗಿಲ್ಲ. ನಾಪತ್ತೆಯಾಗಿರುವ ಲಕ್ಷ್ಮಣ 5.4ಅಡಿ ಎತ್ತರವಿದ್ದು, ಕೋಲುಮುಖ ಸಾಧಾರಣ ಮೈಕಟ್ಟು ಕೆಂಪು ಮೈಬಣ್ಣ ಹೊಂದಿದ್ದಾನೆ. ಬೂದು ಬಣ್ಣದ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದ ಈ ವ್ಯಕ್ತಿ ಕನ್ನಡ ಮಾತನಾಡುತ್ತಾನೆಂದು ಎಂದು ದೂರಿನಲ್ಲಿ ತಿಳಿಸಲಾಗಿದೆ.ಮೇಲ್ಕಂಡ ಚಹರೆಯುಳ್ಳ ಈ ವ್ಯಕ್ತಿ ಎಲ್ಲಿಯಾದರೂ ಪತ್ತಯಾದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಥವಾ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಪೊಲೀಸ್ ಠಾಣೆ ಪಿಎಸ್‌ಐ ಅವರಿಗೆ ತಿಳಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.22ರಂದು ಸಾರ್ವಜನಿಕರ ಕುಂದು ಕೊರತೆ ಸಭೆ

ನಾಗಮಂಗಲ:ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಮೇ 22ರಂದು ಮಂಡ್ಯ ಲೋಕಾಯುಕ್ತ ವಿಭಾಗದ ಅಧಿಕಾರಿಗಳಿಂದ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಸಾರ್ವಜನಿಕರಿಂದ ದೂರು, ಅಹವಾಲುಗಳ ಸ್ವೀಕಾರ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಪೋಲಿಸ್ ಇನ್ಸ್ ಪೆಕ್ಟರ್‌ಗಳಾದ ಬಿ.ಪಿ.ಬ್ಯಾಟರಾಯನಗೌಡ, ಆರ್. ಎಂ. ಮೋಹನ್ ರೆಡ್ಡಿ, ಡಿವೈಎಸ್ಪಿ ಎಚ್.ಟಿ.ಸುನಿಲ್‌ಕುಮಾರ್ ಪಾಲ್ಗೊಳ್ಳಲಿದ್ದಾರೆ. ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ನೌಕರರುಗಳು ಸರ್ಕಾರಿ ಕೆಲಸ ಮಾಡಿಕೊಡಲು ಅನಗತ್ಯ ವಿಳಂಬ ಮಾಡಿದ ಬಗ್ಗೆ ಹಾಗೂ ಭ್ರಷ್ಟಾಚಾರದ ಬಗ್ಗೆ ತಾಲೂಕಿನ ಸಾರ್ವಜನಿಕರು ಲೋಕಾಯುಕ್ತ ಅಧಿಕಾರಿಗಳನ್ನು ಖುದ್ದಾಗಿ ಭೇಟಿ ಮಾಡಿ ತಮ್ಮ ದೂರು, ಅಹವಾಲುಗಳನ್ನು ಸಲ್ಲಿಸಬಹುದು ಎಂದು ಮಂಡ್ಯ ಕರ್ನಾಟಕ ಲೋಕಾಯುಕ್ತ ಪೋಲಿಸ್ ಅಧೀಕ್ಷಕರು ತಿಳಿಸಿದ್ದಾರೆ.