ಸಾರಾಂಶ
ಬೈಲಹೊಂಗಲ: ತಾಲೂಕಿನ ಬೆಳವಡಿ ಗ್ರಾಮದ ಅಂಗನವಾಡಿ ಕೇಂದ್ರವೊಂದರಲ್ಲಿ 7 ಅಡಿ ಉದ್ದದ ಕೇರೆ ಹಾವು ಕಾಣಿಸಿಕೊಂಡಿದ್ದು, ಅಂಗನವಾಡಿಯಲ್ಲಿನ ಮಕ್ಕಳು ಹಾಗೂ ಶಿಕ್ಷಕಿಯರು ತೀವ್ರ ಆತಂಕಕ್ಕೆ ಒಳಗಾಗಿದ್ದರು. ತಕ್ಷಣ ಉರಗ ತಜ್ಞ ಮಲ್ಲಿಕಾರ್ಜುನ ಗಾಣಿಗೇರ ಅವರನ್ನು ಸ್ಥಳಕ್ಕೆ ಕರೆಯಿಸಿದ್ದು, ಹಾವು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಬೈಲಹೊಂಗಲ: ತಾಲೂಕಿನ ಬೆಳವಡಿ ಗ್ರಾಮದ ಅಂಗನವಾಡಿ ಕೇಂದ್ರವೊಂದರಲ್ಲಿ 7 ಅಡಿ ಉದ್ದದ ಕೇರೆ ಹಾವು ಕಾಣಿಸಿಕೊಂಡಿದ್ದು, ಅಂಗನವಾಡಿಯಲ್ಲಿನ ಮಕ್ಕಳು ಹಾಗೂ ಶಿಕ್ಷಕಿಯರು ತೀವ್ರ ಆತಂಕಕ್ಕೆ ಒಳಗಾಗಿದ್ದರು. ತಕ್ಷಣ ಉರಗ ತಜ್ಞ ಮಲ್ಲಿಕಾರ್ಜುನ ಗಾಣಿಗೇರ ಅವರನ್ನು ಸ್ಥಳಕ್ಕೆ ಕರೆಯಿಸಿದ್ದು, ಹಾವು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಅಂಗನವಾಡಿಯಲ್ಲಿ 20 ಕ್ಕೂ ಹೆಚ್ಚು ಮಕ್ಕಳಿತಿದ್ದಾಗ, ಅಂಗನವಾಡಿ ಕಾರ್ಯಕರ್ತೆ ಅವರ ಪಕ್ಕದಲ್ಲಿ ಕುಳಿತಿದ್ದರು. ಈ ವೇಳೆ ಬರುತ್ತಿದ್ದ 7 ಅಡಿ ಉದ್ದದ ಕೇರೆ ಹಾವನ್ನು ಗಮನಿಸಿದ್ದಾರೆ. ತಕ್ಷಣ ಭಯಭೀತರಾಗಿ ಮಕ್ಕಳನ್ನು ಹೊರಗೆ ಕರೆದುಕೊಂಡು ಬಂದು ಉರಗ ತಜ್ಞ ಮಲ್ಲಿಕಾರ್ಜುನ ಗಾಣಿಗೇರ ಅವರನ್ನು ಕರೆಯಿಸಿದ್ದಾರೆ. ಉರಗ ತಜ್ಞ ಹಾವನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಉರಗ ತಜ್ಞ ಮಲ್ಲಿಕಾರ್ಜುನ ಗಾಣಿಗೇರ ಅವರ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು.