ಚಿಕ್ಕಮಗಳೂರು: ದುಶ್ಚಟಗಳಿಂದ ದೂರವಿದ್ದಲ್ಲಿ ಸುಂದರ ಬದುಕು ಸಾಧ್ಯ ಎಂದು ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಸಮೀಪದ ಕೊಂಬುಗತ್ತಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಪ್ರಕಾಶ್ ಹೇಳಿದರು.
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರುದುಶ್ಚಟಗಳಿಂದ ದೂರವಿದ್ದಲ್ಲಿ ಸುಂದರ ಬದುಕು ಸಾಧ್ಯ ಎಂದು ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಸಮೀಪದ ಕೊಂಬುಗತ್ತಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಪ್ರಕಾಶ್ ಹೇಳಿದರು. ನಗರದ ಮಲ್ಲಂದೂರು ರಸ್ತೆ ಸಮೀಪದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಕುಡಿತದ ಚಟದಿಂದ ಮುಕ್ತರಾದವರಿಗೆ ಏರ್ಪಡಿಸಿದ್ದ ನವ ಜೀವನೋತ್ಸವದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದರು. ಕುಡಿತದ ಚಟಕ್ಕೆ ಬಲಿಯಾಗಿ ತಮ್ಮ ಜೀವನವನ್ನೇ ಹಾಳು ಮಾಡಿಕೊಂಡವರಿಗೆ ಇದರಿಂದ ಮುಕ್ತರಾಗಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮದ್ಯವರ್ಜನ ಶಿಬಿರ ಹಮ್ಮಿಕೊಂಡಿದ್ದು, ಇದರಿಂದ ಮುಕ್ತರಾಗಿರುವವರಿಗೆ ಮುಂದೆ ಹೊಸ ಜೀವನ ಕಟ್ಟಿಕೊಳ್ಳಲು ಈ ಶಿಬಿರ ಸಹಕಾರಿಯಾಗಿದೆ. ಕತ್ತಲೆ ತುಂಬಿದ್ದ ಕುಟುಂಬಗಳಿಗೆ ಹೊಸ ಬೆಳಕು ನೀಡುವಂತಹ ಕಾರ್ಯಕ್ರಮ ವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಗ್ರಾಮೀಣ ಮಹಿಳೆಯರಲ್ಲಿ ಉಳಿತಾಯದ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಹಲವು ಯೋಜನೆಗಳಿವೆ. ಈ ಯೋಜನೆಗಳು ಮಹಿಳೆಯರ ಸ್ವಾವಲಂಬಿ ಬದುಕಿಗೆ ಆಸರೆ ಎಂದು ತಿಳಿಸಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಚಿಕ್ಕಮಗಳೂರು ತಾಲೂಕು ಯೋಜನಾಧಿಕಾರಿ ರೂಪ ಜಿ. ಜೈನ್ ಪ್ರಾಸ್ತಾವಿಕವಾಗಿ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆ ಮೂಲಕ ರಾಜ್ಯಾದ್ಯಂತ 2 ಸಾವಿರಕ್ಕೂ ಹೆಚ್ಚು ಮದ್ಯ ವರ್ಜನ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ. ಈವರೆಗೆ ಒಂದು ಲಕ್ಷಕ್ಕೂ ಹೆಚ್ಚು ಜನ ಕುಡಿತದ ಚಟದಿಂದ ಮುಕ್ತರಾಗಿದ್ದಾರೆ ಎಂದು ಮಾಹಿತಿ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ದೂರದೃಷ್ಠಿಯ ಫಲವಾಗಿ ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಗ್ರಾಮಾಂತರ ಪ್ರದೇಶದ ಜನರು ಈ ಯೋಜನೆ ಸದುಪಯೋಗಪಡಿಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬಂದು ಉತ್ತಮ ಜೀವನ ನಡೆಸುವಂತೆ ಮನವಿ ಮಾಡಿದರು.ಪತ್ರಕರ್ತ ಸಿ.ಈ. ರಂಗನಾಥ್ ಕಾರ್ಯಕ್ರಮ ಉದ್ಘಾಟಿಸಿದರು. ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ವಲಯ ಮೇಲ್ವಿ ಚಾರಕ ಚಂದ್ರಶೇಖರ್ ಸ್ವಾಗತಿಸಿದರು. ಮೇಲ್ವಿಚಾರಕರಾದ ವಿಶಾಲಾಕ್ಷಿ ವಂದಿಸಿದರು.4 ಕೆಸಿಕೆಎಂ 4ಚಿಕ್ಕಮಗಳೂರಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಛೇರಿ ಸಭಾಂಗಣದಲ್ಲಿ ಕುಡಿತದ ಚಟದಿಂದ ಮುಕ್ತ ರಾದವರಿಗೆ ಏರ್ಪಡಿದ್ದ ನವ ಜೀವನೋತ್ಸವ ಕಾರ್ಯಕ್ರಮ ಪತ್ರಕರ್ತ ಸಿ.ಈ. ರಂಗನಾಥ್ ಉದ್ಘಾಟಿಸಿದರು. ಪ್ರಕಾಶ್, ರೂಪ ಜಿ. ಜೈನ್ ಇದ್ದರು.