ಉತ್ತಮ ಭವಿಷ್ಯಕ್ಕೆ ಕಠಿಣ ಪ್ರಯತ್ನ ಅಗತ್ಯ: ಡಾ. ಗೋಪಾಲಕೃಷ್ಣ

| Published : Jan 31 2024, 02:17 AM IST

ಉತ್ತಮ ಭವಿಷ್ಯಕ್ಕೆ ಕಠಿಣ ಪ್ರಯತ್ನ ಅಗತ್ಯ: ಡಾ. ಗೋಪಾಲಕೃಷ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರತಿಯೊಬ್ಬ ವಿದ್ಯಾರ್ಥಿ ತನ್ನ ಶೈಕ್ಷಣಿಕ ಜೀವನದ ಹಂತದಲ್ಲಿ ಕಠಿಣ ಪ್ರಯತ್ನ ಮಾಡಿದಾಗ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಬಿ. ಗೋಪಾಲ ಕೃಷ್ಣ ಹೇಳಿದರು.

- ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಭವಿಷ್ಯದ ವಿದ್ಯಾಭ್ಯಾಸ-ಉದ್ಯೋಗ ಮಾರ್ಗದರ್ಶನ ಕುರಿತ ಕಾರ್ಯಗಾರ

---

-ವಿದ್ಯಾರ್ಥಿಗಳು ಸರಿಯಾದ ಸಿದ್ಧತೆಯೊಂದಿಗೆ ಪರೀಕ್ಷೆ ಎದುರಿಸಬೇಕು

- ಮಾದರಿ ವ್ಯಕ್ತಿಯಾಗಿ ಬೆಳೆಯಲು ಒಳ್ಳೆಯ ಗುರಿ, ವಿದ್ಯೆ ಹಾಗೂ ಬುದ್ದಿ ಅಗತ್ಯ,

- ನಿರ್ಧಿಷ್ಟ ಗುರಿ ಇಟ್ಟು ಕೊಳ್ಳುವಲ್ಲಿ ಮಕ್ಕಳು ವಿಫಲರಾಗಿರುತ್ತಾರೆ

-ಪ್ರತಿಯೊಬ್ಬ ವಿದ್ಯಾರ್ಥಿ ತಮ್ಮ ಮುಂದಿನ ವ್ಯಾಸಂಗದ ಬಗ್ಗೆ ಜಾಗೃತರಾಗಿರಬೇಕು

---

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಪ್ರತಿಯೊಬ್ಬ ವಿದ್ಯಾರ್ಥಿ ತನ್ನ ಶೈಕ್ಷಣಿಕ ಜೀವನದ ಹಂತದಲ್ಲಿ ಕಠಿಣ ಪ್ರಯತ್ನ ಮಾಡಿದಾಗ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಬಿ. ಗೋಪಾಲ ಕೃಷ್ಣ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಗರದ ಕುವೆಂಪು ಕಲಾಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಭವಿಷ್ಯದ ವಿದ್ಯಾಭ್ಯಾಸ ಹಾಗೂ ಉದ್ಯೋಗ ಮಾರ್ಗದರ್ಶನ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಎಸ್.ಎಸ್.ಎಲ್.ಸಿ. ಎನ್ನುವುದು ವಿದ್ಯಾರ್ಥಿ ಜೀವನದ ಅತ್ಯಂತ ಪ್ರಮುಖ ಘಟ್ಟವಾಗಿದೆ. ಅದೇ ರೀತಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ದೃಷ್ಟಿಯಿಂದ ಮುಂದಿನ ವಿದ್ಯಾಭ್ಯಾಸಕ್ಕೆ ಪ್ರವೇಶ ಪಡೆಯಲು ಉತ್ತಮ ಅಂಕಗಳಿಸ ಬೇಕಾಗುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಸರಿಯಾದ ಸಿದ್ಧತೆಯೊಂದಿಗೆ ಪರೀಕ್ಷೆ ಎದುರಿಸಬೇಕೆಂದು ಹೇಳಿದರು. ಯಾವುದೇ ರೀತಿ ಪರೀಕ್ಷೆ ಎಂದರೆ ಭಯ, ಒತ್ತಡ ಇದ್ದೆ ಇರುತ್ತದೆ. ಆದರೆ ಅದಕ್ಕಾಗಿ ನಾವು ಸರಿಯಾದ ಸಿದ್ಧತೆ ಮಾಡಿಕೊಂಡು ಪರೀಕ್ಷೆ ಬರೆದರೆ ಮಾತ್ರ ಯಶಸ್ಸುಗಳಿಸಲು ಸಾಧ್ಯವಾಗುತ್ತದೆ. ಹೀಗಾಗಿ ಪರೀಕ್ಷೆ ಬರೆಯುವ ಮುನ್ನ ಕಠಿಣ ಸಿದ್ಧತೆ ಮಾಡಿಕೊಳ್ಳುವುದು ಅತ್ಯಂತ ಪ್ರಮುಖವಾಗಿದೆ ಎಂದರು. ಒಬ್ಬ ಮಾದರಿ ವ್ಯಕ್ತಿಯಾಗಿ ಬೆಳೆಯಲು ಒಳ್ಳೆಯ ಗುರಿ, ವಿದ್ಯೆ ಹಾಗೂ ಬುದ್ದಿ ಅಗತ್ಯ, ನಿರ್ಧಿಷ್ಟ ಗುರಿಯನ್ನು ಇಟ್ಟು ಕೊಳ್ಳುವಲ್ಲಿ ಮಕ್ಕಳು ವಿಫಲರಾಗಿರುತ್ತಾರೆ. ಪ್ರಸ್ತುತ ಜಗತ್ತಿನಲ್ಲಿ ಪ್ರತಿಭಾವಂತರಿಗಷ್ಟೇ ಅವಕಾಶಗಳು ಲಭಿಸುತ್ತಿದ್ದು, ಪ್ರತಿಯೊಬ್ಬರು ತಮ್ಮ ಜೀವನವನ್ನು ರಚನಾತ್ಮಕವಾಗಿ ರೂಪಿಸಿಕೊಳ್ಳಬೇಕೆಂದು ಹೇಳಿದ ಅವರು ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಮುಂದಿನ ವ್ಯಾಸಂಗದ ಕುರಿತು ಜಾಗೃತರಾಗಿರಬೇಕು ಎಂದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸೋಮಶೇಖರ್ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿ ತಮ್ಮ ಗುರಿ ಸಾಧನೆಗೆ ಕಠಿಣ ವ್ಯಾಸಂಗ ಮಾಡಿ, ಗುರಿ ಸಾಧಿಸುವ ಮೂಲಕ ತಮ್ಮ ಪೋಷಕರಿಗೆ, ವಿದ್ಯೆ ಕಲಿಸಿದ ಗುರುಗಳಿಗೆ ಹಾಗೂ ಸಮಾಜಕ್ಕೆ ಕೀರ್ತಿ ತರಬೇಕು. ವಿದ್ಯಾರ್ಥಿನಿಲಯಗಳಲ್ಲಿ ಇಂದು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಎಲ್ಲಾ ಅನುಕೂಲತೆಗಳನ್ನು ಸರ್ಕಾರ ಮಾಡಿದೆ. ಈ ಅವಕಾಶವನ್ನು ಪ್ರತಿಯೊಬ್ಬ ವಿದ್ಯಾರ್ಥಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು. ಮೈ ಕೆರಿಯರ್ ಲ್ಯಾಬ್‌ನ ಬಿ.ಎಂ. ಶಂಕರ್ ಬೆಳ್ಳೂರು, ಆಲ್ದೂರು ಪೂರ್ಣ ಪ್ರಜ್ಞಾ ಶಾಲೆ ಗಣಿತ ಶಿಕ್ಷಕಿ ಭಾಗ್ಯಶ್ರೀ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿಯ ವಿಷಯ ಪರೀವೀಕ್ಷಕ ಕಾಂತರಾಜು, ಚಿಕ್ಕಮಗಳೂರು ತಾಲೂಕಿನ ಬಿಇಒ ಕಚೇರಿ ಇ.ಸಿ.ಒ ಕೃಷ್ಣಮೂರ್ತಿ ರಾಜ ಅರಸ್ ಪರೀಕ್ಷೆಗೆ ಹೇಗೆ ತಯಾರಿ ನಡೆಸಬೇಕೆಂಬ ಬಗ್ಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟನಾಯ್ಕ ಉಪಸ್ಥಿತರಿದ್ದರು. 30 ಕೆಸಿಕೆಎಂ 1ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ಮಂಗಳವಾರ ನಡೆದ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಭವಿಷ್ಯದ ವಿದ್ಯಾಭ್ಯಾಸ ಹಾಗೂ ಉದ್ಯೋಗ ಮಾರ್ಗದರ್ಶನ ಕುರಿತ ಕಾರ್ಯಗಾರವನ್ನು ಜಿಪಂ ಸಿಇಓ ಡಾ. ಗೋಪಾಲಕೃಷ್ಣ ಅವರು ಉದ್ಘಾಟಿಸಿದರು.