ಕೇರಳ ಪ್ರವಾಸಕ್ಕೆ ತೆರಳಿದ್ದ ಬಿಜೆಪಿ ಮುಖಂಡ ಸಾವು

| Published : May 19 2024, 01:51 AM IST

ಕೇರಳ ಪ್ರವಾಸಕ್ಕೆ ತೆರಳಿದ್ದ ಬಿಜೆಪಿ ಮುಖಂಡ ಸಾವು
Share this Article
  • FB
  • TW
  • Linkdin
  • Email

ಸಾರಾಂಶ

ದಾಬಸ್‌ಪೇಟೆ: ಕುಟುಂಬ ಸದಸ್ಯರು ಹಾಗೂ ಸ್ನೇಹಿತರ ಜೊತೆ ಪ್ರವಾಸಕ್ಕೆಂದು ಕೇರಳಕ್ಕೆ ತೆರಳಿದ್ದಾಗ ದೋಣಿ ಏರುವಾಗ ಕಾಲುಜಾರಿ ಬಿದ್ದು ಸೋಂಪುರ ಹೋಬಳಿಯ ಮಾರಗೊಂಡನಹಳ್ಳಿ ಗ್ರಾಮದ ನಿವಾಸಿ, ಬಿಜೆಪಿ ಮುಖಂಡ ಹಾಗೂ ಗುತ್ತಿಗೆದಾರ ಎಂ.ಕೆ.ಬಾಲಕೃಷ್ಣ (48) ಮೃತಪಟ್ಟಿದ್ದಾರೆ. ಇವರು ಬೆಂಗಳೂರಿನ ಟಿ.ದಾಸರಹಳ್ಳಿಯಲ್ಲಿ ಕುಟುಂಬದ ಜೊತೆ ನೆಲೆಸಿದ್ದರು.

ಕಳೆದ ಮೂರ್ನಾಲ್ಕು ದಿನಗಳ ಹಿಂದೆ ತಮ್ಮ ವಿವಾಹ ವಾರ್ಷಿಕೋತ್ಸವ ಹಾಗೂ ಜನ್ಮದಿನದ ಸಂಭ್ರಮ ಆಚರಿಸಲು ಕುಟುಂಬಸ್ಥರ ಜೊತೆ ಕೇರಳಕ್ಕೆ ಹೋಗಿದ್ದರು. ಎರಡು ದಿನ ಕೇರಳದ ಪ್ರವಾಸ ಸ್ಥಳಗಳಲ್ಲಿ ಸುತ್ತಾಡಿ ವೈಯನಾಡ್ ಪ್ರವಾಸದಲ್ಲಿದ್ದಾಗ ದೋಣಿ ಏರಲು ಹೋದಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಕಳೆದ ಮೇ 12ರಂದು ಕುಟುಂಬಸ್ಥರು ಹಾಗೂ ಸ್ನೇಹಿತರ ಜೊತೆ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಿಕೊಂಡಿದ್ದರು. ಮೃತರ ಸ್ವಗ್ರಾಮ ಮಾರಗೊಂಡನಹಳ್ಳಿಗೆ ಭೇಟಿ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ದಾಸರಹಳ್ಳಿ ಶಾಸಕ ಮುನಿರಾಜು, ಮಾಜಿ ಶಾಸಕ ಎಂ.ವಿ.ನಾಗರಾಜು ಸೇರಿದಂತೆ ಬಿಜೆಪಿ ಮುಖಂಡರು ಮೃತರ ಅಂತಿಮ ದರ್ಶನ ಪಡೆದು ಸಂತಾಪ ಕೋರಿದರು. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಮಾರಗೊಂಡನಹಳ್ಳಿಯಲ್ಲಿ ಮೇ 18ರಂದು ಒಕ್ಕಲಿಗ ಸಂಪ್ರದಾಯದಂತೆ ಮಧ್ಯಾಹ್ನ 2.30 ಗಂಟೆಗೆ ನಡೆಯಿತು.

(ಮೃತಪಟ್ಟ ಬಾಲರಾಜು)