ಪ್ರಿಯತಮೆಗೆ ಇರಿದು, ನೇಣು ಬಿಗಿದು ಭಗ್ನಪ್ರೇಮಿ ಆತ್ಮಹತ್ಯೆ!

| N/A | Published : Jul 07 2025, 11:48 PM IST / Updated: Jul 08 2025, 04:51 PM IST

ಪ್ರಿಯತಮೆಗೆ ಇರಿದು, ನೇಣು ಬಿಗಿದು ಭಗ್ನಪ್ರೇಮಿ ಆತ್ಮಹತ್ಯೆ!
Share this Article
  • FB
  • TW
  • Linkdin
  • Email

ಸಾರಾಂಶ

ಭಗ್ನ ಪ್ರೇಮಿಯೊಬ್ಬ ತನ್ನ ಪ್ರಿಯತಮೆಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿ, ಬಳಿಕ ಆಕೆಯ ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಟ್ವಾಳ ತಾಲೂಕು ಮಾರಿಪಳ್ಳ ಸಮೀಪದ ಸುಜೀರು ಎಂಬಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

  ಬಂಟ್ವಾಳ : ಭಗ್ನ ಪ್ರೇಮಿಯೊಬ್ಬ ತನ್ನ ಪ್ರಿಯತಮೆಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿ, ಬಳಿಕ ಆಕೆಯ ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಟ್ವಾಳ ತಾಲೂಕು ಮಾರಿಪಳ್ಳ ಸಮೀಪದ ಸುಜೀರು ಎಂಬಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

ಕೊಡ್ಮಾಣ್ ನಿವಾಸಿ ಸುಧೀರ್ (30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈ ಕೃತ್ಯದಿಂದ ಗಾಯಗೊಂಡಿರುವ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ವಿವರ:

ಪೊಲೀಸರ ಪ್ರಾಥಮಿಕ ತನಿಖೆಯಂತೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಫರಂಗಿಪೇಟೆ ನಿವಾಸಿ 26 ಹರೆಯದ ಯುವತಿ ಹಾಗೂ ಕೊಡ್ಮಾಣ್ ನಿವಾಸಿ ಸುಧೀರ್ (30) ಸುಮಾರು 8 ವರ್ಷಗಳಿಂದ ಪ್ರೀತಿಸುತ್ತಿದ್ದರು. ಕೆಲ ತಿಂಗಳುಗಳಿಂದ ಇವರಿಬ್ಬರ ಮಧ್ಯೆ ಮನಸ್ತಾಪ ಉಂಟಾಗಿತ್ತು.

ಆದರೂ ಆರೋಪಿ ಸುಧೀರ್ ಯುವತಿಗೆ ಆಗಾಗ್ಗೆ ಫೋನ್ ಮಾಡುವುದು, ಹಿಂಬಾಲಿಸುವುದು, ಮಾಡುತ್ತಿದ್ದ ಎನ್ನಲಾಗಿದೆ. ಸೋಮವಾರ ಬೆಳಗ್ಗೆ ಫರಂಗಿಪೇಟೆ, ಸುಜೀರ್ ಮಲ್ಲಿ ಎಂಬಲ್ಲಿಗೆ ಬಂದ ಸುಧೀರ್‌, ಯುವತಿಯನ್ನು ಮದುವೆಯಾಗುವಂತೆ ಒತ್ತಾಯಿಸಿದಾಗ ಮಾತಿಗೆ ಮಾತು ಬೆಳೆದು ಈರ್ವರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಆರೋಪಿ ಸುಧೀರ್ ತಾನು ತಂದಿದ್ದ ಚಾಕುವಿನಿಂದ ಯುವತಿಗೆ ಚುಚ್ಚಿದ್ದಾನೆ. ಆಕೆ ತಪ್ಪಿಸಿಕೊಂಡು ಹೋಗುತ್ತಾ ಬಿದ್ದಾಗ, ಆಕೆ ಮೃತಪಟ್ಟಿರಬಹುದೆಂದು ಭಾವಿಸಿ ಆರೋಪಿ ಅಲ್ಲಿಂದ ತೆರಳಿ ಯುವತಿ ವಾಸ್ತವ್ಯವಿರುತ್ತಿದ್ದ ಬಾಡಿಗೆ ಮನೆಗೆ ಹೋಗಿ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಳಿದು ಬಂದಿದೆ.

ಈ ನಡುವೆ ಮನೆಮಂದಿ ಯುವತಿಯನ್ನು ಆಸ್ಪತ್ರೆಗೆ ಸಾಗಿಸಿದ್ದು, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read more Articles on