ಸಾರಾಂಶ
ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಕೆಲ ಕಾಲ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಸಿಪಿಐ ನವೀನ, ಸಂಚಾರಿ ಠಾಣೆ ಪಿಎಸ್ಐ ಕಮಲಾಕ್ಷಿ ಹಾಗೂ ಸಿಬ್ಬಂದಿ ಅಪಘಾತಕ್ಕೀಡಾದ ವಾಹನಗಳನ್ನು ರಸ್ತೆ ಬದಿಗೆ ಸರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಕನ್ನಡಪ್ರಭ ವಾರ್ತೆ ಮದ್ದೂರು
ಅಯ್ಯಪ್ಪ ಸ್ವಾಮಿ ಭಕ್ತರಿದ್ದ ಬಸ್ ಗೆ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಡಿಕ್ಕಿಯಾಗಿ ಇಬ್ಬರು ಭಕ್ತರು ಹಾಗೂ ಬಸ್ ಚಾಲಕ ತೀವ್ರವಾಗಿ ಗಾಯಗೊಂಡು 22 ಮಂದಿ ಭಕ್ತರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಹೊರವಲಯದ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ಜರುಗಿದೆ.ಬೆಂಗಳೂರು ದಕ್ಷಿಣ ಜಿಲ್ಲೆ ಬಂಡಯ್ಯನಪಾಳ್ಯದ ಯೋಗೇಶ್, ಮಂಜುನಾಥ್, ಬಸ್ ಚಾಲಕ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಶೇಖರ್ ಗಾಯಗೊಂಡು ಮಂಡ್ಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನ ಕುಂಬಳಗೂಡಿನಿಂದ 22 ಮಂದಿ ಮಿನಿ ಬಸ್ ನಲ್ಲಿ ಶಬರಿಮಲೆ ಯಾತ್ರೆಗೆ ತೆರಳುತ್ತಿದ್ದರು. ಬೆಂಗಳೂರು- ಮೈಸೂರು ಹೆದ್ದಾರಿಯ ಎಲಿವೇಟೆಡ್ ರಸ್ತೆಯಲ್ಲಿ ಮಿನಿ ಬಸ್ ಪಂಚರ್ ಆಗಿದೆ. ಈ ವೇಳೆ ಚಾಲಕ ಇಬ್ಬರು ಭಕ್ತರ ಸಹಾಯದಿಂದ ಟೈರ್ ಬದಲಾವಣೆ ಮಾಡುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಸಿಲಿಂಡರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹಿಂದಿನಿಂದ ಬಸ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಕೆಲ ಕಾಲ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಸಿಪಿಐ ನವೀನ, ಸಂಚಾರಿ ಠಾಣೆ ಪಿಎಸ್ಐ ಕಮಲಾಕ್ಷಿ ಹಾಗೂ ಸಿಬ್ಬಂದಿ ಅಪಘಾತಕ್ಕೀಡಾದ ವಾಹನಗಳನ್ನು ರಸ್ತೆ ಬದಿಗೆ ಸರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಈ ಸಂಬಂಧ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲುಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.;Resize=(128,128))
;Resize=(128,128))
;Resize=(128,128))
;Resize=(128,128))