ಸಾರಾಂಶ
ಕನ್ನಡ ಸಾಹಿತ್ಯ ಪರಿಷತ್ತಿನ 110ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಡಾ.ವೈ.ಎಂ.ಯಾಕೊಳ್ಳಿ ಅಭಿಪ್ರಾಯ
ಕನ್ನಡಪ್ರಭ ವಾರ್ತೆ ಸವದತ್ತಿ
ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಅಸ್ಮಿತೆಯನ್ನು ಉಳಿಸುವ ಕೆಲಸವನ್ನು ಮಾಡುತ್ತ ಬಂದಿದ್ದು, ಕನ್ನಡ ನೆಲ, ಜನ, ಜಲ, ಭಾಷೆ ಸಾಹಿತ್ಯವನ್ನು ಪೋಷಿಸುವ ಕೆಲಸವನ್ನು ನಿರಂತರವಾಗಿ ಮುನ್ನಡೆಸಿಕೊಂಡು ಬಂದಿದೆ ಎಂದು ತಾಲೂಕು ಕಸಾಪ ಅಧ್ಯಕ್ಷ ಡಾ.ವೈ.ಎಂ.ಯಾಕೊಳ್ಳಿ ಹೇಳಿದರು.ಪಟ್ಟಣದ ಸ್ವಾಮಿ ವಿವೇಕಾನಂದ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 110ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಮಾಜಿಕ ಬದುಕಿನಲ್ಲಿ ಎಲ್ಲವನ್ನು ಅರಿತುಕೊಳ್ಳಲು ನೂರು ಭಾಷೆಗಳನ್ನು ಕಲಿಯಿರಿ. ಆದರೆ, ಕನ್ನಡವನ್ನು ಹೃದಯದಲ್ಲಿಟ್ಟು ಪೂಜಿಸಿ ಗೌರವಿಸಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ತಿಳಿಸಿದರು.
ನಿಕಟಪೂರ್ವ ಅಧ್ಯಕ್ಷ ಬಿ.ವಿ.ಬಿ ನರಗುಂದ ಉದ್ಘಾಟಿಸಿದರು. ನ್ಯಾಯವಾದಿ ಸಿ.ಬಿ.ದೊಡಗೌಡರ, ಮುನವಳ್ಳಿ ಕಸಾಪ ಹೋಬಳಿ ಘಟಕದ ಅಧ್ಯಕ್ಷ ಮೊಹನ ಸರ್ವಿಯವರು ಕನ್ನಡ ಸಾಹಿತ್ಯ ಪರಿಷತ್ತು ನಡೆದ ಬಂದ ದಾರಿ ವಿವರಿಸಿದರು.ಕಸಾಪ 110ನೇ ಸಂಸ್ಥಾಪನ ದಿನಾಚರಣೆಯ ಕಾರ್ಯಕ್ರಮದಲ್ಲಿ ಶ್ರಮಿಕರತ್ನ ರಾಜ್ಯ ಪ್ರಶಸ್ತಿ ಪುರಸ್ಕೃತ ಕನ್ನಡಪ್ರಭ ಹಿರಿಯ ವರದಿಗಾರರಾದ ಸುರೇಶ ಭೀಮಪ್ಪ ಬಾಳೋಜಿ ಮತ್ತು ರಂಗ ಸಂಮಾನ ಪ್ರಶಸ್ತಿ ಪುರಸ್ಕೃತ ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆ ಗೌರವಾಧ್ಯಕ್ಷ ಝಕಿರ ನದಾಫ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಸ್ವಾಮಿ ವಿವೇಕಾನಂದ ಕಾಲೇಜಿನ ಅಧ್ಯಕ್ಷ ಡಾ.ಮೌನೇಶ್ವರ ಅರ್ಕಸಾಲಿ, ಜಿ.ವೈ.ಕರಮಲ್ಲಪ್ಪನವರ, ಭೀಮರಡ್ಡಿ ಹೊಸೂರ, ಬಿ.ಬಿ.ಹುಲಗೊಪ್ಪ ಹಾಗೂ ಕಸಾಪ ಸದಸ್ಯರು ಮತ್ತು ಸ್ವಾಮಿ ವಿವೇಕಾನಂದ ಕಾಲೇಜಿನ ಸಿಬ್ಬಂದಿಯವರು ಉಪಸ್ಥಿತರಿದ್ದರು.