ಸಾರಾಂಶ
- ತರೀಕೆರೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ, ತರೀಕೆರೆಇಂದಿನ ಯುವ ಜನತೆ ದುಶ್ಟಟಗಳಿಗೆ ಬಲಿಯಾಗದೆ ತಮ್ಮ ಭವಿಷ್ಯವನ್ನು ಉತ್ತಮ ಪಡಿಸಿಕೊಳ್ಳಬೇಕು. ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಪಾಲಿಸಬೇಕು ಎಂದು ಹಿರಿಯ ವಕೀಲ ಎಸ್.ಸುರೇಶ್ ಚಂದ್ರ ಹೇಳಿದರು.ತಾಲೂಕು ಕಾನೂನು ಸೇವಾ ಸಮಿತಿ. ವಕೀಲರ ಸಂಘ, ಸರ್ಕಾರಿ ಕೈಗಾರಿಕಾ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಸರ್ಕಾರಿ ಕೈಗಾರಿಕಾ ಸಂಸ್ಥೆಯಲ್ಲಿ ರಾಷ್ಟ್ರೀಯ ಯುವ ದಿನ ಅಂಗವಾಗಿ ಏರ್ಪಡಿಸಿದ್ದ ಕಾನೂನು ಸಾಕ್ಷರತಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಇಂದಿನ ಯುವ ಜನತೆ ದುಶ್ಟಟಗಳಿಂದ ಬದುಕನ್ನು ನಾಶ ಪಡಿಸಿಕೊಳ್ಳಬಾರದು ಎಂದು ತಿಳಿಸಿದರು. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕಿರಿಯ ತರಬೇತಿ ಅಧಿಕಾರಿ ರವಿ ದಳವಾಯಿ ಜ್ಞಾನದ ಅರಿವು ಮತ್ತು ತಂತ್ರಜ್ಞಾನದ ಬಗ್ಗೆ ತಿಳಿಸಿದರೆ, ವಕೀಲೆ ಮಮತ ಭವ್ಯ ಭಾರತ ನಿರ್ಮಾಣದಲ್ಲಿ ಯುವಕರ ಪಾತ್ರ ವಿಷಯದ ಬಗ್ಗೆ ಉಪನ್ಯಾಸ ನೀಡಿ, ಮೊಬೈಲನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಬೇಕು ಎಂದು ಸಲಹೆ ಮಾಡಿದರು.
ಕಿರಿಯ ತರಬೇತಿ ಅಧಿಕಾರಿ ಚಂದ್ರಶೇಖರ್ ಎಸ್. ವಿಭೂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಕಿರಿಯ ತರಬೇತಿ ಅಧಿಕಾರಿ ಪ್ರಸನ್ನಕುಮಾರ್, ಕಾನೂನು ಸೇವಾ ಸಮಿತಿ ಅಡಳಿತ ಸಹಾಯಕ ಕೆ.ಪರಮೇಶ್ವರ, ಎಲ್ಲ ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಾದಿಕ್ ಸ್ವಾಗತಿಸಿದರು. ರಂಜಿತ ಪ್ರಾರ್ಥಿಸಿದರು. ಸುರೇಶ್ ನಿರೂಪಿಸಿದರು.13ಕೆಟಿಆರ್.ಕೆ.1ಃ
ತರೀಕೆರೆಯಲ್ಲಿ ಏರ್ಪಡಿಸಿದ್ದ ಕಾನೂನು ಸಾಕ್ಷರತಾ ಕಾರ್ಯಕ್ರಮ ಉದ್ಘಾಟನೆಯನ್ನು ಹಿರಿಯ ವಕೀಲ ಎಸ್.ಸುರೇಶ್ ಚಂದ್ರ ನೆರವೇರಿಸಿದರು. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕಿರಿಯ ತರಬೇತಿ ಅಧಿಕಾರಿಗಳಾದರವಿ ದಳವಾಯಿ ಮತ್ತಿತರರು ಇದ್ದರು.