ರಾಷ್ಟ್ರೀಯ ಲಿಂಗಾಯತ ಮಹಿಳಾ ಸಮಾವೇಶ ಯಶಸ್ವಿಗೊಳಿಸಲು ಕರೆ

| Published : Dec 22 2023, 01:30 AM IST

ಸಾರಾಂಶ

ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಮಾವೇಶದಲ್ಲಿ ಭಾಗವಹಿಸಬೇಕು ಹಾಗೂ ಜಾಗತಿಕ ಲಿಂಗಾಯತ ಮಹಾಸಭಾದ ಸದಸ್ಯತ್ವವನ್ನು ನೋಂದಣಿಯನ್ನು ಮಾಡಿಸಬೇಕು. 2024ರ ಜನವರಿ 20, 21ರಂದು ಬೆಳಗಾವಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಮಹಿಳಾ ಸಮಾವೇಶದಲ್ಲಿ ಕುಷ್ಟಗಿ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕು.

ಕುಷ್ಟಗಿ: 2024ರ ಜನವರಿ 20, 21ರಂದು ಬೆಳಗಾವಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಮಹಿಳಾ ಸಮಾವೇಶದಲ್ಲಿ ಕುಷ್ಟಗಿ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದು ಕೊಪ್ಪಳ ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಅರ್ಚನಾ ಸಸಿಮಠ ಕರೆ ನೀಡಿದರು.

ಪಟ್ಟಣದ ಬಸವ ಭವನದಲ್ಲಿ ರಾಷ್ಟ್ರೀಯ ಲಿಂಗಾಯತ ಮಹಿಳಾ ಸಮಾವೇಶದ ಪ್ರಚಾರಾರ್ಥವಾಗಿ ನಡೆದ ಕುಷ್ಟಗಿ ತಾಲೂಕು ಜಾಗತಿಕ ಲಿಂಗಾಯತ ಮಹಾಸಭಾದ ತಾಲೂಕು ಮಹಿಳಾ ಘಟಕದ ಆಯ್ಕೆಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಮಾವೇಶದಲ್ಲಿ ಭಾಗವಹಿಸಬೇಕು ಹಾಗೂ ಜಾಗತಿಕ ಲಿಂಗಾಯತ ಮಹಾಸಭಾದ ಸದಸ್ಯತ್ವವನ್ನು ನೋಂದಣಿಯನ್ನು ಮಾಡಿಸಬೇಕು ಎಂದರು.

ಇದೇ ವೇಳೆ ಕುಷ್ಟಗಿ ತಾಲೂಕು ಮಹಿಳಾ ಘಟಕದ ಅಧ್ಯಕ್ಷರನ್ನಾಗಿ ಗೌರಮ್ಮ ಕುಡತಿನಿ ಅವರನ್ನು, ಉಪಾಧ್ಯಕ್ಷರನ್ನಾಗಿ ರತ್ನಾ ಪಡಿ ಅವರನ್ನು, ಪ್ರಧಾನ ಕಾರ್ಯದರ್ಶಿಗಳಾಗಿ ಶಿಲ್ಪಾ ಸುಂಕದವರನ್ನು, ಸಹ ಕಾರ್ಯದರ್ಶಿಗಳಾಗಿ ಬಸವರಾಜೇಶ್ವರಿ ಪಾಟೀಲ್ ಅವರನ್ನು ಸಭೆಯಲ್ಲಿ ಸರ್ವಾನುಮತಿಯಿಂದ ಆಯ್ಕೆ ಮಾಡಲಾಯಿತು. ಪೂರ್ಣ ಪ್ರಮಾಣದ ತಾಲೂಕ ಸಮಿತಿಯನ್ನು ಮಾಡುವ ಜವಾಬ್ದಾರಿಯನ್ನು ಅಧ್ಯಕ್ಷರಿಗೆ ನೀಡಲಾಯಿತು. ಈ ಸಭೆಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷರಾದ ಹನುಮೇಶ ಕಲ್ಮಂಗಿ, ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ಶೇಖರ ಇಂಗಳದಾಳ, ಕುಷ್ಟಗಿ ತಾಲೂಕು ಅಧ್ಯಕ್ಷರಾದ ಟಿ ಬಸವರಾಜ ಅವರು ಹಾಗೂ ಕುಷ್ಟಗಿ ತಾಲೂಕು ಜಾಗತಿಕ ಲಿಂಗಾಯತ ಮಹಾಸಭಾ ಸದಸ್ಯರು ಈ ಸಭೆಯಲ್ಲಿ ಭಾಗವಹಿಸಿದ್ದರು.