ಕ್ಯಾನ್ಸರ್‌ಪೀಡಿತ ಬಾಲಕನ ಪೊಲೀಸ್‌ ಅಧಿಕಾರಿಯಾಗುವ ಕನಸು ಪೂರೈಕೆ

| Published : Mar 03 2024, 01:30 AM IST

ಕ್ಯಾನ್ಸರ್‌ಪೀಡಿತ ಬಾಲಕನ ಪೊಲೀಸ್‌ ಅಧಿಕಾರಿಯಾಗುವ ಕನಸು ಪೂರೈಕೆ
Share this Article
  • FB
  • TW
  • Linkdin
  • Email

ಸಾರಾಂಶ

ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ 13 ವರ್ಷದ ಬಾಲಕನೊಬ್ಬ ಒಂದು ದಿನದ ಮಟ್ಟಿಗೆ ಪೊಲೀಸ್‌ ಅಧಿಕಾರಿಯಾಗಿ ತನ್ನ ಆಸೆಯನ್ನು ಈಡೇರಿಸಿಕೊಂಡಿದ್ದಾನೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ 13 ವರ್ಷದ ಬಾಲಕನೊಬ್ಬ ಒಂದು ದಿನದ ಮಟ್ಟಿಗೆ ಪೊಲೀಸ್‌ ಅಧಿಕಾರಿಯಾಗಿ ತನ್ನ ಆಸೆಯನ್ನು ಈಡೇರಿಸಿಕೊಂಡಿದ್ದಾನೆ.

ಮೋಸಿನ್‌ ರಾಜ್‌ ಎಂಬ ಬಾಲಕ ಕ್ಯಾನ್ಸರ್‌ನಿಂದ ಬಳುತ್ತಿದ್ದು, ಕಿದ್ವಾಯಿ ಗಂಥಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈತ ಪೊಲೀಸ್‌ ಅಧಿಕಾರಿಯಾಗುವ ಕನಸು ಕಂಡಿದ್ದ. ಈ ವಿಚಾರ ತಿಳಿದು ದಕ್ಷಿಣ ವಿಭಾಗದ ಡಿಸಿಪಿ ಶಿವಪ್ರಕಾಶ್‌ ಅವರು ಆ ಬಾಲಕನನ್ನು ಶನಿವಾರ ತಮ್ಮ ಕಚೇರಿಗೆ ಕರೆಸಿ ಒಂದು ದಿನದ ಮಟ್ಟಿಗೆ ಪೊಲೀಸ್‌ ಅಧಿಕಾರಿಯಾಗುವ ಅವಕಾಶ ಕಲ್ಪಿಸಿದ್ದರು. ಈ ಮೂಲಕ ಆ ಬಾಲಕನ ಆಸೆಯನ್ನು ಈಡೇರಿಸಿದರು.

ಬೆಂಗಳೂರು ನಗರ ಪೊಲೀಸ್‌, ಪರಿಹಾರ ಸಂಸ್ಥೆ ಹಾಗೂ ಕಿದ್ವಾಯಿ ಆಸ್ಪತ್ರೆ ಸಹಯೋಗದಲ್ಲಿ ಕ್ಯಾನ್ಸರ್‌ ಪೀಡಿತ ಮಕ್ಕಳ ಪೊಲೀಸ್ ಅಧಿಕಾರಿಯಾಗುವ ಆಸೆಯನ್ನು ಈಡೇರಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಆಗಾಗ ಇಂತಹ ಮಕ್ಕಳಿಗೆ ಒಂದು ದಿನದ ಮಟ್ಟಿಗೆ ಪೊಲೀಸ್‌ ಅಧಿಕಾರಿಯಾಗುವ ಅವಕಾಶ ಕಲ್ಪಿಸಲಾಗುತ್ತಿದೆ.