ಸಾರಾಂಶ
ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟ ಘಟನೆ ಕಿತ್ತೂರು ಕೈಗಾರಿಕಾ ಪ್ರದೇಶದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದೆ.
ಕನ್ನಡಪ್ರಭ ವಾರ್ತೆ ಚನ್ನಮ್ಮನ ಕಿತ್ತೂರು
ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟ ಘಟನೆ ಕಿತ್ತೂರು ಕೈಗಾರಿಕಾ ಪ್ರದೇಶದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದೆ.ಚಿಕ್ಕೋಡಿ ತಹಸೀಲ್ದಾರ್ ಕಚೇರಿ ನೌಕರ ಅಮಿತ್ ರಾವ್ ಶಿಂದೆ (35) ಮೃತ ದುರ್ದೈವಿ. ಬೆಂಗಳೂರಿನಿಂದ ಸ್ಥಗ್ರಾಮ ಅಕ್ಕೋಳ ಗೆ ಹೋಗುತ್ತಿರುವ ವೇಳೆ ಮುಂಜಾನೆ 6 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಬೆಳಗಾವಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಕೊನೆಯುಸಿರು ಎಳೆದಿದ್ದಾನೆ.
ಕಾರಿನಲ್ಲಿ 4 ಜನರು ಸಂಚರಿಸುತ್ತಿದ್ದರು.ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಪೋಲಿಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಕಿತ್ತೂರು ಸಿಪಿಐ ಶಿವಾನಂದ ಗುಡಗನಟ್ಟಿ, ಪಿಎಸ್ಐ ಪ್ರವೀಣ ಗಂಗೋಳ ಭೆಟ್ಟಿ ನೀಡಿ ಪರಿಶೀಲಿಸಿದ್ದಾರೆ.ಕಿತ್ತೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.