ಸಾರಾಂಶ
ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೂ ಕಾರಣವಾಗಿದೆ.
ಕನ್ನಡಪ್ರಭ ವಾರ್ತೆ ಉಡುಪಿರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಉಚಿತ ಯೋಜನೆಗಳ ಜೊತೆ ಬಾಂಬ್ ಕೂಡ ಉಚಿತವಾಗಿ ಸಿಗುತ್ತದೆ ಎಂದು ಹೇಳಿ ಸೆಲ್ಫಿ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ ಮಲ್ಪೆಯ ಗರಡಿಮಜಲು ನಿವಾಸಿ ದಿವಾಕರ ಕೋಟ್ಯಾನ್ ಎಂಬವರ ಮೇಲೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ಬಾಂಬ್ ಸ್ಪೋಟದ ಘಟನೆಯ ಹಿನ್ನೆಲೆಯಲ್ಲಿ, ದಿವಾಕರ್ ಕೋಟ್ಯಾನ್ ಸ್ವತಃ ತಾವೇ ಮಾಡಿರುವ ವಿಡಿಯೋ ಮಾಡಿ ಲೇವಡಿ ಮಾಡಿದ್ದರು.ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೂ ಕಾರಣವಾಗಿದೆ. ದಿವಾಕರ್ ಕೋಟ್ಯಾನ್ ರಾಜ್ಯ ಸರ್ಕಾರದ ಯೋಜನೆಗಳನ್ನು ಲೇವಡಿ ಮಾಡಿದ್ದಾರೆ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿದ್ದಾರೆ ಎಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಮಲ್ಪೆ ಪೊಲೀಸ್ ಠಾಣೆಗೆ ದೂರು ನೀಡಿತ್ತು. ಅದರಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
;Resize=(128,128))
;Resize=(128,128))