ಸಾರಾಂಶ
ಸಿಡಿಹಬ್ಬದ ಅಂಗವಾಗಿ ಸುತ್ತಮುತ್ತಲ ಗ್ರಾಮಗಳಲ್ಲಿ ಶ್ರೀಚೌಡೇಶ್ವರಿ ಮತ್ತು ಶ್ರೀ ಹೊಂಬಾಳಮ್ಮ ದೇವಿಯ ಕರಗಗಳನ್ನು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಈ ವೇಳೆ ಗ್ರಾಮಸ್ಥರು ಕರಗಳಿಗೆ ಭಕ್ತಿ ಪೂರ್ವಕವಾಗಿ ಪೂಜೆ ಸಲ್ಲಿಸಿ, ಪ್ರಾರ್ಥಿಸಿದರು. ನಂತರ ರಾತ್ರಿ ಹೆಬ್ಬಾರೆ ಉತ್ಸವ, ಭಕ್ತರಿಗೆ ಅನ್ನಸಂತರ್ಪಣೆ ಹಾಗೂ ಮನರಂಜನಾ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದವು. ಸಿಡಿ ಉತ್ಸವದ ಅಂಗವಾಗಿ ಗುರುವಾರ ಬೆಳಗ್ಗೆಯಿಂದಲೇ ವಿವಿಧ ಪೂಜೆಗಳು ನಡೆದವು.
ಕನ್ನಡಪ್ರಭ ವಾರ್ತೆ ಮಂಡ್ಯ
ತಾಲೂಕಿನ ಸಂತೆಕಸಲಗೆರೆ ಗ್ರಾಮದಲ್ಲಿ ಬುಧವಾರ ಶ್ರೀಚೌಡೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವದ ಅಂಗವಾಗಿ ಸಿಡಿ ಹಬ್ಬ ನಡೆಯಿತು.ಸಿಡಿಹಬ್ಬದ ಅಂಗವಾಗಿ ಸುತ್ತಮುತ್ತಲ ಗ್ರಾಮಗಳಲ್ಲಿ ಶ್ರೀಚೌಡೇಶ್ವರಿ ಮತ್ತು ಶ್ರೀ ಹೊಂಬಾಳಮ್ಮ ದೇವಿಯ ಕರಗಗಳನ್ನು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಈ ವೇಳೆ ಗ್ರಾಮಸ್ಥರು ಕರಗಳಿಗೆ ಭಕ್ತಿ ಪೂರ್ವಕವಾಗಿ ಪೂಜೆ ಸಲ್ಲಿಸಿ, ಪ್ರಾರ್ಥಿಸಿದರು.
ನಂತರ ರಾತ್ರಿ ಹೆಬ್ಬಾರೆ ಉತ್ಸವ, ಭಕ್ತರಿಗೆ ಅನ್ನಸಂತರ್ಪಣೆ ಹಾಗೂ ಮನರಂಜನಾ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದವು. ಸಿಡಿ ಉತ್ಸವದ ಅಂಗವಾಗಿ ಗುರುವಾರ ಬೆಳಗ್ಗೆಯಿಂದಲೇ ವಿವಿಧ ಪೂಜೆಗಳು ನಡೆದವು. ಗ್ರಾಮದ ದೇಗುಲದ ಬಳಿ ಹದ್ದು ಮೂರು ಸುತ್ತು ಹಾಕಿದ ನಂತರ ಮಧ್ಯಾಹ್ನ 2.30ರ ವೇಳೆಗೆ ಸಿಡಿ ಉತ್ಸವ ಸಂಭ್ರಮದಿಂದ ಜರುಗಿತು.ಸಿಡಿ ಮರಕ್ಕೆ ಪೂಜಾರಿಯನ್ನು ಕಟ್ಟಿ ಮೂರು ಸುತ್ತು ಸುತ್ತಲಾಯಿತು. ಈ ವೇಳೆ ಭಕ್ತರು ಬಾಳೆಹಣ್ಣು ಎಸೆದು ಹರಕೆ ತೀರಿಸಿದರು. ಈ ವೇಳೆ ಸಾವಿರಾರು ಭಕ್ತರು ಪಾಲ್ಗೊಂಡಿದರು. ಭಕ್ತರಿಗೆ ಲಘು ಪ್ರಸಾದ, ನೀರು, ಮಜ್ಜಿಗೆ ವಿತರಣೆ ಮಾಡಲಾಯಿತು.
ಇಂದು ಕಾಳೇಶ್ವರಸ್ವಾಮಿ ಜಾತ್ರಾ ಮಹೋತ್ಸವಹಲಗೂರು:ಸಮೀಪದ ಯತ್ತಂಬಾಡಿ ಕಾಳೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಮಾ.28 ರಿಂದ ಮಾ.30 ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ. ಮಾ. 28 ರಂದು ರಾತ್ರಿ 8 ರಿಂದ 10 ಗಂಟೆಯವರೆಗೆ ವೀರ ಮಕ್ಕಳ ಕುಣಿತ, ಮಧ್ಯರಾತ್ರಿವರೆಗೆ ಶಿಂಷಾ ನದಿಯಲ್ಲಿ ಹೂ ಹೊಂಬಾಳೆ ಮತ್ತು ವಿಶೇಷ ಪೂಜಾ ಕಾರ್ಯಕ್ರಮ, ದೇವರ ಮೆರವಣಿಗೆ ನಡೆಯಲಿದೆ.ಮಾ.29 ರಂದು ಬೆಳಗ್ಗೆ 9 ರಿಂದ 10 ಗಂಟೆಯವರೆಗೆ ಒಲೆಬಂಡಿ ಕಾರ್ಯಕ್ರಮ, ಸಂಜೆ ಮರವಣಿಗೆ ಮತ್ತು ದೇವರ ಉತ್ಸವ, ರಾತ್ರಿ ನೈವೇದ್ಯ, ಮಾ. 30 ರಂದು ದೇಗುಲದಲ್ಲಿ ವಿಶೇಷ ಪೂಜೆಯೊಂದಿಗೆ ಜಾತ್ರೋತ್ಸವಕ್ಕೆ ತೆರೆ ಬೀಳಲಿದೆ. ಸರ್ಕಾರದ ಆದೇಶದಂತೆ ದೇವಾಲಯದ ಆವರಣದಲ್ಲಿ ಪ್ರಾಣಿ ಬಲಿ ನಿಷೇಧ ಮಾಡಲಾಗಿದೆ. ಭಕ್ತಾಧಿಗಳು ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.