ಸ್ವಚ್ಛ ಪರಿಸರದಿಂದ ರೋಗಗಳು ಹರಡುವುದಿಲ್ಲ

| Published : Oct 05 2024, 01:30 AM IST

ಸಾರಾಂಶ

ನಮ್ಮ ಸುತ್ತಮುತ್ತಲಿನ ವಾತಾವರಣವನ್ನು ಶುಚಿಯಾಗಿ ಇಟ್ಟುಕೊಂಡರೆ ಯಾವ ಮನುಷ್ಯರಿಗೂ ಕೂಡ ಯಾವುದೇ ರೋಗರುಜಿನಗಳು ಹರಡುವುದಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕೂಡ ತಮ್ಮ ಮನೆಯ ಸುತ್ತಮುತ್ತಲಿನ ವಾತಾವರಣವನ್ನು ಶುಚಿಯಾಗಿ ಇಟ್ಟುಕೊಳ್ಳುವ ಕಡೆ ಹೆಚ್ಚಿನ ಗಮನವನ್ನು ಹರಿಸಬೇಕು. ಈಗಾಗಲೇ ನಾವು ಕೂಡ ನಮ್ಮ ಸರ್ಕಾರಿ ಆಸ್ಪತ್ರೆಯ ಆವರಣದ ಸುತ್ತಮುತ್ತ ಯಾವುದೇ ವ್ಯಕ್ತಿಯ ಕಸ, ಕಡ್ಡಿಗಳನ್ನು ಹಾಕದೆ ಶುಚಿತ್ವದ ಬಗ್ಗೆ ಹೆಚ್ಚು ಗಮನಹರಿಸುತ್ತಿದ್ದೇವೆ ಎಂದು ವೈದ್ಯಾಧಿಕಾರಿ ಡಾ. ವಿ.ಮಹೇಶ್ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡರೆ ರೋಗ ರುಜಿನಗಳು ಹರಡುವುದಿಲ್ಲ ಎಂದು ಪಟ್ಟಣದ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ವಿ.ಮಹೇಶ್ ತಿಳಿಸಿದ್ದಾರೆ.

ಪಟ್ಟಣದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್‌ ಶಾಸ್ತ್ರಿರವರ ಜನ್ಮದಿನಾಚರಣೆ ಅಂಗವಾಗಿ ಪಟ್ಟಣ ಸರ್ಕಾರಿ ಆಸ್ಪತ್ರೆ ಮತ್ತು ಪುರಸಭೆ ಹಾಗೂ ಲಯನ್ಸ್ ಸೇವಾ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಾತನಾಡಿ, ನಮ್ಮ ಸುತ್ತಮುತ್ತಲಿನ ವಾತಾವರಣವನ್ನು ಶುಚಿಯಾಗಿ ಇಟ್ಟುಕೊಂಡರೆ ಯಾವ ಮನುಷ್ಯರಿಗೂ ಕೂಡ ಯಾವುದೇ ರೋಗರುಜಿನಗಳು ಹರಡುವುದಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕೂಡ ತಮ್ಮ ಮನೆಯ ಸುತ್ತಮುತ್ತಲಿನ ವಾತಾವರಣವನ್ನು ಶುಚಿಯಾಗಿ ಇಟ್ಟುಕೊಳ್ಳುವ ಕಡೆ ಹೆಚ್ಚಿನ ಗಮನವನ್ನು ಹರಿಸಬೇಕು. ಈಗಾಗಲೇ ನಾವು ಕೂಡ ನಮ್ಮ ಸರ್ಕಾರಿ ಆಸ್ಪತ್ರೆಯ ಆವರಣದ ಸುತ್ತಮುತ್ತ ಯಾವುದೇ ವ್ಯಕ್ತಿಯ ಕಸ, ಕಡ್ಡಿಗಳನ್ನು ಹಾಕದೆ ಶುಚಿತ್ವದ ಬಗ್ಗೆ ಹೆಚ್ಚು ಗಮನಹರಿಸುತ್ತಿದ್ದೇವೆ. ಜೊತೆಯಲ್ಲಿ ಆಸ್ಪತ್ರೆಯ ಒಳಭಾಗದಲ್ಲೂ ಕೂಡ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದೇವೆ. ಆದರೆ ಕೆಲ ರೋಗಿಗಳು ಈ ಸುಚಿತ್ರಗಳನ್ನು ಹಾಳು ಮಾಡುವ ಕೆಲಸದಲ್ಲಿ ತೊಡಗಿದ್ದಾರೆ ಎಷ್ಟೇ ಶುಚಿತ್ವಕ್ಕೆ ಆದ್ಯತೆ ನೀಡಿದರೂ ಸಹ ಅದು ವ್ಯರ್ಥವಾಗುತ್ತಿದೆ ಎಂದರು.

ಇದೇ ಸಂದರ್ಭದಲ್ಲಿ ಪುರಸಭೆಯ ಅಧ್ಯಕ್ಷ ಬನಶಂಕರಿ ರಘು ಮಾತನಾಡಿ, ಸ್ವಚ್ಛತೆ ನಮ್ಮ ಮೂಲಭೂತ ಕರ್ತವ್ಯವಾಗಿದೆ ಈ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡುವುದು ನಮ್ಮ , ನಿಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಆದರೆ ಇವುಗಳ ನಿರ್ವಹಣೆ ಬಹಳ ಕಷ್ಟಕರವಾಗಿದೆ. ನಮ್ಮ ಪುರಸಭೆಯಲ್ಲಿ ಹೆಚ್ಚು ಪೌರಕಾರ್ಮಿಕರು ಮತ್ತು ಪುರಸಭಾ ಸದಸ್ಯರು ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಿದ್ದೇವೆ. ಅದರಂತೆ ಕಳೆದ ವರ್ಷ ನಮ್ಮ ಪುರಸಭೆಗೆ ಸ್ವಚ್ಛ ಭಾರತ್ ಯೋಜನೆ ಅಡಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಗೌರವ ಸಮರ್ಪಣೆಯೂ ಕೂಡ ದೊರಕಿದೆ. ಇಂತಹ ಗೌರವ ಸಮರ್ಪಣೆಯನ್ನು ಪಡೆಯುವಲ್ಲಿ ಸಾರ್ವಜನಿಕರ ಮತ್ತು ಪುರಸಭೆ ಸಿಬ್ಬಂದಿ ಹಾಗೂ ಪೌರಕಾರ್ಮಿಕರ ಪಾತ್ರ ಬಹುಮುಖ್ಯವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಅಡಿಕೆ ಸಸಿಗಳನ್ನು ನೆಡಲಾಯಿತು. ಪುರಸಭೆಯ ಉಪಾಧ್ಯಕ್ಷೆ ರಾಣಿಕೃಷ್ಣ, ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್, ಮುಖ್ಯ ಅಧಿಕಾರಿ ಹೇಮಂತ್ ಕುಮಾರ್‌, ಆರೋಗ್ಯ ಅಧಿಕಾರಿ ರಾಜು, ಮಂಜುನಾಥ್ ಇನ್ನು ಮುಂತಾದವರು ಹಾಜರಿದ್ದರು.