ಸಾರಾಂಶ
ಕನ್ನಡಪ್ರಭ ವಾರ್ತೆ ಹಾಸನ
ಭವಿಷ್ಯದ ದೃಷ್ಟಿಯಿಂದ ಮಕ್ಕಳಿಗಾಗಿ ಹಣ ಆಸ್ತಿ ಮಾಡಿದರಷ್ಟೇ ಸಾಲದು. ಒಳ್ಳೆಯ ಪರಿಸರವೂ ಬೇಕು. ಹಾಗಾಗಿ ನಮ್ಮ ಮುಂದಿನ ಪೀಳಿಗೆಗಾಗಿ ಉತ್ತಮ ಪರಿಸರವನ್ನೇ ಆಸ್ತಿಯಾಗಿ ಕೊಡೋಣ. ಈ ನಿಟ್ಟಿನಲ್ಲಿ ಜನರು ಜಾಗೃತರಾಗಿ ಪರಿಸರ ಸಂರಕ್ಷಣೆಯಲ್ಲಿ ತೊಡಗಿ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರು ಹಾಗೂ ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ ಕರೆ ನೀಡಿದರು.ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಂಸ್ಥಾಪನೆಗೊಂಡು ೫೦ ವರ್ಷಗಳಾದ ಹಿನ್ನೆಲೆಯಲ್ಲಿ ಹಾಸನ ಹಾಗೂ ಚಿಕ್ಕಮಗಳೂರು ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ಸಹಯೋಗದಲ್ಲಿ ಮಂಗಳವಾರ ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಮೈದಾನದಲ್ಲಿ ನಡೆದ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೊರೋನಾ ಸಂದರ್ಭದಲ್ಲಿ ಉತ್ತಮ ಪರಿಸರದ ಮಹತ್ವ ಎಂಥಾದ್ದು ಎನ್ನುವುದು ಎ್ಲಲರೂ ಅರ್ಥವಾಗಬೇಕಿತ್ತು. ಏಕೆಂದರೆ ಆ ಸಂದರ್ಭದಲ್ಲಿ ಆಮ್ಲಜನಕದ ಪ್ರಾಮುಖ್ಯತೆ ಜನರಿಗೆ ಅರಿವಾಗಿದೆ. ಆದರೂ ಜನರು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಅಪಾಯ ಕಟ್ಟಿಟ್ಟಬುತ್ತಿ, ಕಾರ್ಖಾನೆಗಳು, ಕೈಗಾರಿಕೆಗಳು ಕಲುಷಿತ ನೀರನ್ನು ನದಿಗಳಿಗೆ ಬಿಡುವುದರಿಂದಲೂ ಆಗುತ್ತಿರುವ ಜಲ ಮಾಲಿನ್ಯದ ಬಗ್ಗೆ ಎಲ್ಲರೂ ಎಚ್ಚರ ವಹಿಸಬೇಕು ಎಂದರು.
ಜಾಗೃತಿ ಮೂಡಲಿ:ಜನರ ಜೀವನಶೈಲಿ ಬದಲಾದಂತೆ ಪ್ರತಿ ಹಂತ ಹಂತದಲ್ಲಿ ಕೂಡ ರಾಸಾಯನಿಕಗಳ ಬಳಕೆ ಕಡೆಗೆ ವಾಲುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಪರಿಸರದ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದರು. ಹಲವು ವರ್ಷಗಳ ಹಿಂದೆಯೇ ಪರಿಸರ ರಕ್ಷಣೆಗಾಗಿ ಅರಣ್ಯ ಸಂರಕ್ಷಣೆ ಕಾಯ್ದೆ, ವಾಯು ಮಾಲಿನ್ಯ ನಿಯಂತ್ರಣ ಕಾಯ್ದೆ, ರಾಷ್ಟ್ರೀಯ ಅರಣ್ಯ ನೀತಿ, ಪರಿಸರ ನೀತಿ, ಹಲವು ಕಾಯ್ದೆ ಹಾಗೂ ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ, ದಿನಬಳಕೆ ವಸ್ತುಗಳಲ್ಲಿ ಟನ್ ಗಟ್ಟಲೆ ಪ್ಲಾಸ್ಟಿಕ್ ಭೂಮಿ ಸೇರುತ್ತಿದೆ. ಇದರ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕೆಲಸಗಳು ಆಗಬೇಕಿದೆ. ಪರಿಸರ ಸಂರಕ್ಷಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವವರನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಸಲುವಾಗಿ ಸರ್ಕಾರ ಹಲವು ಪ್ರಶಸ್ತಿಗಳನ್ನು ನೀಡಿ ಗೌರವಿಸಿದೆ ಎಂದರು.
ಆಹಾರ ಶೈಲಿಯಲ್ಲಿ ಕೂಡ ಬದಲಾವಣೆ ಆಗುತ್ತಿದ್ದು ಸತ್ವಭರಿತ ಆಹಾರದ ಬದಲಾಗಿ ಕೇವಲ ರುಚಿಗೆ ಪ್ರಾಮುಖ್ಯತೆ ನೀಡುವ ಮೂಲಕ ತಮ್ಮ ಆರೋಗ್ಯಕ್ಕೆ ತಾವೇ ಕುತ್ತು ತಂದುಕೊಳಲಾಗುತ್ತಿದೆ. ಪರಿಸರ ರಕ್ಷಣೆ ಮಾಡಿ ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ಹಾಗೂ ಮುಂದಿನ ಪೀಳಿಗೆಗೆ ಶುದ್ಧ ಪರಿಸರ ಉಳಿಸುವ ಸಲುವಾಗಿ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.ನಗರ ಪ್ರದೇಶಗಳು ಬೆಳೆಯುತ್ತಿವೆ. ಆದರೆ ಎಲ್ಲಿಯೂ ಟ್ರೀಟ್‌ಮೆಂಟ್ ಪ್ಲಾಂಟ್‌ಗಳು ಇರುವುದಿಲ್ಲ. ಇದರ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ವೈದ್ಯಕೀಯ ತ್ಯಾಜ್ಯ ಹಾಗೂ ಇ-ತ್ಯಾಜ್ಯ ವಿಲೇವಾರಿಗೆ ಸ್ಥಳೀಯ ಆಡಳಿತ ಗಮನಹರಿಸಬೇಕು ಎಂದ ಅವರು ಭವಿಷ್ಯದಲ್ಲಿ ಮಾರಕವಾಗದಂತೆ ಎಚ್ಚರವಹಿಸಿ ಸ್ವಚ್ಛ ಸುಂದರ ಪರಿಸರಕ್ಕೆ ಎಲ್ಲರೂ ಕೈ ಜೋಡಿಸುವಂತೆ ಮನವಿ ಮಾಡಿದರು.
ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷರು ಹಾಗೂ ಶಾಸಕರಾದ ದಿನೇಶ್ ಗೂಳಿಗೌಡ ಅವರು ಮಾತನಾಡಿ, ಪರಿಸರ ಸಮತೋಲನ ಕಾಪಾಡಲು ರಾಜ್ಯದ ಒಟ್ಟು ಭೂ ಪ್ರದೇಶದಲ್ಲಿ ಶೇ.೩೩ರಷ್ಟು ಅರಣ್ಯ ಪ್ರದೇಶವಿರಬೇಕು. ಆದರೆ ಶೇ.೨೦ರಷ್ಟು ಅರಣ್ಯ ಪ್ರದೇಶವಿದ್ದು, ಇನ್ನೂ ೧೩ರಷ್ಟು ಅರಣ್ಯ ಪ್ರದೇಶದ ಕೊರತೆ ಇದೆ ಎಂದರು. ಇಂಡೋನೇಷ್ಯಾ, ಇಸ್ರೆಲ್, ಚೀನಾ ದೇಶಗಳಲ್ಲಿ ಕಾಲಕಾಲಕ್ಕೆ ಬರುತ್ತದೆ ಪ್ರಕೃತಿ ಸಹಕಾರ ಕೊಡುತ್ತದೆ, ನಮ್ಮಲ್ಲಿ ಬರ, ಪ್ರವಾಹ ಬರುತ್ತದೆ, ಭೂಕುಸಿತ, ಮಾನವ ಪ್ರಾಣಿಗಳ ಸಂಘರ್ಷ ನಡೆಯುತ್ತಲೇ ಇದೆ ಎಂದು ತಿಳಿಸಿದರು. ಪ್ರತಿದಿನ ೬೫೦೦ ವಾಹನಗಳು ನೋಂದಣಿ ಆಗುತ್ತಿವೆ. ದಿನೇ ದಿನೇ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ ಈ ನಿಟ್ಟಿನಲ್ಲಿ ಸಮೂಹ ಸಾರಿಗೆ ಬಳಕೆಗೆ ಉತ್ತೇಜನ ನೀಡಬೇಕು ಎಂದು ತಿಳಿಸಿದರು.ಆಹಾರ ಉತ್ಪಾದನೆಗಾಗಿ ಕೃಷಿ ಚಟುವಟಿಕೆಯಲ್ಲಿ ಹೆಚ್ಚಿನ ರಾಸಾಯನಿಕಗಳನ್ನು ಬಳಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸಾವಯವ ಕೃಷಿಗೆ ಹೆಚ್ಚಿನ ಆದ್ಯತೆ ನೀಡಿ ಉತ್ತೇಜನ ನೀಡಬೇಕು ಎಂದ ಅವರು ವಿದ್ಯಾರ್ಥಿಗಳು ಹಸಿರು ರಾಯಭಾರಿಗಳಾಗಬೇಕು ಎಂದು ತಿಳಿಸಿದರು.
ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶೃಂಗೇರಿಯ ಶಾಸಕರಾದ ಬಿ.ಡಿ ರಾಜೇಗೌಡ ಅವರು ಮಾತನಾಡಿ, ಬಹಳ ದೂರ ದೃಷ್ಠಿ ಹೊಂದಿದ್ದ ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಅವರು ಈ ಸಂಸ್ಥೆಯನ್ನು ಹುಟ್ಟು ಹಾಕಿದರು. ಜಲ, ವಾಯು, ಪರಿಸರವನ್ನು ಉತ್ತಮವಾಗಿ ಇಟ್ಟುಕೊಳ್ಳುವುದೇ ಈ ಸಂಸ್ಥೆಯ ಪ್ರಮುಖ ಉದ್ದೇಶವಾಗಿದೆ ಎಂದರಲ್ಲದೆ ಇಂದಿನ ದಿನಗಳಲ್ಲಿ ಇದು ಅತೀ ಅವಶ್ಯಕವು ಹಾಗೂ ಅನಿವಾರ್ಯವಾಗಿದೆ ಎಂದರು.ಸುಂದರ ಪರಿಸರ ಕಟ್ಟೋಣ:
ಸಂಸದ ಶ್ರೇಯಸ್ ಎಂ.ಪಟೇಲ್ ಅವರು ಮಾತನಾಡಿ, ಸುಂದರ ಪರಿಸರ ಕಟ್ಟುವುದು ನಮ್ಮೆಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ಗಿಡ ಮರಗಳನ್ನು ಬೆಳೆಸಿ ಮುಂದಿನ ಪೀಳಿಗೆಗೆ ಪರಿಶುದ್ದವಾದ ಪರಿಸರ ಕೊಡುವುದೆ ದೊಡ್ಡ ಆಸ್ತಿ ಎಂದು ತಿಳಿಸಿದರು. ಪರಿಸರ ಸಂರಕ್ಷಣೆಗೆ ಜಾಗೃತಿ ಮೂಡಿಸಲು ದಿಟ್ಟ ಹೆಜ್ಜೆಯಿಟ್ಟಿರುವ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನಾವೆಲ್ಲರೂ ಕೈಜೋಡಿಸೋಣ ಎಂದು ತಿಳಿಸಿದರು.ಜಿಲ್ಲೆ ಹಾಗೂ ರಾಜ್ಯದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಮುಕ್ತಗೊಳಿಸಲು ಪ್ರತಿಯೊಬ್ಬರು ಜವಾಬ್ದಾರಿಯಿಂದ ಸಮಾಜದ ಏಳಿಗೆಗಾಗಿ ವೈಯಕ್ತಿಕವಾಗಿ ಗಮನಹರಿಸಿ ದುಡಿಯಬೇಕು ಎಂದು ತಿಳಿಸಿದರು.ಆಲೂರು-ಸಕಲೇಶಪುರ ಶಾಸಕರಾದ ಸಿಮೆಂಟ್ ಮಂಜು ಮಾತನಾಡಿ, ವಿದ್ಯಾರ್ಥಿಗಳಿಗೆ ಪರಿಸರದ ಸಂರಕ್ಷಣೆ ಬಗ್ಗೆ ಅರಿವು ಮೂಡಿಸುವುದು ಅಗತ್ಯವಿದೆ. ವಿಧಾನಸೌಧವೂ ಸೇರಿದಂತೆ ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಬೇಕು. ಬಟ್ಟೆ ಕೈ ಚೀಲ ಬಳಕೆಯನ್ನು ಚಾಲ್ತಿಗೆ ತರಬೇಕು ಎಂದರು.ಜಿಲ್ಲಾಧಿಕಾರಿ ಲತಾ ಕುಮಾರಿ ಮಾತನಾಡಿ, ಪರಿಸರ ಹಾಳಾಗುತ್ತಿರುವುದನ್ನು ಬಹಳ ಗಂಭೀರವಾಗಿ ಯೋಚಿಸಬೇಕು. ಜಲ, ವಾಯು ಮಾಲಿನ್ಯ ತಡೆಗಟ್ಟುವುದು ಹಾಗೂ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆ ನಾಗರೀಕ ಕರ್ತವ್ಯ ಪ್ರಜ್ಞೆ ಇರಬೇಕು ಎಂದು ತಿಳಿಸಿದರು.ವಿಧಾನ ಪರಿಷತ್ ಶಾಸಕರಾದ ಮಧು ಜಿ.ಮಾದೇಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಮತ್ತಿತರರು ಇದ್ದರು.ಹಿರಿಯ ಪರಿಸರ ಅಧಿಕಾರಿ ಕೀರ್ತಿ ಕುಮಾರ್ ಸ್ವಾಗತಿಸಿದರು. ಪರಿಸರ ಅಧಿಕಾರಿ ಆರ್ ಭಾಸ್ಕರ್ ಸಂವಿಧಾನ ಪೀಠಕ್ಕೆ ಬೋಧಿಸಿದರು.
ಪರಿಸರ ಪ್ರಿಯದರ್ಶಿನಿ ಪ್ರಶಸ್ತಿಗೆ ಭಾಜನರಾದ ಬಿ.ಟಿ.ಮಾನವ, ಚನ್ನಬಸವೇಶ್ವರ, ಕುಮಾರ ಸ್ವಾಮಿ, ಚಿಕ್ಕಮಗಳೂರು ಜಿಲ್ಲೆಯ ಸ್ವಚ್ಛ ಟ್ರಸ್ಟ್ , ಸ್ಕೌಟ್ ಮತ್ತು ಗೈಡ್ಸ್, ಪೌರ ಕಾರ್ಮಿಕರಿಗೆ ಬಿ.ಆರ್. ಸಂತೋಷ, ಗೌರಮ್ಮ, ಎ.ಸಿ.ನಾಗರಾಜ್, ಚಿಕ್ಕಮಗಳೂರು ಜಿಲ್ಲೆಯ ಕೃಷ್ಣಕುಮಾರ್, ಗೋವಿಂದ್‌ರಾಜ್, ಸೋಮಶೇಖರ್ ಹಾಗೂ ಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪರಿಸರ ಕುರಿತು ರೀಲ್ಸ್ ಮಾಡಿ ವಿಜೇತರಾದ ವಿದ್ಯಾರ್ಥಿಗಳನ್ನುಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.;Resize=(128,128))
;Resize=(128,128))
;Resize=(128,128))