ಕಡಲ ತೀರದ ಸ್ವಚ್ಛತೆ ಪ್ರತಿಯೊಬ್ಬರ ಆದ್ಯ ಕರ್ತವ್ಯ: ಡಾ. ಚೂಂತಾರು

| Published : Feb 12 2024, 01:34 AM IST

ಕಡಲ ತೀರದ ಸ್ವಚ್ಛತೆ ಪ್ರತಿಯೊಬ್ಬರ ಆದ್ಯ ಕರ್ತವ್ಯ: ಡಾ. ಚೂಂತಾರು
Share this Article
  • FB
  • TW
  • Linkdin
  • Email

ಸಾರಾಂಶ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆಯ ಚೀಫ್ ವಾರ್ಡರ್ ಡಾ. ಮುರಲೀ ಮೋಹನ್ ಚೂಂತಾರು ನೇತೃತ್ವದಲ್ಲಿ ವಹಿಸಿದ್ದರು. ಪಣಂಬೂರು ಘಟಕದ ಪ್ರಭಾರ ಘಟಕಾಧಿಕಾರಿ ಶಿವ ನಾಯ್ಕ ಹಾಗೂ 20 ಮಂದಿ ಗೃಹರಕ್ಷಕ ಗೃಹರಕ್ಷಕಿಯರು ಇದ್ದರು.

ಕನ್ನಡಪ್ರಭ ವಾರ್ತೆ ಮಂಗಳೂರುದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಪಣಂಬೂರು ಘಟಕದ ವತಿಯಿಂದ ಭಾನುವಾರ ಪಣಂಬೂರು ಕಡಲ ತೀರದಲ್ಲಿ ತ್ಯಾಜ್ಯಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡುವ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ನಡೆಯಿತು.ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆಯ ಚೀಫ್ ವಾರ್ಡರ್ ಡಾ. ಮುರಲೀ ಮೋಹನ್ ಚೂಂತಾರು ನೇತೃತ್ವದಲ್ಲಿ ವಹಿಸಿದ್ದರು. ಈ ಸಂದರ್ಭ ಮಾತನಾಡಿದ ಅವರು, ಕಡಲ ತೀರ ಮತ್ತು ಪರಿಸರವನ್ನು ನಾವು ಸ್ವಚ್ಛವಾಗಿಡಬೇಕು. ಕಡಲ ತೀರದ ಸ್ವಚ್ಛತೆ ಕೇವಲ ಜಿಲ್ಲಾಡಳಿತದ ಜವಾಬ್ದಾರಿ ಅಲ್ಲ. ಕಡಲ ತೀರದ ಸ್ವಚ್ಛತೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಪ್ಲಾಸ್ಟಿಕ್ ತ್ಯಾಜ್ಯ, ಬಾಟಲ್ ತ್ಯಾಜ್ಯಗಳು ಮತ್ತು ಇತರ ಪ್ಲಾಸ್ಟಿಕ್ ಗಳನ್ನು ಕಡಲ ತೀರದಲ್ಲಿ ಎಸೆದಲ್ಲಿ ಆಮೆ, ಮೀನುಗಳ ಸಹಿತ ಅನೇಕ ಜಲಚರ ಜೀವಸಂಕುಲಗಳಿಗೆ ಮಾರಕವಾಗಿದ್ದು, ಅವುಗಳನ್ನು ಸಮುದ್ರಕ್ಕೆ ಎಸೆಯದಂತೆ ಸಮುದ್ರ ತೀರದಲ್ಲಿ ಪ್ರವಾಸಿಗರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು. ಕಸದ ತೊಟ್ಟಿಗಳನ್ನು ಅಲ್ಲಲ್ಲಿ ಇಡುವುದರ ಮೂಲಕ ತ್ಯಾಜ್ಯಗಳು ಸಮುದ್ರದ ನೀರಿಗೆ ಬೀಳದಂತೆ ಜಾಗ್ರತೆ ವಹಿಸಬೇಕು ಎಂದು ಕರೆ ನೀಡಿದರು. ಪಣಂಬೂರು ಘಟಕದ ಪ್ರಭಾರ ಘಟಕಾಧಿಕಾರಿ ಶಿವ ನಾಯ್ಕ ಹಾಗೂ 20 ಮಂದಿ ಗೃಹರಕ್ಷಕ ಗೃಹರಕ್ಷಕಿಯರು ಇದ್ದರು.