ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿ ರಾಜ್ಯಸಭೆ ಚುನಾವಣೆಯ ಸಂದರ್ಭ ಪಾಕ್ ಪರ ಘೋಷಣೆ ಕೂಗಿದ ಮೂರು ಮಂದಿಯನ್ನು ಪೊಲೀಸರು ಬಂಧಿಸಿರುವುದು, ಕಾಂಗ್ರೆಸ್‌ನ ಒಂದೇ ಕೋಮಿನ ಅತಿಯಾದ ಓಲೈಕೆಗೆ ತಕ್ಕ ಶಾಸ್ತಿಯಾದಂತಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪ್ರತಿಕ್ರಿಯಿಸಿದ್ದಾರೆ.ಈ ಹಿಂದೆ ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ, ಡಿಜೆ ಹಳ್ಳಿ ಕೆಜೆ ಹಳ್ಳಿ ಪ್ರಕರಣದ ಆರೋಪಿಗಳನ್ನು ‘ದೇ ಆರ್ ಮೈ ಬ್ರದರ್ಸ್’ ಎಂದಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಸಹಿತ ಸಿಎಂ ಸಿದ್ದರಾಮಯ್ಯ ಸಂಪುಟದ ಸಚಿವರಾದ ಪ್ರಿಯಾಂಕ್ ಖರ್ಗೆ, ಲಕ್ಷ್ಮೀ ಹೆಬ್ಬಾಳ್ಕರ್ ಮುಂತಾದವರು ದೇಶ ವಿರೋಧಿ ಪಾಕ್ ಪರ ಘೋಷಣೆ ಕೂಗಿದ ಭಯೋತ್ಪಾದಕರನ್ನು ಬೆಂಬಲಿಸಿ, ಅಂತಹ ಘೋಷಣೆ ನಡೆದಿಲ್ಲ ಎಂದು ಘಟನೆಯನ್ನು ಸಮರ್ಥಿಸಿಕೊಂಡಿರುವುದು ದೇಶದ್ರೋಹಕ್ಕೆ ಸಮನಾದ ಕುಕೃತ್ಯವಾಗಿದೆ.ಇದೀಗ ಕಾನೂನಾತ್ಮಕ ಪೊಲೀಸ್ ತನಿಖೆಯ ಮೂಲಕ ಮೂರು ಮಂದಿ ಭಯೋತ್ಪಾದಕರ ಬಂಧನವಾಗಿರುವ ಹಿನ್ನೆಲೆಯಲ್ಲಿ ಈ ಸಚಿವರ ಪ್ರತಿಕ್ರಿಯೆ ಏನು ಎಂಬುದು ಕುತೂಹಲಕಾರಿಯಾಗಿದೆ. ಇಂತಹ ದೇಶ ವಿರೋಧಿ ಮನಸ್ಥಿತಿಯ ಕಾಂಗ್ರೆಸ್ ಮುಖಂಡರು ರಾಜ್ಯದ ಜನತೆಯ ಕ್ಷಮೆ ಕೋರಬೇಕು ಎಂದು ಅವರು ಆಗ್ರಹಿಸಿದ್ದಾರೆ.ರಾಜ್ಯದಲ್ಲಿ ಕೇವಲ ಅಧಿಕಾರಕ್ಕೇರುವ ಸಲುವಾಗಿ ಒಂದೇ ಕೋಮಿನ ಅತಿಯಾದ ಓಲೈಕೆ ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ನಿಶ್ಚಿತ ಮುಳುವಾಗಲಿದೆ. ವಿರೋಧಿ ಕಾಂಗ್ರೆಸ್‌ಗೆ ರಾಜ್ಯದ ಜನತೆ ಮುಂದಿನ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದವರು ಹೇಳಿದ್ದಾರೆ.