ಸಾಕ್ಷರತೆಯ ಮಹತ್ವ, ಪ್ರಜ್ಞಾಪೂರ್ವಕ ಅರಿವು ಅಗತ್ಯ

| Published : Sep 11 2024, 01:07 AM IST

ಸಾರಾಂಶ

ದೊಡ್ಡಬಳ್ಳಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಲೋಕ ಶಿಕ್ಷಣ ವಿಭಾಗ), ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಇಲಾಖೆ ಮತ್ತು ಡಯಟ್, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಸಂಯುಕ್ತಾಶ್ರಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದ ಆವರಣದಲ್ಲಿ ಭಾನುವಾರ 58 ನೇ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ ಅವರು ಸಾಕ್ಷರತಾ ಧ್ವಜಾರೋಹಣ ನೆರವೇರಿಸಿ, ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಅವರು ಮಾತನಾಡಿ, ಸಾಕ್ಷರತೆಯ ಮಹತ್ವವನ್ನು ಕುರಿತು ಅರಿವು ಹೊಂದುವುದು ಅತ್ಯಗತ್ಯವಾಗಿದ್ದು, ಪ್ರತಿಯೊಬ್ಬರೂ ಕನಿಷ್ಠ ಒಬ್ಬರನ್ನು ಸಾಕ್ಷರರನ್ನಾಗಿ ಮಾಡುವ ಸಂಕಲ್ಪ ಮಾಡಬೇಕು, ಸುಶಿಕ್ಷಿತ ಸಮಾಜ ಸ್ವಾತಂತ್ರ್ಯವನ್ನು ಪ್ರಜ್ಞಾಪೂರ್ವಕವಾಗಿ ಬಳಸಿಕೊಳ್ಳುವ ಮೂಲಕ ದೇಶ ನಿರ್ಮಾಣ ಕಾರ್ಯದಲ್ಲಿ ಸಕ್ರಿಯರಾಗಬೇಕು ಎಂದು ಕರೆ ನೀಡಿದರು.

ದೇಶದ ಆರ್ಥಿಕತೆಗೆ ಸಾಕ್ಷರತೆಯ ಕೊಡುಗೆ ಮಹತ್ವದ್ದಾಗಿದ್ದು, ಆತ್ಮನಿರ್ಭರ ಭಾರತವು ಸುಶಿಕ್ಷಿತ ಭಾರತದ ಅಡಿಪಾಯದಲ್ಲಿ ನಿರ್ಮಾಣಗೊಳ್ಳುವ ಸಶಕ್ತ ಪರಿಕಲ್ಪನೆಯಾಗಿದೆ. ಜಗತ್ತಿನಲ್ಲಿ ಭಾರತದಂತಹ ಭಾಷಾ ವೈವಿಧ್ಯತೆ ಮತ್ತು ಸಾಂಸ್ಕೃತಿಕ ಬಿಂಬತೆಯನ್ನು ಹೊಂದಿರುವ ದೇಶ ಮತ್ತೊಂದಿಲ್ಲ. ಇಂದು ಭಾರತ ಜಗತ್ತಿನ ಹೊಸ ದಿಕ್ಸೂಚಿಯಾಗಿದೆ. ಭಾಷೆ ಭಿನ್ನವಾದರೂ ಭಾವ ಒಂದೇ, ಎಂಬುದು ಭಾರತೀಯತೆಯ ಮೂಲವಾಗಿದೆ ಎಂದು ಅಭಿಪ್ರಾಯಪಟ್ಟರು.

ದೇಶದಲ್ಲಿ ಜಾರಿಗೆ ಬಂದಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಪ್ರತಿಭೆಯನ್ನು ಪ್ರೋತ್ಸಾಹಿಸುವ ವೇದಿಕೆಯಾಗಿದ್ದು, ಜಾಗತಿಕ ಗುಣಮಟ್ಟಕ್ಕೆ ಒತ್ತು ನೀಡಲಾಗಿದೆ. ಬಹುಭಾಷಾ ಶಿಕ್ಷಣಕ್ಕೆ ಉತ್ತೇಜನ - ಪರಸ್ಪರ ಅರಿವು ಮತ್ತು ಶಾಂತಿ ಸ್ಥಾಪನೆಗಾಗಿ ಸಾಕ್ಷರತೆ ಎಂಬ ಘೋಷವಾಕ್ಯಕ್ಕೆ ಪೂರಕವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ‌ ನಿರ್ದೇಶಕ ಕೃಷ್ಣಮೂರ್ತಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಶಶಿಕುಮಾರ್, ಶಿಕ್ಷಕವೃಂದ‌, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಇಲಾಖಾ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

8ಕೆಡಿಬಿಪಿ1-

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ ಭಾನುವಾರ ಅಂತಾರಾಷ್ಟ್ರೀಯ ಸಾಕ್ಷರತಾ ದಿನವನ್ನು ಆಚರಿಸಲಾಯಿತು.