ಐದು ಗ್ಯಾರಂಟಿ ಯೋಜನೆಗಳ ಸಮಾವೇಶ

| Published : Mar 11 2024, 01:21 AM IST

ಸಾರಾಂಶ

ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಾದ ೫ ಗ್ಯಾರಂಟಿಗಳ ಫಲಾನುಭವಿಗಳ ಸಮಾವೇಶ ಮಾ.೧೨ ರಂದು ನಡೆಯಲಿದ್ದು, ಈ ಸಮಾವೇಶಕ್ಕೆ ರಾಜ್ಯದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಅನೇಕ ಸಂಪುಟದ ಸಚಿವರು ಆಗಮಿಸುವರು ಎಂದು ಮಾಜಿ ಸಚಿವ, ಎಂಎಸ್‌ಐಎಲ್‌ಎಂ ನಿಗಮದ ಅಧ್ಯಕ್ಷ, ಶಾಸಕ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರರಾಜ್ಯ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಾದ ೫ ಗ್ಯಾರಂಟಿಗಳ ಫಲಾನುಭವಿಗಳ ಸಮಾವೇಶ ಮಾ.೧೨ ರಂದು ನಡೆಯಲಿದ್ದು, ಈ ಸಮಾವೇಶಕ್ಕೆ ರಾಜ್ಯದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಅನೇಕ ಸಂಪುಟದ ಸಚಿವರು ಆಗಮಿಸುವರು ಎಂದು ಮಾಜಿ ಸಚಿವ, ಎಂಎಸ್‌ಐಎಲ್‌ಎಂ ನಿಗಮದ ಅಧ್ಯಕ್ಷ, ಶಾಸಕ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ೯ ತಿಂಗಳಾಗಿದ್ದು, ಸಿಎಂ ಸಿದ್ದರಾಮಯ್ಯನವರು ಚುನಾವಣಾ ಪೂರ್ವದಲ್ಲಿ ನುಡಿದಂತೆ ನಡೆದುಕೊಂಡಿದ್ದಾರೆ. ಐದು ಗ್ಯಾರಂಟಿಗಳಾದ ಗೃಹ ಜ್ಯೋತಿ, ಗೃಹ ಲಕ್ಷ್ಮಿಯಲ್ಲಿ ಐದನೇ ಸ್ಥಾನ, ಶಕ್ತಿ ಯೋಜನೆ, ಅನ್ನ ಭಾಗ್ಯ ಹಾಗೂ ಯುವನಿಧಿ ಯೋಜನೆಯಲ್ಲಿ 7ನೇ ಸ್ಥಾನ ಪಡೆದಿದ್ದು, ಯೋಜನೆಗಳನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ಈ ಎಲ್ಲಾ ಫಲಾನುಭವಿಗಳನ್ನು ಸಂಘಟನೆ ಮಾಡಿ, ಜಿಲ್ಲಾ ಕೇಂದ್ರದಲ್ಲಿ ಮಾ.೧೨ ರಂದು ಜಿಲ್ಲಾಡಳಿತದಿಂದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಆಯೋಜನೆ ಮಾಡಲಾಗಿದೆ ಎಂದರು.

ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಉಪಾಧ್ಯಕ್ಷ ಬಿ.ಕೆ. ರವಿಕುಮಾರ್ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್‌, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ಗುರುಸ್ವಾಮಿ, ಮಹಮದ್ ಅಸ್ಗರ್ ಮುನ್ನಾ, ಎಸ್‌ಪಿಕೆ ಉಮೇಶ್, ಕಾಗಲವಾಡಿ ಚಂದ್ರು ಇದ್ದರು. ನಾಳೆ ದಿ.ಧ್ರುವನಾರಾಯಣ ಪುಣ್ಯಸ್ಮರಣೆ:

ಚಾಮರಾಜನಗರ: ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ದಿ.ಆರ್. ಧ್ರುವನಾರಾಯಣರವರು ನಿಧನರಾಗಿ ಮಾ.೧೧ ಕ್ಕೆ ಒಂದು ವರ್ಷ ತುಂಬಲಿದೆ. ನಮ್ಮನ್ನಗಲಿದ ನಾಯಕರ ಪ್ರಥಮ ವರ್ಷದ ಪುಣ್ಯಸ್ಮರಣೆಯನ್ನು ಜಿಲ್ಲೆಯ ಪ್ರತಿ ಹಳ್ಳಿಹಳ್ಳಿಗಳಲ್ಲಿ ಅವರ ಭಾವಚಿತ್ರವಿಟ್ಟು ಪೂಜೆ ಪುಷ್ಪಾರ್ಚನೆ ಮಾಡಿ ಅವರ ಸೇವೆಯನ್ನು ಸ್ಮರಿಸಿಕೊಳ್ಳುವ ಕೆಲಸ ಮಾಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ ತಿಳಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆಯಲಾಗಿಗ್ಗ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಾ. ೧೧ ರಂದು ಆಯಾ ಬ್ಲಾಕ್ ಮಟ್ಟದಲ್ಲಿ ಧ್ರುವನಾರಾಯಣ ಭಾವಚಿತ್ರವಿಟ್ಟು ಪೂಜೆ ಸಲ್ಲಿಸುವ ಜೊತೆಗೆ ಅನ್ನ ಸಂತರ್ಪಣೆ ಹಾಗೂ ಅವರ ಸೇವೆಯನ್ನು ಗುಣಗಾಣ ಮಾಡಬೇಕು. ನಗರಸಭೆಯ ೩೧ ವಾರ್ಡುಗಳು ಹಾಗೂ ಪ್ರತಿ ಹಳ್ಳಿ ಹಳ್ಳಿಗಳಲ್ಲಿ ಅವರ ಅಭಿಮಾನಿಗಳು ಹಾಗೂ ಪಕ್ಷದ ಮುಖಂಡರು ಧ್ರುವನಾರಾಯಣರಿಗೆ ಗೌರವ ಸಲ್ಲಿಸಬೇಕು. ಜಿಲ್ಲಾ ಕೇಂದ್ರದಲ್ಲಿ ದಿನ ಪೂರ್ತಿ ವಿವಿಧ ಘಟಕಗಳು ಕಾರ್ಯಕ್ರಮಗಳನ್ನು ಆಯೋಜನೆ ಮಾಡುವಂತೆ ತಿಳಿಸಲಾಗಿದೆ ಎಂದರು. ಹೆಗ್ಗವಾಡಿಯಲ್ಲಿಯೂ ಪುಣ್ಯಸ್ಮರಣೆ:

ಸ್ವಗ್ರಾಮವಾದ ಹೆಗ್ಗವಾಡಿಯಲ್ಲಿ ಮಾ.೧೨ ರಂದು ನಡೆಯುವ ದಿ.ಧ್ರುವನಾರಾಯಣ ಪ್ರಥಮ ವರ್ಷದ ಪುಣ್ಯಾರಾಧನೆಯನ್ನು ಅವರ ಪುತ್ರ ಶಾಸಕ ದರ್ಶನ್ ಧ್ರುವನಾರಾಯಣ ಆಯೋಜನೆ ಮಾಡಿದ್ದಾರೆ. ಈ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್, ಸಚಿವರು ಹಾಗೂ ಶಾಸಕರು ಭಾಗವಹಿಸಿದ್ದಾರೆ ಎಂದು ತಿಳಿಸಿದರು.