ಸಾರಾಂಶ
ಕ್ಷಣದಿಂದ ಮಾತ್ರ ದೇಶದ ಪ್ರಗತಿ ಸಾಧ್ಯ,ಇದರ ಜತೆ ಶಿಸ್ತು, ಸಂಯಮ, ಸಂಸ್ಕಾರ ರೂಪಿಸಿಕೊಳ್ಳುವ ಮೂಲಕ ವಿದ್ಯಾವಂತರಾಗಿ ಉತ್ತಮ ಭವಿಷ್ಯ ಕಟ್ಟಿಕೊಳ್ಳಬೇಕು.
ಕನ್ನಡಪ್ರಭವಾರ್ತೆ ಪಾವಗಡ
ಶಿಕ್ಷಣದಿಂದ ಮಾತ್ರ ದೇಶದ ಪ್ರಗತಿ ಸಾಧ್ಯ,ಇದರ ಜತೆ ಶಿಸ್ತು, ಸಂಯಮ, ಸಂಸ್ಕಾರ ರೂಪಿಸಿಕೊಳ್ಳುವ ಮೂಲಕ ವಿದ್ಯಾವಂತರಾಗಿ ಉತ್ತಮ ಭವಿಷ್ಯ ಕಟ್ಟಿಕೊಳ್ಳುವಂತೆ ಶಾಸಕ ಎಚ್.ವಿ.ವೆಂಕಟೇಶ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಬುಧವಾರ ಪಾವಗಡ ನಗರದ ಸಮೀಪವಿರುವ ಕುರುಬರಹಳ್ಳಿ ಗೇಟ್ ಬಳಿಯ ಸರ್ಕಾರಿ ಮಹಿಳಾ ಪ್ರಥಮ ಕಾಲೇಜ್‌ನಲ್ಲಿ ಹಮ್ಮಿಕೊಂಡಿದ್ದ ಪ್ರಸಕ್ತ ಸಾಲಿನ ಸಮಾರೋಪ ಸಮಾರಂಭದ ಉದ್ಘಾಟನೆ ನೆರೆವೇರಿಸಿ ಮಾತನಾಡಿದರು.
ಪ್ರಾಂಶುಪಾಲ ಮಾರಪ್ಪ , ವಿದ್ಯಾಬ್ಯಾಸದಿಂದ ಆಗುವ ಪ್ರಯೋಜನೆ ಮತ್ತು ಆಧುನಿಕ ಯುಗದಲ್ಲಿ ಶಿಕ್ಷಣದ ಮಹತ್ವ ಹಾಗೂ ಸ್ವರ್ಧಾತ್ಮಕ ಯುಗದಲ್ಲಿ ಶೈಕ್ಷಣಿಕವಾಗಿ ಯಾವ ರೀತಿ ಸಾಧನೆ ಮಾಡಬೇಕೆಂಬ ವಿಚಾರ ಕುರಿತು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ಈ ವೇಳೆ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೇಶ್ ಬಾಬು,ಪುರಸಭೆ ಮಾಜಿ ಅಧ್ಯಕ್ಷ ಶಂಕರ್ ರೆಡ್ಡಿ , ಡಾ.ಮುರುಳೀಧರ ನಿವೃತ್ತ ಪ್ರಾಂಶುಪಾಲ ಚಿಕ್ಕಣ್ಣ, ಬತ್ತಿನೇನಿ ನಾಗೇಂದ್ರರಾವ್, ಮೈಲಪ್ಪ, ಅಮರ್ ಹಾಗೂ ಕಾಲೇಜು ಆಡಳಿತ ಮಂಡಳಿಯ ಸದಸ್ಯರು ಇತರೆ ಗಣ್ಯರು ಉಪಸ್ಥಿತರಿದ್ದರು.