ಸಾರಾಂಶ
ಚನ್ನಪಟ್ಟಣ: ದನದ ಕೊಟ್ಟಿಗೆಯಲ್ಲಿ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಕರಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಚನ್ನಪಟ್ಟಣ: ದನದ ಕೊಟ್ಟಿಗೆಯಲ್ಲಿ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಕರಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ರಾಜು(೩೪), ಲಕ್ಷ್ಮೀ(೨೯) ನೇಣಿಗೆ ಶರಣಾದ ದಂಪತಿ. ರಾಜು ಹಾಗೂ ಲಕ್ಷ್ಮೀ 8 ವರ್ಷದ ಹಿಂದೆ ಮದುವೆಯಾಗಿದ್ದು, ಇವರಿಗೆ ಮೂರು ವರ್ಷದ ಗಂಡು ಮಗುವಿದೆ. ದಂಪತಿ ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಶಂಕೆ ವ್ಯಕ್ತವಾಗಿದೆ. ಮನೆಯ ದನದ ಕೊಟ್ಟಿಗೆಯಲ್ಲಿ ನೇಣಿಗೆ ಶರಣಾಗಿದ್ದು, ಮಗುವಿನ ಅಳು ಕೇಳಿದ ಅಕ್ಕಪಕ್ಕದ ಮನೆಯವರು ಹೋಗಿ ನೋಡಿದಾಗ ಇವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ಸ್ಥಳಕ್ಕೆ ಅಕ್ಕೂರು ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.