ಸಿಲಿಂಡರ್‌ ಸ್ಪೋಟದಲ್ಲಿ ಗಾಯಗೊಂಡಿದ್ದ ದಂಪತಿ ಸಾವು

| Published : May 26 2024, 01:33 AM IST

ಸಾರಾಂಶ

ಬೆಳಗಾವಿ: ಸಿಲಿಂಡರ್ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದಂಪತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದ ಕಲ್ಲಪ್ಪ ಪಾಟೀಲ್ (62), ಸುಮನ್ ಪಾಟೀಲ್(60) ಮೃತ ದಂಪತಿ. ಮೇ.18ರಂದು ಸಿಲಿಂಡರ್ ಸೋರಿಕೆಯಿಂದ ಲೈಟ್ ಆನ್ ಮಾಡುತ್ತಿದ್ದಂತೆ ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟವಾಗಿತ್ತು.

ಬೆಳಗಾವಿ: ಸಿಲಿಂಡರ್ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದಂಪತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದ ಕಲ್ಲಪ್ಪ ಪಾಟೀಲ್ (62), ಸುಮನ್ ಪಾಟೀಲ್(60) ಮೃತ ದಂಪತಿ. ಮೇ.18ರಂದು ಸಿಲಿಂಡರ್ ಸೋರಿಕೆಯಿಂದ ಲೈಟ್ ಆನ್ ಮಾಡುತ್ತಿದ್ದಂತೆ ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟವಾಗಿತ್ತು. ಸಿಲಿಂಡರ್ ಸ್ಫೋಟದ ತೀವ್ರತೆಗೆ ಗಂಭೀರವಾರಗಿ ಗಾಯಗೊಂಡಿದ್ದ ದಂಪತಿಯನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಬೆಳಗ್ಗೆ ಇಬ್ಬರೂ ಕೊನೆಯುಸಿರೆಳೆದಿದ್ದಾರೆ. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.