ಮಲೆ ಮಹದೇಶ್ವರನಿಗೆ ಹರಕೆ ಹೊತ್ತು ಭಕ್ತರಿಂದ ವಿವಿಧ ಪೂಜಾ ಕಾರ್ಯಕ್ರಮಗಳಾದ ಎಳ್ಳು ಅಮಾವಾಸ್ಯೆ ಅಂಗವಾಗಿ ಬೆಳಗಿನ ಜಾವ ನಾಲ್ಕು ಗಂಟೆವರೆಗೆ ಮಲೆ ಮಹದೇಶ್ವರನಿಗೆ ಎಣ್ಣೆ ಮಜ್ಜನ ಸೇವೆ, ಅಭಿಷೇಕ, ಮಹಾರುದ್ರಾಭಿಷೇಕ ನಡೆದವು.

ಕನ್ನಡಪ್ರಭ ವಾರ್ತೆ ಹನೂರು

ಮಲೆ ಮಹದೇಶ್ವರ ಬೆಟ್ಟಕ್ಕೆ ಎಳ್ಳು ಅಮಾವಾಸ್ಯೆ ಪ್ರಯುಕ್ತ ಭಕ್ತರ ದಂಡು ವಿವಿಧ ಪೂಜಾ ಕಾರ್ಯಗಳು ವಿಧಿ ವಿಧಾನಗಳೊಂದಿಗೆ ಗುರುವಾರ ತಡರಾತ್ರಿಯಿಂದ ಶುಕ್ರವಾರ ಬೆಳಗಿನ ಜಾವದವರಗೆ ನಡೆಯಿತು.

ತಾಲೂಕಿನ ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಪ್ರಖ್ಯಾತ ಪುರಾಣ ದೇವಾಲಯಗಳಲ್ಲಿ ಒಂದಾದ ಮಲೆ ಮಹದೇಶ್ವರ ಬೆಟ್ಟ ಎಳ್ಳು ಅಮಾವಾಸ್ಯೆ ಅಂಗವಾಗಿ ಮಲೆ ಮಹದೇಶ್ವರ ಬೆಟ್ಟ ಪ್ರಾಧಿಕಾರ ವತಿಯಿಂದ ಆಯೋಜಿಸಲಾಗಿದ್ದ ವಿವಿಧ ಪೂಜಾ ಕಾರ್ಯಕ್ರಮಗಳು ಧಾರ್ಮಿಕವಾಗಿ ನಡೆಯಿತು. ವಿವಿಧ ಸೇವೆಗಳು:

ಮಲೆ ಮಹದೇಶ್ವರನಿಗೆ ಹರಕೆ ಹೊತ್ತು ಭಕ್ತರಿಂದ ವಿವಿಧ ಪೂಜಾ ಕಾರ್ಯಕ್ರಮಗಳಾದ ಎಳ್ಳು ಅಮಾವಾಸ್ಯೆ ಅಂಗವಾಗಿ ಬೆಳಗಿನ ಜಾವ ನಾಲ್ಕು ಗಂಟೆವರೆಗೆ ಮಲೆ ಮಹದೇಶ್ವರನಿಗೆ ಎಣ್ಣೆ ಮಜ್ಜನ ಸೇವೆ, ಅಭಿಷೇಕ, ಮಹಾರುದ್ರಾಭಿಷೇಕ, ಪಂಚಕಳಶ, ನವರತ್ನ ಕಿರೀಟಗಾರನೇ, ರುದ್ರಾಭಿಷೇಕ ಶಿವಅಷ್ಟೋತ್ತರ, ನೈವೇದ್ಯ ಸೇವೆ, ನಾಗಾಭಿಷೇಕ, ಅಂತರ ಗಂಗೋತ್ಸವ ಸೇವೆ, ಭಸ್ಮಸೇವೆ, ಪಂಚಕಜ್ಜಾಯ ಸೇವೆ, ಲಾಡುಸೇವೆ ಹಾಗೂ ಮಲೆ ಮಹದೇಶ್ವರನಿಗೆ ಉತ್ಸವ ಮೂರ್ತಿಗಳಿಗೆ ಹುಲಿವಾಹನ ಬಸವನ ರುದ್ರಾಕ್ಷಿ ಮಂಟಪೋತ್ಸವ ವಿವಿಧ ಉತ್ಸವಗಳು ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ಪೂಜಾ ಕಾರ್ಯಕ್ರಮಗಳು ನಡೆದವು. ನಂತರ ಬೆಳಗ್ಗೆ ಆರು ಗಂಟೆಗೆ ಮಹಾ ಮಂಗಳಾರತಿ ಯೊಂದಿಗೆ ಪೂಜಾ ಕಾರ್ಯಕ್ರಮಗಳು ಜರುಗಿತು.

ಎಳ್ಳು ಅಮವಾಸ್ಯೆ ಭಕ್ತರ ದಂಡು:

ಮಲೆ ಮಾದೇಶ್ವರನ ಆರಾಧ್ಯ ದೈವ ಭಕ್ತರಿಗೆ ಎಳ್ಳು ಅಮವಾಸೆ ಅಂಗವಾಗಿ ರಾಜ್ಯದ ವಿವಿಧತೆಯಿಂದ ಹಾಗೂ ಜಿಲ್ಲೆಯ ವಿವಿಧ ತಾಲೂಕುಗಳಿಂದಲೂ ಮತ್ತು ತಮಿಳುನಾಡಿನಿಂದಲೂ ಪೂಜೆಗೆ ನೆರದಿದ್ದ ಭಕ್ತರು ಭೂಮಿತಾಯಿಯನ್ನು ನಂಬಿ ವರ್ಷವಿಡಿ ದುಡಿಯುವ ರೈತ ತನ್ನ ಪರಿಶ್ರಮಕ್ಕೆ ತಕ್ಕ ಫಲವನ್ನು ನೀಡುವಂತೆ ಭೂಮಿತಾಯಿಯನ್ನು ಪೂಜಿಸುವ ದಿನವಾಗಿರುವುದರಿಂದ ಮಾದೇಶ್ವರನಿಗೆ ಪೂಜೆ ಸಲ್ಲಿಸಿ ರೈತರು ಮಾದಪ್ಪನ ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ಮಲೆ ಮಹದೇಶ್ವರನ ದರ್ಶನ ಪಡೆದು ತಮ್ಮ ಹರಕೆ ಕಾಣಿಕೆಗಳನ್ನು ಸಲ್ಲಿಸುವ ಮೂಲಕ ಭಕ್ತರು ಉಘೇ ಉಘೇ ಎಂದರು.

ತುಂಬಿ ತುಳುಕಿದ ವಸತಿ ನಿಲಯಗಳು:

ಎಳ್ಳು ಅಮಾವಾಸ್ಯೆ ಪೂಜೆಗಾಗಿ ವಿವಿಧಡೆಯಿಂದ ವಾಹನಗಳಲ್ಲಿ ಬಂದಿದ್ದ ಭಕ್ತರು ಗುರುವಾರ ರಾತ್ರಿ ವಾಸ್ತವಕ್ಕೆ ಬಂದು ವಿವಿಧ ವಸತಿ ನಿಲಯಗಳಲ್ಲಿ ವಾಸ್ತವ್ಯ ಮಾಡುವ ಮೂಲಕ ಮಲೆ ಮಾದೇಶ್ವರ ಬೆಟ್ಟಕ್ಕೆ ಭಕ್ತರ ದಂಡೆ ಹರಿದು ಬಂದಿತ್ತು.

ವಿಶೇಷ ದಾಸೋಹ ವ್ಯವಸ್ಥೆ:

ಮಲೆ ಮಾದೇಶ್ವರನ ಬೆಟ್ಟಕ್ಕೆ ಬರುವ ಭಕ್ತರಿಗಾಗಿ ದಾಸೋಹ ಭವನದಲ್ಲಿ ವಿಶೇಷ ದಾಸೋಹ ವ್ಯವಸ್ಥೆಯನ್ನು ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರ ವ್ಯವಸ್ಥೆಯನ್ನು ಕಲ್ಪಿಸಿತು.

ನಾಗಮಲ್ಲೇಶ್ವರನಿಗೆ ವಿಶೇಷ ಪೂಜೆ:

ಎಳ್ಳು ಅಮಾವಾಸ್ಯೆ ಪ್ರಯುಕ್ತ ರಾಜ್ಯದ ವಿವಿಧತೆಯಿಂದ ಮಲೆ ಮಾದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರು ನಾಗಮಲೆಗೆ ಕಾಲ್ನಡಿಗೆಯಲ್ಲಿ ತೆರಳುವ ಮೂಲಕ ಮಾದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪುನೀತರಾದರು. ಮಾದೇಶ್ವರನ ಉತ್ಸವ ಮೂರ್ತಿ ಮೆರವಣಿಗೆ:

ಹಿಟ್ಟನಹಳ್ಳಿ ಕೊಪ್ಪಲು ಗ್ರಾಮದ 400 ಹೆಚ್ಚು ಮಾದಪ್ಪನ ಭಕ್ತಾದಿಗಳು ಪಾದಯಾತ್ರೆಯಲ್ಲಿ ಮಲೆ ಮಾದೇಶ್ವರ ಬೆಟ್ಟಕ್ಕೆ ಆಗಮಿಸುವ ಮೂಲಕ ತೆರೆದ ಟ್ರ್ಯಾಕ್ಟರ್ ವಾಹನದಲ್ಲಿ ಮಲೆ ಮಾದೇಶ್ವರ ವಿಗ್ರಹ ಮೂರ್ತಿಯನ್ನು ಮೆರವಣಿಗೆ ಮೂಲಕ ಮಾದೇಶ್ವರನ ದೇವಾಲಯದ ಸುತ್ತಲೂ ಪ್ರದಕ್ಷಿಣೆ ಹಾಕಿ ಮಾದೇಶ್ವರನಿಗೆ ತಮ್ಮ ಇಷ್ಟಾರ್ಥ ಸಿದ್ಧಿಸುವಂತೆ ಭಕ್ತರು ನಿವೇದನೆ ಮಾಡಿಕೊಂಡರು.

ಹಿರಿಯ ನಾಗರಿಕರಿಗೆ ಪ್ರತ್ಯೇಕ ಕೌಂಟರ್:

ಮಲೆ ಮಾದೇಶ್ವರ ಬೆಟ್ಟಕ್ಕೆ ಆಗಮಿಸುವ ಹಿರಿಯ ಭಕ್ತಾದಿಗಳಿಗೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ವಿಶೇಷ ಕೌಂಟರ್‌ನಲ್ಲಿ ಟಿಕೆಟ್‌ಗಳನ್ನು ನೀಡುವ ಮೂಲಕ ವಿಶೇಷ ದರ್ಶನ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿತ್ತು ಮಾದೇಶ್ವರನ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಸಹ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿತ್ತು.

------19ಸಿಎಚ್ಎನ್13 ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಎಳ್ಳು ಅಮಾವಾಸ್ಯೆ ಅಂಗವಾಗಿ ನಡೆದ ವಿವಿಧ ಉತ್ಸವಗಳಲ್ಲಿ ಪಾಲ್ಗೊಂಡಿದ್ದ ಭಕ್ತರು .

------19ಸಿಎಚ್ಎನ್‌16

ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಎಳ್ಳು ಅಮಾವಾಸ್ಯೆ ಅಂಗವಾಗಿ ಜಮಾವಣೆಗೊಂಡಿದ್ದ ಭಕ್ತರು ಪೂಜೆ ಸಲ್ಲಿಸಿದರು.

-----------

19ಸಿಎಚ್ಎನ್‌14

ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಹಿಟ್ಟನಹಳ್ಳಿ ಕೊಪ್ಪಲು ಗ್ರಾಮದ ಮಾದಪ್ಪನ ಭಕ್ತಾದಿಗಳು ಟ್ಯಾಕ್ಟರ್ ನಲ್ಲಿ ಉತ್ಸವ ಮೂರ್ತಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಮಾದಪ್ಪನ ಭಕ್ತರು.

-------------- 19ಸಿಎಚ್ಎನ್‌15

ಹನೂರು ಮಲೆ ಮಹದೇಶ್ವರ ಬೆಟ್ಟ ಎಳ್ಳು ಅಮಾವಾಸ್ಯೆ ಪೂಜೆಗೆ ಬಂದಿದ್ದ ಹಿರಿಯ ನಾಗರಿಕರಿಗೆ ಪ್ರತ್ಯೇಕ ಟಿಕೆಟ್ ಕೌಂಟರ್ ವ್ಯವಸ್ಥೆ ಕಲ್ಪಿಸಲಾಗಿತ್ತು .

-----------