ದೇಶ ಭಕ್ತರ- ದೇಶ ವಿರೋಧಿಗಳ ನಡುವಿನ ನಿರ್ಣಾಯಕ ಚುನಾವಣೆ

| Published : Mar 23 2024, 01:05 AM IST

ದೇಶ ಭಕ್ತರ- ದೇಶ ವಿರೋಧಿಗಳ ನಡುವಿನ ನಿರ್ಣಾಯಕ ಚುನಾವಣೆ
Share this Article
  • FB
  • TW
  • Linkdin
  • Email

ಸಾರಾಂಶ

ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಾತನಾಡಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರನ್ನು ದೊಡ್ಡ ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ನಾವೆಲ್ಲ ಸಂಕಲ್ಪ ಮಾಡಿದ್ದೇವೆ ಎಂದರು

ಕನ್ನಡಪ್ರಭ ವಾರ್ತೆ ಪುತ್ತೂರು

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವತಿಯಿಂದ ಇಲ್ಲಿನ ಜೈನ ಭವನದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ ಶುಕ್ರವಾರ ನಡೆಯಿತು.

ಈ ಬಾರಿಯ ಲೋಕಸಭಾ ಚುನಾವಣೆಯು ಹಿಂದುತ್ವದ ಪ್ರತಿಷ್ಠೆಯ ಜೊತೆಗೆ ದೇಶ ಭಕ್ತರ ಹಾಗೂ ದೇಶ ವಿರೋಧಿಗಳ ನಡುವಿನ ನಿರ್ಣಾಯಕ ಘಟ್ಟದ ಚುನಾವಣೆಯಾಗಿದೆ. ಹಿಂದುತ್ವಕ್ಕಾಗಿ ಬದುಕೋ ಅಥವಾ ಕುಟುಂಬಕ್ಕಾಗಿ ಬದುಕೋ ಎಂಬುದನ್ನು ನಿರ್ಣಯಿಸುವ ಚುನಾವಣೆ ಇದಾಗಿದೆ ಎಂದು ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು.

ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಬ್ರಿಜೇಶ್ ಚೌಟ ಅವರಿಗೆ ಆಶೀರ್ವಾದ ಮಾಡುವ ಮೂಲಕ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವಂತೆ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದರು.

ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಾತನಾಡಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರನ್ನು ದೊಡ್ಡ ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ನಾವೆಲ್ಲ ಸಂಕಲ್ಪ ಮಾಡಿದ್ದೇವೆ ಎಂದರು. ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಅಧ್ಯಕ್ಷತೆ ವಹಿಸಿದ್ದರು.

ಬಿಜೆಪಿ ವಿಭಾಗ ಸಹ ಸಂಚಾಲಕ ಗೋಪಾಲಕೃಷ್ಣ ಹೇರಳೆ, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಪುತ್ತೂರು ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಚನಿಲ ತಿಮ್ಮಪ್ಪ ಶೆಟ್ಟಿ, ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಸುಲೋಚನಾ ಭಟ್, ಚುನಾವಣಾ ನಿರ್ವಾಹಣಾ ಸಮಿತಿ ಸಹ ಸಂಚಾಲಕ ಉಮೇಶ್ ಕೋಡಿಬೈಲು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಪುತ್ತೂರು ಮಂಡಲದ ಉಸ್ತುವಾರಿ ಸುನಿಲ್ ಆಳ್ವ ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆರ್ ಸಿ ನಾರಾಯಣ, ಜಿಲ್ಲಾ ಬಿಜೆಪಿ ಸದಸ್ಯೆ ವಿದ್ಯಾ ಆರ್ ಗೌರಿ, ಜಿಲ್ಲಾ ಎಸ್ಟಿ ಮೋರ್ಚಾ ಕಾರ್ಯದರ್ಶಿ ಹರೀಶ್ ಬಿಜತ್ರೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಗರ ಮಂಡಲ ಅಧ್ಯಕ್ಷ ಪಿ.ಜಿ. ಜಗನ್ನಿವಾಸ್ ರಾವ್ ಸ್ವಾಗತಿಸಿದರು. ರಾಜೇಶ್ ಬನ್ನೂರು ನಿರೂಪಿಸಿದರು.