ಅರ್ಥಪೂರ್ಣ ಹಡಪದ ಅಪ್ಪಣ್ಣ ಜಯಂತಿಗೆ ನಿರ್ಧಾರ

| Published : Jul 12 2024, 01:33 AM IST

ಅರ್ಥಪೂರ್ಣ ಹಡಪದ ಅಪ್ಪಣ್ಣ ಜಯಂತಿಗೆ ನಿರ್ಧಾರ
Share this Article
  • FB
  • TW
  • Linkdin
  • Email

ಸಾರಾಂಶ

ಬಾಗಲಕೋಟೆ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಡಪದ ಅಪ್ಪಣ್ಣ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ್ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಬಾಗಲಕೋಟೆ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಡಪದ ಅಪ್ಪಣ್ಣ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಹಡಪದ ಅಪ್ಪಣ್ಣ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹಾಪುರುಷ ಹಡಪದ ಅಪ್ಪಣ್ಣ ಜಯಂತಿ ಜುಲೈ 20 ರಂದು ನವನಗರದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಆಚರಿಸಲಾಗುವುದು. ವೇದಿಕೆ ಕಾರ್ಯಕ್ರಮ ಮುನ್ನ ಜಿಲ್ಲಾಡಳಿತ ಭವನದಿಂದ ಅಂಬೇಡ್ಕರ್ ಭವನದವರೆಗೆ ವಿವಿಧ ಜಾನಪದ ಕಲಾ ತಂಡ ಹಾಗೂ ಪೂರ್ಣಕುಂಭ ಮೇಳಗಳೊಂದಿಗೆ ಭಾವಚಿತ್ರ ಮೆರವಣಿಗೆ ಇರುವುದು. ವೇದಿಕೆ ಕಾರ್ಯಕ್ರಮದಲ್ಲಿ ನುರಿತ ಉಪನ್ಯಾಸಕರಿಂದ ಉಪನ್ಯಾಸ, ಸಂಗೀತ ಮತ್ತು ಸಾಧನೆಗೈದ ಮಹನೀಯರಿಗೆ ಸನ್ಮಾನ ಜರುಗುವುದು ಎಂದರು.

ಕಾರ್ಯಕ್ರಮಕ್ಕೆ ಶಿಷ್ಟಾಚಾರದಂತೆ ಜನಪ್ರತಿನಿಧಿಗಳು ಮತ್ತು ಗಣ್ಯಮಾನ್ಯರನ್ನು ಆಮಂತ್ರಣ ಪತ್ರಿಕೆಗಳನ್ನು ನೀಡಿ ಆಹ್ವಾನಿಸಲಾಗುವುದು. ಕಾರ್ಯಕ್ರಮ ಅರ್ಥಗರ್ಭಿತವಾಗಿ ಜರುಗಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಎಲ್ಲೂ ಲೋಪದೋಷಗಳು ಆಗದಂತೆ ಕಾರ್ಯನಿರ್ವಹಿಸಬೇಕು. ಸಮುದಾಯ ಬಾಂಧವರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಹಡಪದ ಅಪ್ಪಣ್ಣ ಜಯಂತಿ ಆಚರಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಜೈನಾಪೂರ ಹಾಗೂ ಹಡಪದ ಸಮಾಜದ ಮುಖಂಡರು ಉಪಸ್ಥಿತರಿದ್ದರು.