ಸಂಸತ್ ಕ್ರೀಡೋತ್ಸವದ ಭಾಗವಾಗಿ ಶನಿವಾರ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ನಮೋ ಬ್ಯಾಡ್ಮಿಟನ್ ಟೂರ್ನಮೆಂಟ್‌ನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟ ಉದ್ಘಾಟಿಸಿದರು.
ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆರೋಗ್ಯಪೂರ್ಣ ವಿಕಸಿತ ಭಾರತದ ಪರಿಕಲ್ಪನೆಯ ಸಂಸತ್ ಕ್ರೀಡೋತ್ಸವದ ಭಾಗವಾಗಿ ಶನಿವಾರ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ನಮೋ ಬ್ಯಾಡ್ಮಿಟನ್ ಟೂರ್ನಮೆಂಟ್‌ನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟ ಉದ್ಘಾಟಿಸಿದರು.ಈ ವೇಳೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಚಿಂತನೆಯ ವಿಕಸಿತ ಭಾರತ ನಿರ್ಮಾಣವಾಗಬೇಕಾದರೆ ಮೊದಲು ಆರೋಗ್ಯವಂತ ಭಾರತ ನಿರ್ಮಾಣವಾಗಬೇಕಿದೆ. ಅಂಥಹ ಆರೋಗ್ಯವಂಥ ಭಾರತ ನಿರ್ಮಾಣದ ಪ್ರಯತ್ನವೇ ಈ ಸಂಸತ್ ಕ್ರೀಡೋತ್ಸವದ ಪ್ರಯುಕ್ತ ಆಯೋಜಿಸಿರುವ ಈ ನಮೋ ಕ್ರೀಡಾ ಸ್ಪರ್ಧೆಗಳು. ಕಳೆದ ವಾರ ನಮೋ ಚೆಸ್ ಟೂರ್ನಿ ಆಯೋಜಿಸಲಾಗಿದ್ದು, ಇದೀಗ ನಮೋ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಚಾಲನೆ ನೀಡಲಾಗಿದೆ. ನ.30ರಂದು ನಮೋ ವಾಲಿಬಾಲ್ ಟೂರ್ನಿ ನಡೆಯಲಿದೆ ಎಂದು ಹೇಳಿದರು.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ದೇಶ ಈಗ ಎಲ್ಲ ಕ್ಷೇತ್ರಗಳಲ್ಲಿಯೂ ಪ್ರಗತಿಯ ಹೆಜ್ಜೆ ಹಾಕುತ್ತಿದೆ. ಇಂತಹ ಕಾಲಘಟದಲ್ಲಿ ಕೇವಲ ಫಿಟ್ ಇಂಡಿಯಾ ಭಾರತ ಮಾತ್ರ ವಿಕಸಿತ ಭಾರತವಾಗಿ ರೂಪುಗೊಳ್ಳುವುದಕ್ಕೆ ಸಾಧ್ಯ. ಅಲ್ಲದೇ ಕೇವಲ ಒಂದು ಯಂಗ್ ಇಂಡಿಯಾ ಮಾತ್ರ ವಿಕಸಿತ ಭಾರತವಾಗಲಿದೆ ಎಂದರು.
ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದ ಸಂಸತ್ ಕ್ರೀಡೋತ್ಸ ಯುವ ಕ್ರೀಡಾಪಟುಗಳಿಗೆ ಹೆಚ್ಚಿನ ಉತ್ತೇಜನ ನೀಡುತ್ತಿದೆ ಎಂದರು.